ಏತ ನೀರಾವರಿಯಿಂದ ತಲ್ಲೂರು, ಉಪ್ಪಿನಕುದ್ರುವಿಗೆ ಅನ್ಯಾಯ


Team Udayavani, Mar 31, 2022, 12:24 PM IST

talluru

ತಲ್ಲೂರು: ಸೌಕೂರು ಏತ ನೀರಾವರಿ ಯೋಜನೆಯಿಂದ ತೀರಾ ನೀರಿನ ಅಗತ್ಯವಿದ್ದ ತಲ್ಲೂರು ಹಾಗೂ ಉಪ್ಪಿನಕುದ್ರು ಗ್ರಾಮಗಳಿಗೆ ಅನ್ಯಾಯವಾಗಿದೆ. ಅದಲ್ಲದೆ ಮೂಲ ಯೋಜನೆಯನ್ನು ತಿರುಚಲಾಗಿದೆ ಎನ್ನುವ ಆರೋಪ ಬುಧವಾರ ನಡೆದ ತಲ್ಲೂರು ಗ್ರಾ.ಪಂ.ನ ಗ್ರಾಮಸಭೆಯಲ್ಲಿ ಕೇಳಿ ಬಂದಿದೆ.

ತಲ್ಲೂರಿನ ಡಾ| ಬಿ.ಆರ್‌. ಅಂಬೇಡ್ಕರ್‌ ಭವನದಲ್ಲಿ ಗ್ರಾ.ಪಂ. ಅಧ್ಯಕ್ಷೆ ಭೀಮವ್ವ ಅಧ್ಯಕ್ಷತೆಯಲ್ಲಿ ನಡೆದ ತಲ್ಲೂರು ಗ್ರಾಮಸಭೆಯಲ್ಲಿ ಸೌಕೂರು ಏತ ನೀರಾವರಿ ಯೋಜನೆಯ ಕುರಿತಂತೆ ಚರ್ಚೆ ನಡೆಯಿತು.

ನೀರಿನ ಸಮಸ್ಯೆ

ಏತ ನೀರಾವರಿ ಯೋಜನೆ ಗುತ್ತಿಗೆದಾರರು ಬಹುತೇಕ ಎಲ್ಲ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಅದಲ್ಲದೆ ಎರಡೂ ಗ್ರಾಮಗಳಿಗೆ ಬೇಸಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, ಆದರೂ ಏತ ನೀರಾವರಿ ಯೋಜನೆಯಲ್ಲಿ ಸೇರಿಸದಿರುವುದು ಆಶ್ಚರ್ಯ. ಆ ಭಾಗದ ಗ್ರಾ.ಪಂ. ಸದಸ್ಯರು ಈ ಕುರಿತು ಧ್ವನಿಯೆತ್ತದಿರುವುದು ಸರಿಯಲ್ಲ ಎಂದು ಗ್ರಾಮಸ್ಥರಾದ ಚಂದ್ರಮ ತಲ್ಲೂರು ಹೇಳಿದರು. ಇದಕ್ಕುತ್ತರಿಸಿದ ಉಪಾಧ್ಯಕ್ಷ ಗಿರೀಶ್‌ ಎಸ್‌. ನಾಯ್ಕ, ತಲ್ಲೂರು ಮತ್ತು ಉಪ್ಪಿನಕುದ್ರು ನೀರಿನ ಅಗತ್ಯತೆ ಬಗ್ಗೆ ಈಗಾಗಾಲೇ ಶಾಸಕರ ಬಳಿ ಮನವಿ ಮಾಡಿದ್ದೇವೆ ಎಂದರು. ಏತ ನೀರಾವರಿ ಕಾಮಗಾರಿಯ ಹಿನ್ನೆಲೆ ವಿದ್ಯುತ್‌ ಸಂಪರ್ಕದ ಕುರಿತು ಗ್ರಾ.ಪಂ. ಅನುಮತಿ ಪಡೆಯದೆ ಕೆಲಸ ಮಾಡಲಾಗಿದೆ ಎಂದು ಮೆಸ್ಕಾಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳಲಾಯಿತು. ತಲ್ಲೂರು ಗ್ರಾಮಕ್ಕೆ ಏತ ನೀರಾವರಿಯಿಂದ ನೀರು ಹರಿಸದಿದ್ದರೆ ಇಲ್ಲಿಂದ ವಿದ್ಯುತ್‌ ಸಂಪರ್ಕ ಕಲ್ಪಿಸದಂತೆ ನಿರ್ಣಯ ಮಾಡಲು ಗ್ರಾಮಸ್ಥರಾದ ವೆಂಕಟ್‌, ಚಂದ್ರಮ ತಲ್ಲೂರು, ಕರಣ್‌ ಪೂಜಾರಿ ಆಗ್ರಹಿಸಿದರು.

