ಗಗನಕ್ಕೇರಿದ ಅಡುಗೆ ಎಣ್ಣೆ ದರ: ಗ್ರಾಹಕರಿಗೆ ಹೊರೆ

ರಷ್ಯಾ, ಉಕ್ರೇನ್‌ ಯುದ್ಧದಿಂದ ಕಚ್ಚಾವಸ್ತು ಪೂರೈಕೆ ಸ್ಥಗಿತ

Team Udayavani, Mar 18, 2022, 4:32 PM IST

6

ದೇವನಹಳ್ಳಿ: ಜಾಗತಿಕ ಮಟ್ಟದಲ್ಲಿ ಖಾದ್ಯ ತೈಲದ ದಾಸ್ತಾನು ಖಾಲಿಯಾಗುತ್ತಿರುವುದರಿಂದ ಅಡುಗೆ ಎಣ್ಣೆಗಳ ಬೆಲೆ ಹೆಚ್ಚಾಗುತ್ತಿದೆ. ರಷ್ಯಾ ಮತ್ತು ಉಕ್ರೇನ್‌ ದೇಶಗಳ ನಡುವೆ ಯುದ್ಧದ ಪರಿಣಾಮದಿಂದ ಅಡುಗೆ ಎಣ್ಣೆ ಗ್ರಾಹಕರಿಗೆ ಹೊರೆಯಾಗಿದೆ.

ಹೋಳಿ ಹುಣ್ಣಿಮೆ, ಯುಗಾದಿ, ಶ್ರೀರಾಮ ನವಮಿ ಹಬ್ಬಗಳ ಸಾಲು ಸಾಲಾಗಿ ಬರುವುದರಿಂದ ದಿನಸಿಗಳಿಗಿಂತಲೂ ಹೆಚ್ಚಾಗಿ ಎಣ್ಣೆ ಖರೀದಿ ಮಾಡುತ್ತಿದ್ದಾರೆ. ನಿತ್ಯ 10 ಲೀ. 10 ಬಾಕ್ಸ್‌ ಖಾಲಿಯಾಗುತ್ತಿತ್ತು. ಕಳೆದ 15 ದಿನದಿಂದ 20ರಿಂದ 30 ಬಾಕ್ಸ್‌ ಖರ್ಚಾಗುತ್ತಿವೆ. ಮಾರುಕಟ್ಟೆಯಲ್ಲಿ ಬೇಡಿಕೆ ಪೂರೈಕೆ ನಡುವೆ ಯಾವುದೇ ಪರ್ಯಾಯವಿಲ್ಲದಂತಾಗಿದೆ. ಎಣ್ಣೆ ಬಳಸುವವರು ಬಡವರು, ಮಧ್ಯಮ ವರ್ಗದವರು ಯೋಚಿಸುವಂತಾಗಿದೆ.

ಅಡುಗೆಗೆ ಅತಿ ಮುಖ್ಯ: ಯಾವುದೇ ಅಡುಗೆ ಮಾಡಬೇಕಾದರೆ ಅಡುಗೆ ರುಚಿಯಾಗಿರಲು ಸಾರಿಗೆ, ಚಟ್ನಿಗೆ, ಚಿತ್ರಾನ್ನ, ಪುಳಿಯೋಗರೆ, ಪಲಾವ್‌ಸೇರಿ ವಿವಿಧ ಅಡುಗೆಗೆ ರುಚಿ ಬರಲು ಹೊಗ್ಗರಣೆ ಹಾಕಲು ಎಣ್ಣೆ ಮುಖ್ಯವಾಗಿದೆ. ಬೋಂಡಾ, ಬಜ್ಜಿ ಕರಿಯಲು ಸಹ ಎಣ್ಣೆ ಮೇಲೆ ಅವಲಂಬಿತರಾಗಿದ್ದಾರೆ. ಸೂರ್ಯಕಾಂತಿ ಎಣ್ಣೆ ಬಳಕೆ ಮೇಲೆ ಜನರು ಹೆಚ್ಚು ಅವಲಂಬಿತರಾಗಿರುವುದು ಸಮಸ್ಯೆಗೆ ಕಾರಣವಾಗಿದೆ. ಎಣ್ಣೆ ದರ ಹೆಚ್ಚಾಗುತ್ತದೆ ಎಂಬ ಕಾರಣದಿಂದ ಗ್ರಾಹಕರು ಮೊದಲೇ ಅಡುಗೆ ಎಣ್ಣೆಯನ್ನು ಹಳೆಯ ದರದಲ್ಲಿಯೇ ಖರೀದಿಸಿದ್ದಾರೆ.

