ಜವಳಿ ಪಾರ್ಕ್‌ ಸ್ಥಾಪನೆಗೆ ಸ್ಥಳ ಗುರುತು

Team Udayavani, Feb 24, 2022, 3:19 PM IST

21land

ರಾಯಚೂರು: ಜಿಲ್ಲೆಯಲ್ಲಿ ಜವಳಿ ಪಾರ್ಕ್‌ ಸ್ಥಾಪನೆಗಾಗಿ ಸಮೀಪದ ಸಿಂಗನೋಡಿ ಹಾಗೂ ಬೋಳಮಾನ ದೊಡ್ಡಿಯಲ್ಲಿ ಸುಮಾರು 690 ಎಕರೆ ಜಮೀನು ಗುರುತಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಕೆ.ಆರ್‌. ದುರಗೇಶ ತಿಳಿಸಿದರು.

ನಗರದ ಡಿಸಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಜಿಲ್ಲಾ ಏಕ ಗವಾಕ್ಷಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಕೈಗಾರಿಕೆಗಳಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ಮೆಗಾ ಟೆಕ್ಸ್‌ಟೈಲ್ಸ್‌ ಪಾರ್ಕ್‌ ಸ್ಥಾಪನೆಗಾಗಿ ಸುಮಾರು ಒಂದು ಸಾವಿರ ಎಕರೆ ಭೂಮಿ, 33/132 ಕೆವಿ ಸಾಮರ್ಥ್ಯದ ವಿದ್ಯುತ್‌ ನಿರಂತರ ಸರಬರಾಜು ವ್ಯವಸ್ಥೆ ಹಾಗೂ 150 ಕೋಟಿ ಲೀಟರ್‌ ನೀರಿನ ವ್ಯವಸ್ಥೆ ಹೊಂದಿರುವ ಸೂಕ್ತ ಭೂಮಿ ಗುರುತಿಸಿ ಸರ್ಕಾರಕ್ಕೆ ಮಾಹಿತಿ ಸಲ್ಲಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಆಯುಕ್ತರು ಹಾಗೂ ನಿರ್ದೇಶಕರು ಜಿಲ್ಲಾಡಳಿತಕ್ಕೆ ಪತ್ರ ಬರೆದಿದ್ದಾರೆ. ದೇವದುರ್ಗ ತಾಲೂಕಿನಲ್ಲಿ ಈಗಾಗಲೇ ಹೆಚ್ಚುವರಿಯಾಗಿ ಒಂದು ಸಾವಿರ ಎಕರೆ ಭೂಮಿಯನ್ನು ಗುರುತಿಸಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಕಾರ್ಖಾನೆ ಮಾಲೀಕರ ಸಂಘದ ಮುಖಂಡರು ಮಾತನಾಡಿ, ಕೈಗಾರಿಕೆಗಳಿಗೆ ಸರಿಯಾಗಿ ನೀರು ಸರಬರಾಜು ಆಗುವುದಿಲ್ಲ ಎಂದು ಸಭೆಯ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಕೈಗಾರಿಕಾ ಜಂಟಿ ನಿರ್ದೇಶಕ, ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಿದ ಘಟಕದವರಿಗೆ ನೀರಿನ ಸಂಪರ್ಕ ಮಾಡಿದ್ದು, ಕೆಲವೊಂದು ಕೈಗಾರಿಕಾ ಘಟಕಗಳಿಗೆ ಬೋರ್‌ವೆಲ್‌ ಮೂಲಕ ನೀರು ಪೂರೈಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲ ಕೈಗಾರಿಕೆಗಳಿಗೆ ನೀರು ಪೂರೈಸಲಾಗುವುದು ಎಂದರು.

ಜಿಲ್ಲಾ ಕೈಗಾರಿಕಾ ಜಂಟಿ ನಿರ್ದೇಶಕ ಬಸವರಾಜ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ ಆರ್‌, ಕೈಮಗ್ಗ ಮತ್ತು ಜವಳಿ ಸಹಾಯಕ ನಿರ್ದೇಶಕ ರಾಘವೇಂದ್ರ ಎಸ್‌.ಹೊಸಮನಿ, ರಾಯಚೂರು ನಗರಸಭೆ ಪೌರಾಯುಕ್ತ ಕೆ.ಮುನಿಸ್ವಾಮಿ, ಜಿಲ್ಲಾ ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕ ಬಾಬು ಬಳಗಾನೂರು, ರೈಸ್‌ ಮಿಲ್‌ ಅಸೋಸಿಯೇಶನ್‌ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಸಾವಿತ್ರಿ ಪುರುಷೋತ್ತಮ ಸೇರಿ ಅನೇಕರು ಸಭೆಯಲ್ಲಿದ್ದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.