ಶಿವಗಂಗೆಯಲ್ಲಿ ಹಂತ-ಹಂತವಾಗಿ ಅಭಿವೃದ್ಧಿ: ಆನಂದ್ ಸಿಂಗ್
Team Udayavani, Mar 10, 2022, 10:30 PM IST
ವಿಧಾನಸಭೆ: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿರುವ ಶಿವಗಂಗೆ ಕ್ಷೇತ್ರದಲ್ಲಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ಹಂತ-ಹಂತವಾಗಿ ಅಗತ್ಯವಿರುವ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದಾಗಿ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದರು.
ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ನ ಡಾ.ಕೆ.ಶ್ರೀನಿವಾಸಮೂರ್ತಿ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ಶಿವಗಂಗೆ ಕ್ಷೇತ್ರದಲ್ಲಿ ಇಲ್ಲಿವರೆಗೆ ಮೂರು ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದು, ಮುಂದಿನ ಹಂತದಲ್ಲಿ ಬೆಟ್ಟದ ಮೇಲೆ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ವರದಿ ತರಿಸಿಕೊಂಡು ಅಗತ್ಯ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.
ಸ್ಥಳೀಯ ಶಾಸಕರು, ಶಿವಗಂಗೆ ಬೆಟ್ಟದ ಸಮಗ್ರ ಅಭಿವೃದ್ಧಿಗಾಗಿ 10 ಕೋಟಿ ಅನುದಾನ ಮಂಜೂರು ಮಾಡುವಂತೆ ಮನವಿ ಮಾಡಿದ್ದಾರೆ. ಬೆಟ್ಟದ ಮೇಲೆ ರಸ್ತೆ ನಿರ್ಮಾಣ ಸೇರಿದಂತೆ ಪ್ರವಾಸಿ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು.ಇಲಾಖೆಯಿಂದ ರಾಜ್ಯಾದ್ಯಂತ ಗುರುತಿಸಿರುವ 778 ಪ್ರವಾಸಿ ತಾಣಗಳಲ್ಲಿ ಶಿವಗಂಗೆ ಬೆಟ್ಟವನ್ನು ಗುರುತಿಸಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