ಗುರುತಿನ ಚೀಟಿ ನೀಡಿ

ಉಪ್ಪಿನಕುದ್ರು ಚಿಪ್ಪು ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಗುರುತಿನ ಚೀಟಿ ನೀಡಬೇಕೆಂದು ಹಿಂದಿನ ಸಭೆಯಲ್ಲಿ ತೀರ್ಮಾಸಲಾಗಿತ್ತು. ಏನಾದರೂ ಅವಘಡವಾದರೆ ಪರಿಹಾರಕ್ಕೆ ಗುರುತಿನ ಚೀಟಿ ಸಹಕಾರಿಯಾಗಲಿದ್ದು, ಈ ಬಗ್ಗೆ ಕ್ರಮಕೈಗೊಳ್ಳಿ ಎಂದು ಚಂದ್ರಮ ತಲ್ಲೂರು, ವೆಂಕಟ, ವಿಜೇಂದ್ರ, ಅಶೋಕ್‌ ಆಗ್ರಹಿಸಿದರು.

ತಲ್ಲೂರಿನ ರಾಷ್ಟ್ರೀಯ ಬ್ಯಾಂಕ್‌ನ ಎಟಿಎಂ ಸಮಸ್ಯೆ ಬಗ್ಗೆ ಮಹಿಳೆಯೊಬ್ಬರು ಪ್ರಸ್ತಾವಿಸಿದರು. 3ನೇ ವಾರ್ಡ್‌ ಆಶಾ ಕಾರ್ಯಕರ್ತೆ ಕಾರ್ಯವೈಖರಿ ಸರಿಯಿಲ್ಲವೆಂದು ರತ್ನಾ ಪೂಜಾರಿ ಆರೋಪಿಸಿದರು. ಕೋಟೆಬಾಗಿಲು ರಸ್ತೆಯಲ್ಲಿ ಅವೈಜ್ಞಾನಿಕ ಹಂಪ್‌ ಅಳವಡಿಸಿದ್ದನ್ನು ತೆರವು ಮಾಡಿದರೂ ಕೂಡ ಅವ್ಯವಸ್ಥೆ ಸರಿಪಡಿಸಿಲ್ಲ ಎನ್ನುವ ಆರೋಪ ಕೇಳಿ ಬಂತು.

ನೋಡಲ್‌ ಅಧಿಕಾರಿ ಸುಮಲತಾ ಮಾತನಾಡಿ, ಗ್ರಾಮಸಭೆಯಲ್ಲಿ ಗ್ರಾಮಸ್ಥರ ಪಾಲ್ಗೊಳ್ಳುವಿಕೆ ಅಗತ್ಯ. ಮಾರ್ಚ್‌ನಲ್ಲಿ ಗ್ರಾಮಸಭೆಯಿದ್ದರೆ, ಅಧಿಕಾರಿಗಳಿಗೆ ತುಸು ಸಮಸ್ಯೆಯಾಗುತ್ತದೆ. ಹಾಗಾಗಿ ಮಾರ್ಚ್‌ನಲ್ಲಿ ಗ್ರಾಮಸಭೆ ನಡೆಸದಿರುವುದು ಸೂಕ್ತ ಎಂಬ ಸಲಹೆ ನೀಡಿದರು.

