ಸಾಧನೆ ಪಥದಿಂದ ಮಹಿಳೆಯರು ವಿಮುಖರಾಗಬಾರದು

Team Udayavani, Mar 20, 2022, 5:26 PM IST

20women

ಸಿಂದಗಿ: ಹೆಣ್ಣು ಇಂದು ಎಲ್ಲ ರಂಗದಲ್ಲೂ ಸಾಧನೆ ಮೆರೆದಿದ್ದು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವ ಮೂಲಕ ಅಬಲೆ ಅಲ್ಲ ಸಬಲೆ ಎಂಬುದನ್ನು ಸಾಬೀತು ಮಾಡಿದ್ದಾಳೆ ಎಂದು ಸಂಗಮ ಸಂಸ್ಥೆ ನಿರ್ದೇಶಕ ಆಲ್ವಿನ್‌ ಡಿಸೋಜಾ ಹೇಳಿದರು.

ಪಟ್ಟಣದ ಸಂಗಮ ಸಂಸ್ಥೆ ಸಭಾಭವನದಲ್ಲಿ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರ ಹಾಗೂ ಸಿಂದಗಿ ತಾಲೂಕು ಸ್ಫೂರ್ತಿ ಮಹಿಳಾ ಸಂಘಗಳ ಒಕ್ಕೂಟ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ ಹಾಗೂ ಸಾಧಕ ಮಹಿಳೆಯರಿಗೆ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಾಲೆ ಕಾಲೇಜುಗಳ ಶಿಕ್ಷಣ, ಫಲಿತಾಂಶಗಳಲ್ಲಿ ಬಾಲಕಿಯರೇ ಮೇಲುಗೈ ಸಾಧಿಸುತ್ತಾರೆ. ಆದರೆ ಮುಂದೆ ಉದ್ಯೋಗಶೀಲರನ್ನಾಗಿಸಿ ಅವರನ್ನು ಮುಖ್ಯವಾಹಿನಿಗೆ ತರುವಲ್ಲಿ ಪ್ರೋತ್ಸಾಹದ ಅಗತ್ಯವಿದೆ. ಮಹಿಳೆಗೆ ಸಮಾನ ಅವಕಾಶಗಳನ್ನು ಇತರರು ಕೊಡುವುದಲ್ಲ, ಅದು ಪ್ರತಿಯೊಬ್ಬ ಮಹಿಳೆಯ ಹಕ್ಕು. ಅನೇಕ ಮಹಿಳೆಯರು ಕುಟುಂಬ, ಸಂಸಾರಕ್ಕಾಗಿ ತ್ಯಾಗ ಮಾಡುತ್ತಾರೆ. ಶಿಕ್ಷಣ ಪಡೆಯುವಾಗ ಉತ್ತಮ ಸಾಧನೆ ಮಾಡುವ ಮಹಿಳೆಯರು ಮದುವೆ ನಂತರವೂ ಸಾಧನೆಯ ಪಥದಿಂದ ವಿಮುಖರಾಗಬಾರದು. ಸುಸ್ಥಿರ ಅಭಿವೃದ್ಧಿಗೆ ಸಮಾನತೆ ಎಲ್ಲ ರಂಗಗಳಲ್ಲಿ ಬರಬೇಕು ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಇನ್ನರ್‌ ವ್ಹಿಲ್‌ ಕ್ಲಬ್‌ ಮಾಜಿ ಅಧ್ಯಕ್ಷೆ ನಾಗರತ್ನ ಮನಗೂಳಿ ಮಾತನಾಡಿ, ಮಹಿಳೆಯರು ಪ್ರತಿ ನಿತ್ಯ ಮನೆಯ ಒಳಗೆ ಮತ್ತು ಸಮಾಜದ ಅಂಗಳದಲ್ಲಿ ಹೋರಾಡುತ್ತಿದ್ದಾರೆ. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ಎರಡು ಪಟ್ಟು ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ. ಒಬ್ಬ ಹೆಣ್ಣು ಮತ್ತೂಬ್ಬ ಸ್ತ್ರೀಯನ್ನು ಪ್ರೋತ್ಸಾಹಿಸುವ ಮನೋಭಾವ ಕುಟುಂಬಗಳಲ್ಲಿ ಬೆಳೆಯಬೇಕು. ಮಹಿಳೆಯರ ವಿಕಾಸವಾದರೆ ಇಡಿ ಕುಟುಂಬ ವಿಕಾಸವಾದಂತೆ ಎಂದು ಹೇಳಿದರು.

