ಎಚ್‌ಐವಿ ಮುಕ್ತ ಸಮಾಜಕ್ಕೆ ಗರ್ಭಿಣಿಯರು ಸಹಕರಿಸಲಿ

Team Udayavani, Mar 10, 2022, 2:25 PM IST

19HIV

ರಾಯಚೂರು: ತಾಯಿಯಿಂದ ಮಗುವಿಗೆ ಎಚ್‌ಐವಿ ಸೋಂಕು ಹರಡದಂತೆ ತಡೆಯಲು ಸಮೀಪದ ಸರ್ಕಾರಿ ಆಸ್ಪತ್ರೆಗಳಲ್ಲಿ ಗರ್ಭಿಣಿಯರು ಉಚಿತ ಎಚ್‌ಐವಿ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಎಚ್‌ಐವಿ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ| ಸುರೇಂದ್ರ ಬಾಬು ತಿಳಿಸಿದರು.

ನಗರದ ಜಹೀರಾಬಾದ್‌ ನಗರ ಆರೋಗ್ಯ ಕೇಂದ್ರದಲ್ಲಿ ಕರ್ನಾಟಕ ರಾಜ್ಯ ಏಡ್ಸ್‌ ಪ್ರಿವೆನ್ಶನ್‌ ಸೊಸೈಟಿ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಜಿಲ್ಲಾ ಏಡ್ಸ್‌ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕದಿಂದ ಬುಧವಾರ ಹಮ್ಮಿಕೊಂಡಿದ್ದ ತಾಯಿಯಿಂದ ಮಗುವಿಗೆ ಎಚ್‌ ಐವಿ ಸೋಂಕು ಹರಡುವಿಕೆ ನಿರ್ಮೂಲನೆಗಾಗಿ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಜನರಿಗೆ ಆರೋಗ್ಯದ ಬಗ್ಗೆ ಶಿಕ್ಷಣ ನೀಡುವ ಅಗತ್ಯವಿದೆ. ರೋಗಗಳ ಬಗ್ಗೆ ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು. ಮುನ್ನೆಚ್ಚರಿಕೆ ವಹಿಸಬೇಕು. ಪ್ರತಿ ರೋಗಗಳು ಈಗ ವೈದ್ಯಲೋಕಕ್ಕೆ ಸವಾಲಾಗುತ್ತಿದೆ. ದೇಶದ ವೈದ್ಯರು ರೋಗಗಳ ನಿವಾರಣೆಗೆ ಎಲ್ಲ ತರಹದ ಚಿಕಿತ್ಸೆ ಹಾಗೂ ಔಷಧ ನೀಡುತ್ತಿದ್ದಾರೆ ಎಂದರು.

ಗರ್ಭಧಾರಣೆಗೆ ಮುಂಚೆ ಮಹಿಳೆಯರು ಒಮ್ಮೆ ಸ್ತ್ರೀರೋಗ ತಜ್ಞರನ್ನು ಭೇಟಿ ಮಾಡಿ ತಮ್ಮ ಗರ್ಭಾವಸ್ಥೆಯ 9 ತಿಂಗಳ ಸಮಗ್ರ ಚಿತ್ರಣ ಹೇಗಿರಲಿದೆ ಎಂಬ ಮಾಹಿತಿ ಪಡೆಯಬೇಕು. ಯಾವ ಬಗೆಯ ಆಹಾರಗಳನ್ನು ಸೇವಿಸಬೇಕು, ಯಾವ ಆಹಾರಗಳನ್ನು ತಿನ್ನಲೇಬಾರದು, ಬೆಳಗಿನಿಂದ ಸಂಜೆಯವರೆಗೂ ನಮ್ಮ ಜೀವನ ಶೈಲಿ ಯಾವ ರೀತಿ ಇರಬೇಕು, ಮಧುಮೇಹ, ರಕ್ತದೊತ್ತಡದಂತಹ ಸಮಸ್ಯೆಗಳನ್ನು ಹೇಗೆ ನಿರ್ವಹಣೆ ಮಾಡಬೇಕು ಎಂದು ತಜ್ಞರೊಂದಿಗೆ ಚರ್ಚಿಸಬೇಕು ಎಂದು ತಿಳಿಸಿದರು.

ಈ ವೇಳೆ ತಾಲೂಕು ಆರೋಗ್ಯಾಧಿಕಾರಿ ಡಾ| ಶಕೀರ ಮಾತನಾಡಿ, ಗರ್ಭಿಣಿಯರಲ್ಲಿ ಮತ್ತು ಗರ್ಭಿಣಿಯರಿಂದ ಮಕ್ಕಳಿಗೆ ಎಚ್‌ಐವಿ ಹರಡದಂತೆ ಆರೋಗ್ಯ ಇಲಾಖೆ ಸಾಕಷ್ಟು ಶ್ರಮಿಸುತಿದೆ. ಇದಕ್ಕೆ ಜನರ ಸಹಕಾರವೂ ಮುಖ್ಯ ಎಂದರು. ಇದೇ ವೇಳೆ ಸುಮಾರು 40ಕ್ಕೂ ಹೆಚ್ಚು ಗರ್ಭಿಣಿಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಿತು.

ಕೇಂದ್ರದ ಆರೋಗ್ಯಾ ಧಿಕಾರಿ ಡಾ| ಕಾವ್ಯಶ್ರೀ, ದಂತ ವೈದ್ಯಾಧಿಕಾರಿ ಶರಣಮ್ಮ ಸೇರಿದಂತೆ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಕೇಂದ್ರದ ಸಿಬ್ಬಂದಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.