ಕೇಂದ್ರೀಯ ವಿವಿ ಆರನೇ ಘಟಿಕೋತ್ಸವ ನಾಳೆ

Team Udayavani, Mar 22, 2022, 11:40 AM IST

6VV

ಕಲಬುರಗಿ: ರಾಜ್ಯದ ಏಕೈಕ ಇಲ್ಲಿನ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಆರನೇ ಘಟಿಕೋತ್ಸವ ಮಾ. 23ರಂದು ಬೆಳಗ್ಗೆ 9ಗಂಟೆಗೆ ಹಮ್ಮಿಕೊಳ್ಳಲಾಗಿದೆ. 2020 ಹಾಗೂ 2021ನೇ ಸಾಲಿನಲ್ಲಿ ಪದವಿ ಪೂರೈಸಿದ 1415 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. ಪ್ರಮುಖವಾಗಿ 37 ಸಂಶೋಧಕ ರಿಗೆ ಪಿಎಚ್‌.ಡಿ. ಇಬ್ಬರಿಗೆ ಎಂ.ಫಿಎಲ್‌ ಪದವಿ ಪ್ರದಾನ ಮಾಡಲಾಗುವುದು. ರಾಜಸ್ಥಾನ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಾಪತಿ ಪ್ರೊ| ಕೆ. ಕಸ್ತೂರಿ ರಂಗನ್‌ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ಕೇಂದ್ರೀಯ ವಿ.ವಿ. ಕುಲಪತಿ ಪ್ರೊ| ಬಟ್ಟು ಸತ್ಯನಾರಾಯಣ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವಿವಿಯ ಪ್ರತಿ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪದವಿ ಹಾಗೂ ಸ್ನಾತಕೋತ್ತರ ವಿಭಾಗದ 69 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ ಮಾಡಲಾಗುವುದು. 2020ನೇ ಸಾಲಿನಲ್ಲಿ ಕಂಪ್ಯೂಟರ್‌ ಸೈನ್ಸ್‌ ಆ್ಯಂಡ್‌ ಸೈನ್ಸ್‌ ವಿಭಾಗದಲ್ಲಿ (ಎಂ.ಟೆಕ್‌) ಅತಿ ಹೆಚ್ಚು ಅಂಕ ಗಳಿಸಿದ ಸೌರವ್‌ ಸೋಳಂಕಿ ಅವರಿಗೆ ಪ್ರೊ| ಎ.ಎಂ. ಪಠಾಣ ಚಿನ್ನದ ಪದಕ ಹಾಗೂ 2021ನೇ ಸಾಲಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಇನ್‌ಫರ್ಮೇಶನ್‌ ಆ್ಯಂಡ್‌ ಕಮ್ಯುನಿಕೇಶನ್‌ (ಎಂ.ಟೆಕ್‌) ವಿಭಾಗದ ವಿದ್ಯಾರ್ಥಿ ಭಾರ್ಗವ್‌ ಸಾಯಿ ಬಾರಾಲಾ ಅವರಿಗೆ ಪ್ರೊ| ಪಠಾಣ ಚಿನ್ನದ ಪದಕ ನೀಡಲಾಗುವುದು ಎಂದು ವಿವರಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ವಿಶ್ವವಿದ್ಯಾಲಯದ ಕುಲ ಸಚಿವ ಪ್ರೊ| ಬಸವರಾಜ ಪಿ. ಡೋಣೂರ ಮಾತನಾಡಿ, ಒಟ್ಟು 69 ವಿದ್ಯಾರ್ಥಿಗಳು 71 ಚಿನ್ನದ ಪದಕಗಳನ್ನು ವಿವಿಧ ವಿಷಯಗಳಲ್ಲಿ ಪಡೆಯಲಿದ್ದಾರೆ. ವಿಶ್ವವಿದ್ಯಾಲಯವು ಸಂಶೋಧನೆ ಮತ್ತು ವಿವಿಧ ವಿಭಾಗಗಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಲಿದೆ. ಮತ್ತು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕೌಶಲ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಎಲ್ಲ ವಿಭಾಗಗಳಲ್ಲಿ ಅಭಿವೃದ್ಧಿ ಮಾಡಲಾಗುತ್ತಿದೆ ಎಂದರು.

ಹೊಸ ಶಿಕ್ಷಣ ನೀತಿ ಅನುಷ್ಠಾನದಲ್ಲಿ ತೊಂದರೆಗಳನ್ನು ಹೇಗೆ ನಿವಾರಣೆ ಮಾಡಬಹುದು ಎಂಬುದರ ಬಗ್ಗೆ ಹೇಳಲಾಗುತ್ತಿದೆ. ಜೊತೆಗೆ ಈ ಭಾಗದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ಬರೆದು, ಪ್ರವೇಶಾತಿ ಪಡೆಯಬೇಕು. ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ವಿಶ್ವವಿದ್ಯಾಲಯದ ಪರೀಕ್ಷಾ ನಿಯಂತ್ರಣಾಧಿಕಾರಿ ಪ್ರೊ| ಬಸವರಾಜ ಆರ್‌. ಕೆರೂರು, ಸಾರ್ವಜನಿಕ ಸಂಪರ್ಕಾಧಿಕಾರಿ ದೀಪ್ತಿ ಪಾಲ್ಗೊಂಡಿದ್ದರು.

ಗೌರವ ಡಾಕ್ಟರೇಟ್‌ ಇಲ್ಲ ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ಗೌರವ ಡಾಕ್ಟರೇಟ್‌ಗೆ ಸಾಧಕರನ್ನು ಗುರುತಿಸುವ ಕಾರ್ಯವಾಗಿಲ್ಲ. ಹೀಗಾಗಿ, ಈ ಬಾರಿ ಯಾರಿಗೂ ಡಾಕ್ಟರೇಟ್‌ ನೀಡುತ್ತಿಲ್ಲ. ಕಳೆದ ಬಾರಿ ನಡೆದ ಘಟಿಕೋತ್ಸವದಲ್ಲಿ ಇಸ್ರೋ ಅಧ್ಯಕ್ಷರಾಗಿದ್ದ ಪ್ರೊ| ಶಿವನ್‌ ಸೇರಿದಂತೆ ಕೆಲವು ಗಣ್ಯರಿಗೆ ಡಾಕ್ಟರೇಟ್‌ ಘೋಷಿಸಲಾಗಿತ್ತು. ಆದರೆ, ಅವರು ಕಲಬುರಗಿಗೆ ಬರಲೇ ಇಲ್ಲ. ವಿಶ್ವವಿದ್ಯಾಲಯದವರೇ ಅವರ ಬಳಿ ತೆರಳಿ ಡಾಕ್ಟರೇಟ್‌ ನೀಡಬೇಕಾಯಿತು. ಇದು ಸರಿಯಾದುದ್ದಲ್ಲ. ಡಾಕ್ಟರೇಟ್‌ ಪಡೆಯುವವರು ಇಲ್ಲಿಗೆ ಬರಬೇಕು. ಜತೆಗೆ ಮಾರ್ಗದರ್ಶನ ನೀಡಬೇಕು ಎಂದು ಕೇಂದ್ರೀಯ ವಿ.ವಿ. ಕುಲಪತಿ ಪ್ರೊ| ಬಟ್ಟು ಸತ್ಯನಾರಾಯಣ ತಿಳಿಸಿದ್ದಾರೆ.

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.