ಉಪ್ಪಲದಿನ್ನಿ ಜನರ ಸಮಸ್ಯೆಗೆ ಸ್ಪಂದಿಸಲು ಡಿಸಿ ತಾಕೀತು

Team Udayavani, Mar 17, 2022, 5:36 PM IST

22people

ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದಲ್ಲಿ ಮಾ. 19ರಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಹೀಗಾಗಿ ಅಧಿಕಾರಿಗಳು ಸದರಿ ಗ್ರಾಮ ಸೇರಿದಂತೆ ಸುತ್ತಲಿನ ಗ್ರಾಮಗಳ ಸಮಸ್ಯೆಗಳನ್ನು ಆಲಿಸಿ, ತ್ವರಿತವಾಗಿ ಸ್ಪಂದಿಸುವಂತೆ ಜಿಲ್ಲಾಧಿಕಾರಿ ಸುನೀಲಕುಮಾರ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಬುಧವಾರ ತಮ್ಮ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಜರುಗಿದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.

ಉಪ್ಪಲದಿನ್ನಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ, ಸ್ಮಶಾನ ಭೂಮಿ ಸಮಸ್ಯೆ, ಪಿಂಚಣಿ, ವೈಯಕ್ತಿಕ ಮತ್ತು ಸಮುದಾಯ ಶೌಚಾಲಯ, ರಸ್ತೆ, ವಿವಿಧ ಯೋಜನೆಗಳಲ್ಲಿನ ಮನೆಗಳ ನಿರ್ಮಾಣ ಸೇರಿದಂತೆ ಗ್ರಾಮದ ಅಗತ್ಯ ಮೂಲಭೂತ ಸೌಲಭ್ಯಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಉಪ್ಪಲದಿನ್ನಿ ಗ್ರಾಮದಲ್ಲಿ ಪರಿಶಿಷ್ಟ ಜಾತಿಯವರ ಕಾಲೋನಿಯಲ್ಲಿ ಚರಂಡಿ ಸಮಸ್ಯೆ ಗಂಭೀರವಾಗಿದೆ. ಕೂಡಲೇ ಪರಿಹರಿಸಲು ನಾನೇ ಖುದ್ದಾಗಿ ಭೇಟಿ ನೀಡಿ ಸ್ಥಳೀಯರೊಂದಿಗೆ ಚರ್ಚೆ ನಡೆಸುತ್ತೇನೆ. ಕಳೆದ ಕೆಲವು ವರ್ಷಗಳಿಂದ ಇಲ್ಲಿನ ಎಸ್ಸಿ ಕಾಲೋನಿಯಲ್ಲಿ ಚರಂಡಿ ಸಮಸ್ಯೆಯು ಜನರಿಗೆ ಮಳೆಗಾಲದಲ್ಲಿ ದೊಡ್ಡ ಸಮಸ್ಯೆಯಾಗುತ್ತಿರುವುದು ತಿಳಿದು ಬಂದಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಿ, ಜನರ ಈ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದರು.

ಸ್ಥಳೀಯ ರೈತರೊಂದಿಗೆ ಸಂವಾದ ಸಭೆ ನಡೆಸಿ ಹೊಲಕ್ಕೆ ಹೋಗುವ ಕಾಲುದಾರಿ, ಮಮದಾಪುರ ಕೆರೆ ಸಮಸ್ಯೆ ಪರಿಹರಿಸಲು ಪ್ರಯತ್ನಿಸಲಾಗುತ್ತದೆ. ಸರ್ಕಾರ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೈಗೊಂಡಿರುವ ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಯ ಹಿನ್ನೆಲೆಯಲ್ಲಿ ಅಂದೂ ಕೂಡ ಗ್ರಾಮದ ಕೆಲವು ಜನರಿಗೆ ತಾವೂ ಖುದ್ದಾಗಿ ದಾಖಲೆಗಳನ್ನು ವಿತರಿಸುವುದಾಗಿ ಹೇಳಿದರು.

ಗ್ರಾಮದ ಪ್ರತಿಯೊಬ್ಬರಿಗೂ ಸರ್ಕಾರದ ಮಹತ್ವಾಕಾಂಕ್ಷೆಯ ಆಯುಷ್ಮಾನ್‌ ಭಾರತ-ಆರೋಗ್ಯ ಕರ್ನಾಟಕ ಕಾರ್ಡ್‌ ವಿತರಿಸಬೇಕು. ಸದರಿ ಕಾರ್ಯಕ್ರಮವನ್ನು ಅತ್ಯಂತ ಸುವ್ಯವಸ್ಥಿತವಾಗಿ ಆಯೋಜಿಸಲು ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಿದರು.

ಜಿಪಂ ಸಿಇಒ ರಾಹುಲ್‌ ಶಿಂಧೆ ಮಾತನಾಡಿ, ಉಪ್ಪಲದಿನ್ನಿ ಗ್ರಾಮದಲ್ಲಿ ಕಣ್ಣಿನ ಸಮಸ್ಯೆ ಇರುವ ಜನರಿಗೆ ನೇತ್ರ ತಪಾಸಣಾ ಶಿಬಿರ ಆಯೋಜಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಉಪ ವಿಭಾಗಾಧಿಕಾರಿ ಬಲರಾಮ ಲಮಾಣಿ, ಬಬಲೇಶ್ವರ ತಹಶೀಲ್ದಾರ್‌ ಸಂತೋಷ ಮ್ಯಾಗೇರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.

ಟಾಪ್ ನ್ಯೂಸ್

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

1-wewqewqe

T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್‌ ಗೆಲುವು: 4-0 ಮುನ್ನಡೆ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

manika-bhatra

Table Tennis Star; ಬಾಳ್ವೆಯ ದೊಡ್ಡ ಗೆಲುವು ದಾಖಲಿಸಿದ ಮನಿಕಾ ಬಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.