ಹಿಜಾಬ್ ಧರಿಸುವಂತೆ ಪ್ರಚೋದನೆ: ಮೂವರ ಬಂಧನ
Team Udayavani, Feb 19, 2022, 10:30 PM IST
ಬೆಂಗಳೂರು: ಯಲಹಂಕ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸುವಂತೆ ಪ್ರಚೋದನೆ ನೀಡಿದ ಆರೋಪದ ಮೇಲೆ ಮೂವರ ವಿರುದ್ಧ ಯಲಹಂಕ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಆರೋಪಿಗಳಾದ ಶಿವಾಜಿನಗರದ ನಿವಾಸಿ ಸೈಯ್ಯದ್ ಜುನೇದ್ (23), ಸೂರಜ್ ದೀಪ್ತಾ (29), ಸಚ್ಚಿ ಹೆಗೆª (23) ವಿರುದ್ಧ ಎಫ್ಐಅರ್ ದಾಖಲಾಗಿದೆ.
ಶುಕ್ರವಾರ ಬೆಳಗ್ಗೆ 11 ಗಂಟೆಗೆ ಯಲಹಂಕ ಸರ್ಕಾರಿ ಪಿಯು ಹಾಗೂ ಪದವಿ ಕಾಲೇಜು ಬಳಿ ಯಲಹಂಕ ಪಿಎಸ್ಐ ಸುನೀಲ್ ಕುಮಾರ್ ಕರ್ತವ್ಯ ನಿರ್ವಹಿಸುತ್ತಿದ್ದರು. ಆ ವೇಳೆ ಕಾಲೇಜು ಬಳಿ ನಿಂತಿದ್ದ ಆರೋಪಿಗಳು ಕಾಲೇಜಿಗೆ ಬರುವ ವಿದ್ಯಾರ್ಥಿಗಳನ್ನು ಒಗ್ಗೂಡಿಸಿಕೊಂಡು ಹಿಜಾಬ್ ಧರಿಸಿವಂತೆ ಪ್ರಚೋದನೆ ನೀಡುತ್ತಿದ್ದರು.
ಕಾಲೇಜು ಸುತ್ತಲಿನ ಪ್ರದೇಶದಲ್ಲಿ ಜೋರಾಗಿ ಕೂಗಿಕೊಂಡು ಅಶಾಂತಿ ಉಂಟು ಮಾಡುತ್ತಿದ್ದರು. ಅಲ್ಲದೇ, ತಮ್ಮ ಪರಿಚಿತರಿಗೆ ಕರೆ ಮಾಡಿ ಮತ್ತಷ್ಟು ಜನರನ್ನು ಸ್ಥಳಕ್ಕೆ ಕರೆದುಕೊಂಡು ಬರುವಂತೆ ಮೊಬೈಲ್ಗಳ ಮೂಲಕ ಸೂಚಿಸುತ್ತಿದ್ದರು. ಶಾಂತಿ, ನೆಮ್ಮದಿ ಕದಡುತ್ತಾ ಸಾರ್ವಜನಿಕ ತೊಂದರೆ ನೀಡುತ್ತಿದ್ದರು. ಹೀಗೆ ವರ್ತಿಸದಂತೆ ಆರೋಪಿಗಳಿಗೆ ಎಚ್ಚರಿಕೆ ನೀಡಿದರೂ ಲೆಕ್ಕಿಸದೇ ಹಿಜಾಬ್ ಧರಿಸುವಂತೆ ಜೋರಾಗಿ ಕೂಗಾಡುತ್ತಿದ್ದರಿಂದ ದೂರು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