ಸಂಪುಟದಲ್ಲಿರಲು ನಾನೇನು ಗೂಟಹೊಡೆದುಕೊಂಡು ಕೂತಿಲ್ಲ: ಈಶ್ವರಪ್ಪ

Team Udayavani, Mar 13, 2022, 10:00 PM IST

ಸಂಪುಟದಲ್ಲಿರಲು ನಾನೇನು ಗೂಟಹೊಡೆದುಕೊಂಡು ಕೂತಿಲ್ಲ: ಈಶ್ವರಪ್ಪ

ರಾಯಚೂರು: ಸಂಪುಟ ಪುನಾರಚನೆ ಅಥವಾ ವಿಸ್ತರಣೆ ವೇಳೆ ನಾನೂ ಸೇರಿ ಹಿರಿಯರನ್ನು ಸಂಪುಟದಿಂದ ಬಿಟ್ಟರೆ ತಪ್ಪೇನಿಲ್ಲ. ನಾವೇನು ಗೂಟ ಹೊಡೆದುಕೊಂಡು ಕೂತಿಲ್ಲ. ಯುವಕರಿಗೆ ಅವಕಾಶ ನೀಡಲಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು.

ಮಂತ್ರಾಲಯದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ, ಕಾಂಗ್ರೆಸ್‌ಗೆ ಹೋಲಿಕೆ ಮಾಡುವುದು ಸರಿಯಲ್ಲ. ಬಿಜೆಪಿ ಸ್ವರ್ಗವಾದರೆ, ಕಾಂಗ್ರೆಸ್‌ ನರಕ. ಹಿಂದುಳಿದವರಿಗೆ ದ್ರೋಹ ಮಾಡಿದವರು ಯಾರಾದರೂ ಇದ್ದರೆ ಅದು ಮಾಜಿ ಸಿಎಂ ಸಿದ್ದರಾಮಯ್ಯ ಮಾತ್ರ. ರಾಜ್ಯದಲ್ಲಿ ಕಾಂಗ್ರೆಸ್‌ ಪ್ರಾದೇಶಿಕ ಪಕ್ಷಕ್ಕಿಂತ ಕಡೆಯಾಗಲಿದ್ದು, ಅದು ಹೀನಾಯ ಸ್ಥಿತಿಗೆ ಹೋಗಲು ಸಿದ್ದರಾಮಯ್ಯನವರೇ ಸಾಕ್ಷಿಯಾಗಲಿದ್ದಾರೆ ಎಂದರು.

ಸಿದ್ದರಾಮಯ್ಯರದ್ದು ಬರೀ ಸೊಕ್ಕಿನ ಮಾತು. ಎಲ್ಲ ಚುನಾವಣೆಗಳಲ್ಲಿ ಸೋತರೂ ಅವರ ಸೊಕ್ಕು ಕಡಿಮೆ ಆಗಿಲ್ಲ. ತಮ್ಮ ಸರ್ವಾ ಧಿಕಾರಿ ಧೋರಣೆಯಿಂದಲೇ ಚಾಮುಂಡೇಶ್ವರಿಯಲ್ಲಿ ಸೋತಿದ್ದು. ಕುರುಬ ಸಮಾಜದಲ್ಲೂ ಯಾವುದೇ ನಾಯಕರನ್ನು ಅವರು ಬೆಳೆಸಲಿಲ್ಲ. ತಾವು ಸಿಎಂ ಆದಾಗ ಸಂಪುಟದಲ್ಲಿ ಒಬ್ಬ ಕುರುಬರಿಗೂ ಸ್ಥಾನ ನೀಡಲಿಲ್ಲ. ಬೇರೆ ಜಾತಿ ನಾಯಕರನ್ನೂ ಬೆಳೆಯಲು ಬಿಡಲಿಲ್ಲ. ಮುಸ್ಲಿಂ ಸಮಾಜದ ನಾಯಕ ಸಿ.ಎಂ.ಇಬ್ರಾಹಿಂ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವುದಾಗಿ ಸಿದ್ದರಾಮಯ್ಯ ಹೇಳಿದ್ದರು. ಆದರೆ, ಕಾಂಗ್ರೆಸ್‌ನವರು ಒಬ್ಬ ಮುಸ್ಲಿಂ ನಾಯಕರನ್ನು ಮುಖ್ಯಮಂತ್ರಿ ಮಾಡಿದ್ದಾರೆಯೇ ಹೇಳಲಿ. ಇದು ನಾನೂ ಹೇಳಿದ್ದಲ್ಲ ಇಬ್ರಾಹಿಂ ಅವರೇ ಹೇಳಿದ್ದು. ಅದಕ್ಕೆ ಇಬ್ರಾಹಿಂ ಕಾಂಗ್ರೆಸ್‌ನವರು ಚಡ್ಡಿ ಕೊಟ್ರಾ, ಪ್ಯಾಂಟ್‌ ಕೊಡ್ಲಿಲ್ಲ ಅಂತ ಹೇಳಿದ್ದರು ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮೂಲಕ ಅಹಿಂದ ಕೆಲಸ ಮಾಡದಂತೆ ಸಿದ್ದರಾಮಯ್ಯಗೆ ಅಂಕುಶ ಹಾಕಲಾಗಿದೆ. ಅವರ ಕಾಲನ್ನು ಡಿಕೆಶಿ ಕಟ್‌ ಮಾಡಿದ್ದಾರೆ. ಹಿಂದುಳಿದ ವರ್ಗದ ಸಮಾವೇಶ ಮಾಡಲು ಸಿದ್ದರಾಮಯ್ಯಗೆ ಸ್ವಾತಂತ್ರÂ ಇಲ್ಲ. ಸಮಾವೇಶ ಮಾಡದಂತೆ ಕಡಿವಾಣ ಹಾಕಲಾಗಿದೆ. ಈ ಕಡೆ ಪ್ರತ್ಯೇಕ ಸಭೆ ಮಾಡಬೇಡಿ ಅಂತ ಸಿದ್ದರಾಮಯ್ಯ ಡಿಕೆಶಿಗೆ ಹೇಳುತ್ತಾರೆ. ಇದು ಕಾಂಗ್ರೆಸ್‌ನ ದುಃಸ್ಥಿತಿ. ಪ್ರಧಾನಿ ಮೋದಿ ಹಿಂದುಳಿದ ವರ್ಗಗಳಿಗೆ ಸಂಪುಟದಲ್ಲಿ 27 ಸ್ಥಾನಗಳನ್ನು ನೀಡಿದ್ದರೆ; ದಲಿತರಿಗೆ 20 ಮಂತ್ರಿ ಸ್ಥಾನ ನೀಡಿದ್ದಾರೆ. ಸಿಎಂ ಬಸವರಾಜ್‌ ಬೊಮ್ಮಾಯಿ ಕೂಡ ಎಲ್ಲ ಹಿಂದುಳಿದ ಸಮಾಜಗಳಿಗೆ ಭೂಮಿ ನೀಡುವುದಾಗಿ ಹೇಳಿದ್ದಾರೆ ಎಂದರು.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.