ಸಂಗಮ ಸಂಸ್ಥೆ ಸಹ ನಿರ್ದೇಶಕಿ ಸಿಂತಿಯಾ ಡಿಮೆಲ್ಲೊ ಮಾತನಾಡಿ, ಮಹಿಳೆ ಸಮಾಜದ ಶಕ್ತಿಯಾಗಿದ್ದು ಕುಟುಂಬದ ಕಣ್ಣು ಕೂಡ ಆಗಿದ್ದಾಳೆ. ಸಮಾಜ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆ ಪ್ರಮುಖ ಪಾತ್ರ ವಹಿಸುತ್ತಿದ್ದಾಳೆ. ಎಲ್ಲ ಕ್ಷೇತ್ರಗಳಲ್ಲೂ ಸಾಧನೆಯ ಛಾಪು ಮೂಡಿಸಿದ್ದಾಳೆ. ಹಿಂದೆ ಬೆರಳಣಿಕೆಯಷ್ಟು ಮಹಿಳೆಯರು ಮನೆಯಿಂದ ಹೊರ ಬಂದು ದುಡಿಯುತ್ತಿದ್ದರು. ಈಗ ಗಡಿ ಕಾಯುವುದರಿಂದ ಹಿಡಿದು ಕುಟುಂಬದ ಪ್ರತಿ ಕೆಲಸವನ್ನೂ ಅತ್ಯಂತ ಸಮರ್ಥವಾಗಿ ಮಹಿಳೆ ನಿರ್ವಹಿಸುತ್ತಿದ್ದಾಳೆ. ಪ್ರತಿ ಕೆಲಸವನ್ನೂ ನಿರ್ವಹಿಸುವ ಶಕ್ತಿ, ತಾಳ್ಮೆ, ಉತ್ಸಾಹ ಮಹಿಳೆಗಿದೆ ಎಂದರು.

ಇದರ ಮಧ್ಯೆಯೂ ಕೌಟುಂಬಿಕ ದೌರ್ಜನ್ಯಕ್ಕೆ ಹಲವು ಮಹಿಳೆಯರು ಬಲಿಯಾಗುತ್ತಿದ್ದು, ಅವರಿಗೆ ಧೈರ್ಯ ತುಂಬಿ, ಹಕ್ಕುಗಳ ಬಗ್ಗೆ ಅರಿವು ಮೂಡಿಸಬೇಕಿದೆ. ಮಹಿಳೆಯ ಸಾಮರ್ಥ್ಯ, ಸ್ವಾಭಿಮಾನ ಮತ್ತು ಸ್ವಾತಂತ್ರ್ಯವನ್ನು ಗೌರವಿಸುವ ಹಾಗೂ ಆಕೆಯನ್ನು ಗೌರವ ಯುತವಾಗಿ ನಡೆಸಿಕೊಳ್ಳುವುದು ನಾಗರಿಕ ಸಮಾಜದ ಮುಖ್ಯ ಗುಣವಾಗಿರಬೇಕು. ಮಹಿಳೆಯರು ಸಂವಿಧಾನ ನೀಡಿರುವ ಹಕ್ಕುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ಎಸ್‌.ಕೆ. ಮಣೂರ ಇಲಾಖೆಯಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಶಾರದಾ ಮಂಗಳೂರ, ಜಯಶ್ರೀ ಹದನೂರ ಸೇರಿದಂತೆ ಸಂಗಮ ಸಂಸ್ಥೆ ಎಲ್ಲ ಕಾರ್ಯಕರ್ತೆಯರನ್ನು ಇದ್ದರು. ಸ್ಫೂರ್ತಿ ಒಕ್ಕೂಟದ ಅಧ್ಯಕ್ಷೆ ಸವಿತಾ ಇವಣಿ ಸ್ವಾಗತಿಸಿದರು. ತೇಜಸ್ವಿನಿ ಹಳ್ಳದಕೇರಿ ನಿರೂಪಿಸಿದರು. ವಿಜಯ ಬಂಟನೂರ ವಂದಿಸಿದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.