ಶ್ರೀಲಂಕಾ ವಿರುದ್ಧದ ಸರಣಿ: ಲಕ್ನೋ ತಲುಪಿದ ಭಾರತ ತಂಡ
Team Udayavani, Feb 23, 2022, 6:35 AM IST
ಲಕ್ನೋ: ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಯನ್ನು ವಶಪಡಿಸಿಕೊಂಡಿರುವ ಬೆನ್ನಲ್ಲೇ ಭಾರತ ಕ್ರಿಕೆಟ್ ತಂಡ ಶ್ರೀಲಂಕಾ ವಿರುದ್ಧದ ಸರಣಿಗೆ ಸಜ್ಜಾಗಿದೆ. ರೋಹಿತ್ ಶರ್ಮ ಪಡೆ ಮಂಗಳವಾರ ಲಕ್ನೋಗೆ ಬಂದಿಳಿದಿದೆ.
ಫೆ. 24 ರ ಟಿ20 ಪಂದ್ಯದ ಮೂಲಕ ಸರಣಿಗೆ ಚಾಲನೆ ಸಿಗಲಿದೆ. ರೋಹಿತ್ ಶರ್ಮ, ಇಶಾನ್ ಕಿಶನ್, ಸೂರ್ಯಕುಮಾರ್, ಚಹಲ್, ಮಹಮ್ಮದ್ ಸಿರಾಜ್, ಭುವನೆಶ್ವರ್ ಸೇರಿದಂತೆ ವಿಂಡೀಸ್ ವಿರುದ್ಧದ 3ನೇ ಟಿ20ಯಲ್ಲಿ ಪಾಲ್ಗೊಂಡ ಬಹುತೇಕ ಆಟಗಾರರು “ಈಡನ್ ಗಾರ್ಡರ್ನ್ಸ್’ ಬಯೋಬಬಲ್ನಿಂದ ನೇರವಾಗಿ ಲಕ್ನೋಗೆ ಬಂದಿಳಿದಿದ್ದು ಅಭ್ಯಾಸ ಕೂಡ ಆರಂಭಿಸಿದ್ದಾರೆ.
ಸಂಜು ಸ್ಯಾಮ್ಸನ್, ರವೀಂದ್ರ ಜಡೇಜ, ಜಸ್ಪ್ರೀತ್ ಬುಮ್ರಾ ಕೂಡ ಟೀಮ್ ಇಂಡಿಯಾವನ್ನು ಸೇರಿಕೊಂಡಿದ್ದು ಅಭ್ಯಾಸದಲ್ಲಿ ಪಾಲ್ಗೊಂಡರು.
ಟೀಮ್ ಇಂಡಿಯಾ ಆಟಗಾರರು ಲಕ್ನೋಗೆ ಬಂದಿಳಿದಿರುವ ಮತ್ತು ಅಭ್ಯಾಸ ನಡೆಸಿದ ವೀಡಿಯೋ ಮತ್ತು ಫೋಟೋಗಳನ್ನು ಬಿಸಿಸಿಐ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.
ಇದನ್ನೂ ಓದಿ:ಬಾಕ್ಸಿಂಗ್: ಕ್ವಾರ್ಟರ್ ಫೈನಲ್ಗೆ ನೀತು, ಅನಾಮಿಕಾ
ದೀಪಕ್ ಚಹರ್ ಔಟ್
ರವಿವಾರ ನಡೆದ ವಿಂಡೀಸ್ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಸ್ನಾಯು ಸೆಳೆತಕ್ಕೊಳಗಾಗಿದ್ದ ದೀಪಕ್ ಚಹರ್ ಚೇತರಿಸಿಕೊಳ್ಳದ ಕಾರಣ ಅವರನ್ನು ಶ್ರೀಲಂಕಾ ಸರಣಿಯಿಂದ ಕೈಬಿಡಲಾಗಿದೆ ಎಂದು ಬಿಸಿಸಿಐ ಖಚಿತ ಪಡಿಸಿದೆ.
ವಿಂಡೀಸ್ ವಿರುದ್ಧದ ಮೊದಲೆರಡು ಟಿ20 ಪಂದ್ಯಗಳಲ್ಲಿ ಆಡಿದ್ದ ವಿರಾಟ್ ಕೊಹ್ಲಿ ಮತ್ತು ವಿಕೆಟ್ ಕೀಪರ್ ರಿಷಭ್ ಪಂತ್ ಅವರಿಗೆ ವಿಶ್ರಾಂತಿ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು