ಶ್ರೀಶೈಲ ಗಲಾಟೆ: ಗಾಯಾಳು ಬೆಂಗಳೂರು ಆಸ್ಪತ್ರೆಗೆ ದಾಖಲು

ರಾಜ್ಯ ಸರ್ಕಾರದಿಂದಲೇ ಚಿಕಿತ್ಸೆಗೆ ಸಕಲ ವ್ಯವಸ್ಥೆ

Team Udayavani, Apr 2, 2022, 10:26 AM IST

2

ಬಾಗಲಕೋಟೆ: ಆಂಧ್ರಪ್ರದೇಶದ ಸುಕ್ಷೇತ್ರ ಶ್ರೀಶೈಲಂನಲ್ಲಿ ಕರ್ನಾಟಕದ ಪಾದಯಾತ್ರಿಕರು ಹಾಗೂ ಅಲ್ಲಿನ ವ್ಯಾಪಾರಸ್ಥರೊಂದಿಗೆ ನಡೆದ ಘರ್ಷಣೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬೀಳಗಿ ತಾಲೂಕು ಜಾನಮಟ್ಟಿಯ ಶ್ರೀಶೈಲ ವಾರಿಮಠನನ್ನು ಕರ್ನೂಲ್‌ ಆಸ್ಪತ್ರೆಯಿಂದ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ತೆಂಗಿನಕಾಯಿ ಸುಲಿಯುವ ಕಬ್ಬಿಣದ ರಾಡ್‌ನಿಂದ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಸುಮಾರು 10ಕ್ಕೂ ಹೆಚ್ಚು ಹೊಲಿಗೆ ಹಾಕಲಾಗಿದೆ. ಕರ್ನೂಲ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ.

ಈ ವ್ಯವಸ್ಥೆಯನ್ನು ರಾಜ್ಯ ಸರ್ಕಾರವೇ ಮಾಡಿದ್ದು, ರಾಯಚೂರಿನ ಡಿವೈಎಸ್ಪಿ, ಶುಕ್ರವಾರ ಬೆಳಗ್ಗೆ ಕರ್ನೂಲ್‌ ಆಸ್ಪತ್ರೆಗೆ ಭೇಟಿ ನೀಡಿ, ಬೆಂಗಳೂರಿಗೆ ರವಾನಿಸಲು ಎಲ್ಲ ರೀತಿಯ ವ್ಯವಸ್ಥೆ ಮಾಡಿದ್ದಾರೆ ಎಂದು ಗಾಯಗೊಂಡಿರುವ ಶ್ರೀಶೈಲ ವಾರಿಮಠ ಅವರ ಸಹೋದರ ಶಿವು ವಾರಿಮಠ “ಉದಯವಾಣಿ’ಗೆ ತಿಳಿಸಿದ್ದಾರೆ.

ನಮ್ಮ ಸಹೋದರ ಶ್ರೀಶೈಲ ವಾರಿಮಠ ನಮ್ಮೂರಿನಿಂದ ಒಬ್ಬನೇ ಶ್ರೀಶೈಲಕ್ಕೆ ಬಂದಿದ್ದರು. ಬಾಗಲಕೋಟೆಯಿಂದ ಕರ್ನೂಲ್‌ವರೆಗೆ ರೈಲ್ವೆ ಮೂಲಕ ಬಂದಿದ್ದು, ಇಲ್ಲಿನ ಅಸಂಪುರದಿಂದ ಪಾದಯಾತ್ರೆ ಮೂಲಕ ತೆರಳಿದ್ದರು. ಈ ಗಲಾಟೆ ಹೇಗಾಯಿತು, ಏಕಾಯಿತು ಎಂಬುದು ಯಾವುದೂ ನನಗೆ ಗೊತ್ತಿಲ್ಲ. ಜಾನಮಟ್ಟಿಯ ಯುವಕ ತೀವ್ರವಾಗಿ ಗಾಯಗೊಂಡಿದ್ದಾನೆ ಎಂದು ಮೊದಲು ಸುದ್ದಿ ತಿಳಿಯಿತು. ಬಳಿಕ ಮೃತಪಟ್ಟಿದ್ದಾನೆ ಎಂದು ವದಂತಿಯೂ ಹರಡಿತ್ತು. ನಮಗೆ ತೀವ್ರ ಭಯವಾಗಿತ್ತು. ಹೀಗಾಗಿ ನಾನೇ ಸ್ವತಃ ಕರ್ನೂಲ್‌ಗೆ ಬಂದಿದ್ದೇನೆ ಎಂದರು.

ಕರ್ನೂಲ್‌ಗೆ ಬಂದಾಗ ಇಲ್ಲಿನ ವೈದ್ಯರು, ಪೊಲೀಸರು ಇದ್ದರು. ತಲೆಗೆ ಹೊಲಿಗೆ ಹಾಕಿರುವುದು ಮಾತ್ರ ಕಾಣುತ್ತಿತ್ತು. ನಮ್ಮ ಸಹೋದರನಿಗೆ ಪ್ರಜ್ಞೆ ಇದ್ದು, ನನ್ನನ್ನು ಗುರುತಿಸಿದ್ದಾನೆ. ಆದರೆ, ಮಾತು ಬರುತ್ತಿಲ್ಲ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾನೆ. ಕರ್ನೂಲ್‌ನಲ್ಲಿ ಭಾಷಾ ಸಮಸ್ಯೆಯಿಂದ ಅಲ್ಲಿನ ವೈದ್ಯರು, ಪೊಲೀಸರು ಏನು ಹೇಳಿದರು ಎಂಬುದೇ ತಿಳಿದಿಲ್ಲ. ರಾಯಚೂರು ಡಿವೈಎಸ್ಪಿಯವರು, ನೀವು ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆಗೆ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದರು. ಅವರೇ ವ್ಯವಸ್ಥೆ ಮಾಡಿರುವ ವಾಹನದಲ್ಲಿ ಬೆಂಗಳೂರಿಗೆ ಆಗಮಿಸಿದ್ದೇವೆ ಎಂದರು.

ಟಾಪ್ ನ್ಯೂಸ್

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

MOdi (3)

Varanasi; ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ ದಿನಾಂಕ ನಿಗದಿ

jairam ramesh

By-election ಮೂಲಕವೂ ಪ್ರಿಯಾಂಕಾ ಸಂಸತ್‌ ಪ್ರವೇಶ: ಜೈರಾಮ್‌ ರಮೇಶ್‌

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

hemanth-soren

E.D. ಬಂಧನ ಪ್ರಶ್ನಿಸಿದ್ದ ಸೊರೇನ್‌ ಅರ್ಜಿ ತಿರಸ್ಕಾರ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

MOdi (3)

Varanasi; ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ ದಿನಾಂಕ ನಿಗದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.