ವಿವಿಧೆಡೆ ನರೇಗಾ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ


Team Udayavani, Mar 17, 2022, 11:20 AM IST

panchayat

ಮೊಳಕಾಲ್ಮೂರು: ತಾಲೂಕಿನ ನಾನಾ ಗ್ರಾಮ ಪಂಚಾಯಿತಿಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ| ನಂದಿನಿದೇವಿ ಭೇಟಿ ಮಾಡಿ ನರೇಗಾ ಯೋಜನೆಯಲ್ಲಿ ಕೈಗೊಂಡಿರುವ ಕ್ರಿಯಾಯೋಜನೆ ಕುರಿತು ಮಾಹಿತಿ ಪಡೆದರು. ಕೂಲಿಕಾರರಿಗೆ ಕೆಲಸ ನೀಡಿದ್ದಾರೆಯೇ ಇಲ್ಲವೇ ಎಂಬುದರ ಪರಿಶೀಲನೆ ನಡೆಸಿದರು. ತಾಲೂಕಿನ ಹಿರೇಕೆರೆಹಳ್ಳಿ ಅಶೋಕಸಿದ್ದಾಪುರ ಗ್ರಾಮಗಳಿಗೆ ಭೇಟಿ ನೀಡಿ ಬದು ನಿರ್ಮಾಣ, ಕೆರೆ-ಹಳ್ಳ ಅಭಿವೃದ್ಧಿ, ಕೃಷಿ ಹೊಂಡ ಸೇರಿದಂತೆ ನರೇಗಾ ಯೋಜನೆಯಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿಗಳ ಸ್ಥಳಕ್ಕೆ ಸ್ಥಳೀಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು. ಹಿರೇಕೆರೆಹಳ್ಳಿ ಗ್ರಾಮದಲ್ಲಿ ಕೈಗೊಂಡಿರುವ ರಿವಿಟ್‌ಮೆಂಟ್‌ , ಕಾಲುವೆ ಅಭಿವೃದ್ಧಿ, ಮೆಟ್ಲಿನ್ಗ್ ರಸ್ತೆ ಅಭಿವೃದ್ಧಿ ಸ್ಥಳಗಳಿಗೆ ತೆರಳಿ ಕೂಲಿಕಾರರ ಜತೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಕಳೆದ ಒಂದು ತಿಂಗಳಿನಿಂದ ಕೂಲಿ ಹಣ ಬಂದಿಲ್ಲ, ಕೂಡಲೇ ನೀಡಬೇಕೆಂದು ಕೂಲಿಕಾರರು ಮನವಿ ಮಾಡಿಕೊಂಡರು. ಅಶೋಕಸಿದ್ದಾಪುರ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ನರೇಗಾ ಯೋಜನೆಯಲ್ಲಿ ಕೈಗೊಂಡಿರುವ ಕಾಮಗಾರಿಗಳ ಕ್ರಿಯಾ ಯೋಜನೆ ಮಾಹಿತಿ ಪಡೆದು ಆಯಾ ಗ್ರಾಮ ಪಂಚಾಯಿತಿಗಳಲ್ಲಿ ಕೈಗೊಂಡ ಕೆಲ ಕಾಮಗಾರಿಗಳನ್ನು ವೀಕ್ಷಿಸಿದರು. ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಅಲ್ಲಿ ನಿರ್ಮಿಸಿರುವ ಕಟ್ಟಡವನ್ನು ಪರಿಶೀಲಿಸಿದರು. ಘನತ್ಯಾಜ್ಯ ವಿಲೇವಾರಿಯನ್ನು ಶೀಘ್ರವಾಗಿ ಪ್ರಾರಂಭಿಸುವ ಜೊತೆಗೆ ಕೂಲಿಕಾರರಿಗೆ ನೆರವಾಗಲು ಕುಡಿಯುವ ನೀರು ಹಾಗೂ ಶೌಚಾಲಯ ಸೌಲಭ್ಯ ಕಲ್ಪಿಸುವಂತೆ ಸೂಚಿಸಿದರು. ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲಿಸಿದರು. ಅಂಗನವಾಡಿ ಕೇಂದ್ರಗಳನ್ನು ಸ್ವತ್ಛವಾಗಿಟ್ಟುಕೊಂಡು ಮಕ್ಕಳಿಗೆ ಶುಚಿ ಮತ್ತು ರುಚಿಯಾದ ಆಹಾರ ನೀಡುವುದರೊಂದಿಗೆ ಅಪೌಷ್ಟಿಕತೆ ಕಂಡುಬರದಂತೆ ಜಾಗ್ರತೆ ವಹಿಸಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಪಂ ಸಿಇಒ ಡಾ| ನಂದಿನಿದೇವಿ, ತಾಲೂಕಿನಲ್ಲಿ ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಂಡು ಜಾಬ್‌ಕಾರ್ಡ್‌ ಹೊಂದಿದ ಕೂಲಿಕಾರರಿಗೆ ಕೂಲಿ ಕೆಲಸ ನೀಡಬೇಕು. ನರೇಗಾ ಯೋಜನೆಯಲ್ಲಿ ಬದು ನಿರ್ಮಾಣ, ಕೆರೆ ಅಭಿವೃದ್ಧಿ, ಹಳ್ಳ ಅಭಿವೃದ್ಧಿಯಂತಹ ಕಾಮಗಾರಿಗಳಿಗೆ ಆದ್ಯತೆ ನೀಡಿ ಕೂಲಿಕಾರರಿಗೆ ಸಕಾಲಕ್ಕೆ ಕೂಲಿ ಹಣ ವಿತರಿಸಬೇಕು. ನರೇಗಾ ಕಾಮಗಾರಿಗಳಿಗೆ ಯಂತ್ರಗಳ ಬಳಕೆ ಮಾಡದೆ ಜನರಿಂದಲೇ ಕಾಮಗಾರಿ ಪೂರ್ಣಗೊಳಿಸಬೇಕು. ನರೇಗಾ ಕಾಮಗಾರಿಗಳನ್ನು ನಿಯಮಾನುಸಾರ ಜನರಿಗೆ ಅವಕಾಶ ನೀಡದ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿತ ಅಧಿಕಾರಿಗಳೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಪಿಡಿಒಗಳಿಗೆ ಸೂಚನೆ ನೀಡಿದರು. ತಾಪಂ ಕಾರ್ಯನಿರ್ವಹಣಾಧಿಕಾರಿ ಕೆ.ಒ. ಜಾನಕಿರಾಮ, ತಾಪಂ ಸಿಬ್ಬಂದಿ ಮಧುಸೂದನ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.