ಆಂತರಿಕ ದೂರು ನಿರ್ವಹಣಾ ಸಮಿತಿ ರಚಿಸಿ

ಮಹಿಳಾ ಕಾರ್ಮಿಕರಿಗೆ ಹಕ್ಕುಗಳ ಕುರಿತು ಜಾಗೃತಿ ಮೂಡಿಸಿ

Team Udayavani, Mar 17, 2022, 4:02 PM IST

16

ಬೆಳಗಾವಿ: ಮಹಿಳಾ ಕಾರ್ಮಿಕರಿಗೆ ಇರುವ ಹಕ್ಕುಗಳ ಕುರಿತು ಬಹಳಷ್ಟು ಜನರಿಗೆ ಮಾಹಿತಿ ಇರುವುದಿಲ್ಲ. ಆಂತರಿಕ ದೂರು ನಿರ್ವಹಣಾ ಸಮಿತಿ ಸೇರಿದಂತೆ ವಿವಿಧ ಬಗೆಯ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಕಾರ್ಮಿಕ ಇಲಾಖೆ ಅಧಿಕಾರಿಗಳು ಮಾಡಬೇಕು ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಆಂತರಿಕ ದೂರು ನಿರ್ವಹಣಾ ಸಮಿತಿ ರಚಿಸಬೇಕು. ಅನ್ಯಾಯಕ್ಕೊಳಗಾದ ಮಹಿಳೆ ಮೊದಲು ಸಮಿತಿಗೆ ದೂರು ಸಲ್ಲಿಸಬೇಕು. ಅಲ್ಲಿ ಬಗೆಹರಿಯದಿದ್ದರೆ ಕೂಡಲೇ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಬೇಕು ಎಂದರು.