ರಫ್ತು ಸ್ಥಗಿತ: ದೇಶದ ಹಲವು ಅಡುಗೆ ಎಣ್ಣೆ ತಯಾರಿಕಾ ಘಟಕಗಳು ಕಚ್ಚಾ ವಸ್ತುವಿನ ಪೂರೈಕೆಗೆ ಉಕ್ರೇನ್‌ ಮೇಲೆ ಅವಲಂಬಿತರಾಗಿದ್ದಾರೆ. ಉಕ್ರೇನ್‌ ಮತ್ತು ರಷ್ಯಾ ಯುದ್ಧ ಪ್ರಾರಂಭವಾದ ಒಂದೆರಡು ದಿನಗಳಲ್ಲಿಯೇ ರಫ್ತು ಸ್ಥಗಿತವಾದ ಪರಿಣಾಮ ಬೆಲೆ ಏರಿಕೆ ಉಂಟಾಗಿದೆ. ಬೆಲೆ ಏರಿಕೆಯಾಗುತ್ತಿದ್ದಂತೆ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗುತ್ತದೆ. ತಿಂಗಳಿಗೆ 10 ಲೀಟರ್‌ ಖರೀದಿಸುತ್ತಿದ್ದವರು ಈಗ 15ರಿಂದ 25 ಲೀಟರ್‌ ಖರೀದಿಸುತ್ತಿದ್ದಾರೆ. ಇದೇ ರೀತಿ ಅಡುಗೆ ಎಣ್ಣೆ ಗಗನಕ್ಕೇರಿದರೆ ಸಾಮಾನ್ಯ ಜನ ಹೇಗೆ ಜೀವನ ನಡೆಸು ತ್ತಾರೆ ಎಂದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ಬೆಲೆ ಏರಿಕೆಯ ಆತಂಕ: ಜನರು ಮಾತ್ರ ಸೂರ್ಯಕಾಂತಿಯ ಗುಂಗಿನಿಂದ ಹೊರ ಬರುತ್ತಿಲ್ಲ. ಇದನ್ನೇ ಕೆಲ ಅಂಗಡಿ ಮಾಲೀಕರು ದುರುಪಯೋಗ ಪಡಿಸಿಕೊಂಡು ಎಂಆರ್‌ಪಿ ದರಕ್ಕಿಂತಲೂ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ. ಕೃತಕ ಅಭಾವ ಸೃಷ್ಟಿಸಿ, ದರ ಹೆಚ್ಚಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿದೆ. ಮುಂದಿನ ದಿನಗಳಲ್ಲಿ ರಷ್ಯಾ ಮತ್ತು ಉಕ್ರೇನ್‌ ಯುದ್ದಗಳು ಮುಂದುವರಿದರೆ ಸಾರ್ವಜನಿಕರ ಹತ್ತಿರ ದ್ವಿಚಕ್ರ ವಾಹನ ಮತ್ತು ಕಾರು ಇರುವುದರಿಂದ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯಾಗುವ ಆತಂಕದಲ್ಲಿ ಸಾರ್ವಜನಿಕರಿದ್ದಾರೆ.

ವಿವಿಧ ಎಣ್ಣೆ ದರಗಳು: ಸೂರ್ಯಕಾಂತಿ ಎಣ್ಣೆ ಒಂದು ಲೀಟರ್‌ಗೆ 175 ರೂ., ಸನ್‌ ಪ್ಯೂರ್‌ 185 ರೂ. ಗೋಲ್ಡ್‌ವಿನ್ನರ್‌ 190 ರೂ. ಸ್ವಾದ್‌ 180 ರೂ. ಪಾಮ್‌ ಆಯಿಲ್‌ 170 ರೂ., ಹೋಂ ಕಡಲೆಕಾಯಿ ಎಣ್ಣೆ 175 ರೂ.,ಗೆ ಏರಿಕೆಯಾಗಿದೆ.

ಯಾವುದೇ ಅಡುಗೆ ಮಾಡಬೇಕಾದರೆ ಅಡುಗೆ ಎಣ್ಣೆ ಇಲ್ಲದಿದ್ದರೆ ಮಾಡಲು ಸಾಧ್ಯವಿಲ್ಲ. ಎಷ್ಟೇ ಅಡುಗೆ ಎಣ್ಣೆ ದುಬಾರಿಯಾದರೂ ಸಹ ಖರೀದಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಲಿ ಮಾಡಿಕೊಂಡು ತಿನ್ನುವ ನಾವು ದುಬಾರಿ ಹಣ ಕೊಟ್ಟು ಎಣ್ಣೆ ಖರೀದಿ ಮಾಡುವುದು ಕಷ್ಟವಾಗುತ್ತದೆ.

● ಅರುಣಾ, ಗ್ರಾಹಕಿ

 

ಉಕ್ರೇನ್‌, ರಷ್ಯಾ ಯುದ್ಧದಿಂದ ಕ್ರೂಡ್‌ ಆಯಿಲ್‌ ಸರಿಯಾದ ಸಮಯಕ್ಕೆ ಬರದೇ ಇರುವುದರಿಂದ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಹೆಚ್ಚಾಗಿದೆ. ಯಶವಂತಪುರದಿಂದ ಸರಕು ಖರೀದಿ ಮಾಡಿಕೊಂಡು ಬರುತ್ತಿದ್ದೇವೆ. ಬೇಡಿಕೆಗೆ ತಕ್ಕಷ್ಟು ಎಣ್ಣೆ ಪೂರೈಕೆಯಾಗುತ್ತಿಲ್ಲ.

  • ಬಿ.ವಿ.ನಾಗರಾಜ್‌, ವರ್ತಕರ ಸಂಘದ ಕಾರ್ಯದರ್ಶಿ

 

  • ಎಸ್‌.ಮಹೇಶ್‌

ಟಾಪ್ ನ್ಯೂಸ್

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

Doddaballapura: ಹೇಮಂತ್ ಗೌಡ ಹತ್ಯೆ ಪ್ರಕರಣ: ಗುಂಡು ಹಾರಿಸಿ ಆರೋಪಿಯ ಬಂಧನ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.