ಆರಂಭದಲ್ಲಿ ಶಿಕ್ಷಣ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳನ್ನು ಹೊರತುಪಡಿಸಿ ಬೇರೆ ಇಲಾಖಾಧಿಕಾರಿಗಳು ಬಾರದ ಬಗ್ಗೆ ಅಸಮಾಧಾನ ವ್ಯಕ್ತವಾಯಿತು. ಬಳಿಕ ಬಹುತೇಕ ಎಲ್ಲ ಅಧಿಕಾರಿಗಳು ಆಗಮಿಸಿದರು. ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಉದಯ್‌ ಕುಮಾರ್‌ ತಲ್ಲೂರು ಮಾತನಾಡಿದರು. ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು, ಅಧಿಕಾರಿಗಳು, ಸಿಬಂದಿ ಉಪಸ್ಥಿತರಿದ್ದರು. ಪಿಡಿಒ ನಾಗರತ್ನಾ ಸ್ವಾಗತಿಸಿ, ಕಾರ್ಯದರ್ಶಿ ರತ್ನಾ ಕೆ. ವಂದಿಸಿದರು.

ಹೆದ್ದಾರಿ ಸಮಸ್ಯೆ ಪರಿಹರಿಸಿ

ಕಳೆದ ಗ್ರಾಮಸಭೆಯಲ್ಲಿ ಹೆದ್ದಾರಿ ಕಾಮಗಾರಿಯ ಗುತ್ತಿಗೆ ಕಂಪೆನಿ ಐಆರ್‌ಬಿ ಬಗ್ಗೆ ಹಲವು ದೂರುಗಳನ್ನು ಪ್ರಸ್ತಾವಿಸಲಾಗಿತ್ತು. ಸಂಬಂಧಪಟ್ಟ ಅಧಿಕಾರಿಗಳು ಬಾರಲಿಲ್ಲ. ಈಗಲೂ ಈ ಸಮಸ್ಯೆ ಬಗೆಹರಿದಿಲ್ಲ. ಇನ್ನೀಗ ಮಳೆಗಾಲ ಆರಂಭವಾಗಲಿದ್ದು, ಮತ್ತದೇ ಸಮಸ್ಯೆ ಉದ್ಭವಿಸಲಿದೆ. ಇದಕ್ಕೆ ಹೊಣೆ ಯಾರು. ಎಲ್ಲ ಕಡೆಯಿಂದ ಮಳೆ ನೀರು ಹೋಗಲು ಸೂಕ್ತ ಚರಂಡಿ ವ್ಯವಸ್ಥೆಯಿಲ್ಲ. ಸರ್ವಿಸ್‌ ರಸ್ತೆಯೂ ನಿರ್ಮಾಣವಾಗಿಲ್ಲ. ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವ ನಿರ್ಣಯ ಮಾಡುವಂತೆ ತಾ.ಪಂ. ಮಾಜಿ ಸದಸ್ಯ, ಕರಣ್‌ ಪೂಜಾರಿ ಒತ್ತಾಯಿಸಿದರು.

ಕೊಳಚೆ ನೀರಿನ ಸಮಸ್ಯೆ

ತಲ್ಲೂರು ಪೇಟೆಯಲ್ಲಿರುವ ವಸತಿ ಸಮುಚ್ಚಯ ವೊಂದರಿಂದ ಕೊಳಚೆ ನೀರನ್ನು ಚರಂಡಿಗೆ ಬಿಡುತ್ತಿದ್ದು, ದುರ್ನಾತ ಬೀರುತ್ತಿದೆ. ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಿ, ಪಿಟ್‌ ತೆರವು ಮಾಡಿಸಿ ಎಂದು ಚಂದ್ರಮ ತಲ್ಲೂರು ಆಗ್ರಹಿಸಿದರು. ಇದಕ್ಕೆ ಧ್ವನಿಗೂಡಸಿದ ಕರಣ್‌ ಪೂಜಾರಿ, ಇದು ಸಾರ್ವಜನಿಕರ ಬಹುದೊಡ್ಡ ಸಮಸ್ಯೆ, ಪ್ರತಿ ಗ್ರಾಮಸಭೆಯಲ್ಲಿಯೂ ನಿರ್ಣಯ ಕೈಗೊಂಡರೂ, ಯಾವುದೇ ಸೂಕ್ತ ಕ್ರಮಕ್ಕೆ ಮುಂದಾಗಿಲ್ಲ ಯಾಕೆ ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.