ಸರ್ಕಾರಿ ಮತ್ತು ಖಾಸಗಿ ಸ್ಥಳಗಳಲ್ಲಿ ಕೆಲಸ ಮಾಡುವ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಹೀಗಾಗಿ ಪ್ರತಿಯೊಂದು ಸ್ಥಳದಲ್ಲಿ ಆಂತರಿಕ ದೂರು ನಿರ್ವಹಣಾ ಸಮಿತಿ ಕಡ್ಡಾಯವಾಗಿ ರಚಿಸಬೇಕು. ಲೈಂಗಿಕ ಕಿರುಕುಳ ನಡೆದ ವೇಳೆ ಮಹಿಳೆಯರು ಏನು ಮಾಡಬೇಕು ಎಂಬುದರ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ನಿಯಮಿತವಾಗಿ ಹಮ್ಮಿಕೊಳ್ಳಬೇಕು. ಇತ್ತೀಚಿನ ಮಕ್ಕಳಲ್ಲಿ ಆತ್ಮಹತ್ಯೆ ಪ್ರವೃತ್ತಿ ಹೆಚ್ಚಾಗುತ್ತಿದೆ. ಹೀಗಾಗಿ ಶಿಕ್ಷಣ ಸಂಸ್ಥೆ ಸೇರಿದಂತೆ ವಿವಿಧ ಕಡೆಗಳಲ್ಲಿ ಆತ್ಮಹತ್ಯೆ ತಡೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಸಬೇಕು ಎಂದರು. ಕಾನೂನು ಸೇವಾ ಪ್ರಾಧಿಕಾರದಿಂದ ಮಹಿಳೆಯರಿಗೆ ಉಚಿತ ಕಾನೂನು ನೆರವು ಒದಗಿಸಲಾಗುತ್ತಿದೆ. ಇದರ ಪ್ರಯೋಜನ ಪಡೆದುಕೊಳ್ಳುವ ನಿಟ್ಟಿನಲ್ಲಿ ಮಹಿಳೆಯರಿಗೆ ಮಾಹಿತಿ ನೀಡಬೇಕು. ಅತ್ಯಾಚಾರಕ್ಕೆ ಒಳಗಾದ ಹಾಗೂ ಲೈಂಗಿಕ ದೌರ್ಜನ್ಯದಿಂದ ನೊಂದ ಬಾಲಕಿಯರು ಅಥವಾ ಮಕ್ಕಳಿಗೆ ಪರಿಹಾರ ಮೊತ್ತವನ್ನು ತಕ್ಷಣ ವಿತರಿಸಬೇಕು. ಉಳಿದ ಮೊತ್ತವನ್ನು ಪ್ರಕರಣ ಇತ್ಯರ್ಥಗೊಂಡ ನಂತರ ಒದಗಿಸಬೇಕು ಎಂದು ನಿರ್ದೇಶನ ನೀಡಿದರು. ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಾಗುವ ಮಹಿಳಾ ರೋಗಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದರ ಜತೆಗೆ ಮಹಿಳಾ ವಾರ್ಡುಗಳು ಮತ್ತು ಶೌಚಾಲಯಗಳ ಸ್ವತ್ಛತೆಗೆ ಆದ್ಯತೆ ನೀಡಬೇಕು. ಹೊರಗೆ ಬಂದು ಕೆಲಸ ಮಾಡುವ ಮಹಿಳೆಯರಿಗೆ ಸುರಕ್ಷತೆ ಸೇರಿದಂತೆ ಎಲ್ಲ ಬಗೆಯ ನೆರವು ಒದಗಿಸುವ ನಿಟ್ಟಿನಲ್ಲಿ ಅ ಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಪೊಲೀಸ್‌ ಇಲಾಖೆಗೆ ನಿರ್ದೇಶನ ನೀಡಿದ ಅವರು, ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಗೆ ಹಾಗೂ ಪೋಕ್ಸೋ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಾಲಕಿಯರಿಗೆ ಒಂದೇ ಸೂರಿನಡಿ ವೈದ್ಯಕೀಯ, ಕಾನೂನು ನೆರವು ನೀಡುವ ಉದ್ಧೇಶದಿಂದ ಆರಂಭಿಸಲಾಗಿರುವ ಸಖೀ ಒನ್‌ ಸ್ಟಾಪ್‌ ಸೆಂಟರ್‌ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿ, ಮಹಿಳೆಯರ ದೌರ್ಜನ್ಯ ಕುರಿತು ಸ್ಥಳೀಯ ಪೊಲೀಸರು ಸ್ಪಂದಿಸದಿದ್ದರೆ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕು. ಕೆಲವು ಪ್ರಕರಣಗಳಲ್ಲಿ ಕಾನೂನು ಸೇವಾ ಪ್ರಾಧಿಕಾರದಿಂದ ನೆರವು ಒದಗಿಸಲಾಗಿದೆ. ಮಹಿಳೆಯರ ಮೇಲಿನ ದೌರ್ಜನ್ಯ ಅಥವಾ ಆರೋಗ್ಯ ಸಂಬಂಧ ಏನೇ ದೂರು ಬಂದರೆ ತ್ವರಿತವಾಗಿ ಸ್ಪಂದಿಸುವ ಕೆಲಸ ಜಿಲ್ಲಾಡಳಿತ ಮಾಡುತ್ತಿದೆ ಎಂದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಬಸವರಾಜ ವರವಟ್ಟಿ ಮಾತನಾಡಿ, 2021-22ನೇ ಸಾಲಿನಲ್ಲಿ 136 ಕೌಟುಂಬಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ ಸಮಾಲೋಚನೆ ಮೂಲಕ ಒಂದು ಪ್ರಕರಣ ಇತ್ಯರ್ಥಗೊಂಡಿದೆ. ಇನ್ನೊಂದು ಪ್ರಕರಣ ನ್ಯಾಯಾಲಯದಲ್ಲಿ ಇತ್ಯರ್ಥಗೊಂಡಿದೆ ಎಂದು ವಿವರಿಸಿದರು.

ಡಿಸಿಪಿ ಸ್ನೇಹಾ ಪಿ.ವಿ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್‌.ವಿ. ಮುನ್ಯಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎಲ್ಲ ತಾಲೂಕು ಮಟ್ಟದ ಅಧಿ ಕಾರಿಗಳು, ಮಹಿಳಾ ಕಲ್ಯಾಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಸ್ವಯಂ ಸೇವಾ ಸಂಸ್ಥೆ ಪದಾಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಬೆಳಗಾವಿ-ಸೋಲಿನ ಭಯದಿಂದ ಕಾಂಗ್ರೆಸ್‌ ಹತಾಶ: ಜಗದೀಶ ಶೆಟ್ಟರ

ಬೆಳಗಾವಿ-ಸೋಲಿನ ಭಯದಿಂದ ಕಾಂಗ್ರೆಸ್‌ ಹತಾಶ: ಜಗದೀಶ ಶೆಟ್ಟರ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

1-qweqweqw

Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.