ತ್ಯಾಜ್ಯ ತುಂಬಿ ನಿಂತಿವೆ ಹೆದ್ದಾರಿ ಬದಿಯ ತೋಡುಗಳು

ಸುರತ್ಕಲ್‌: ಪೆಪ್‌ಲೈನ್‌ ಕಾಮಗಾರಿ ಅವಾಂತರ, ಹೂಳು, ಕಸಕಡ್ಡಿ

Team Udayavani, Apr 4, 2022, 11:36 AM IST

suratkal

ಸುರತ್ಕಲ್‌: ಪಾಲಿಕೆಗೆ ಸೇರಿದ ರಾಜಕಾಲುವೆಯ ಸಮಸ್ಯೆಯಂತೆಯೇ ಹೆದ್ದಾರಿ ಇಲಾಖೆಯು ಚತುಷ್ಪಥ ರಸ್ತೆಯ ಇಕ್ಕೆಲಗಳಲ್ಲಿ ನಿರ್ಮಿಸಿದ ತೋಡುಗಳೂ ದುಃಸ್ಥಿತಿಯಲ್ಲಿವೆ. ಮಳೆ ನೀರು ರಸ್ತೆ ಮತ್ತು ಇಕ್ಕೆಲಗಳ ತಗ್ಗು ಪ್ರದೇಶಗಳಿಗೆ ನುಗ್ಗುವುದರಲ್ಲಿ ಅನುಮಾನವಿಲ್ಲ.

ಸುರತ್ಕಲ್‌ ಭಾಗದಲ್ಲಿ ಗ್ಯಾಸ್‌ ಪೈಪ್‌ ಲೈನ್‌, ಜಲಸಿರಿ, ಕೇಬಲ್‌ ಅಳವಡಿಕೆ ಹೀಗೆ ವಿವಿಧ ಕಾರಣಗಳಿಗಾಗಿ ಹೆದ್ದಾರಿ ಬದಿ ಹೊಂಡ ತೋಡಿ ಬಿಡಲಾಗಿದ್ದು, ಮಳೆಗೆ ಹೆದ್ದಾರಿ ಬದಿ ತೋಡು ಪಾಲಾಗಿದೆ. ಭೂಗತ ಗ್ಯಾಸ್‌ ಪೈಪ್‌ಲೈನ್‌ ಕೊರೆಯುವ ಸಂದರ್ಭ ಮೇಲೆ ಬಂದ ಕೆಸರು ಮಿಶ್ರಿತ ನೀರು ಮಣ್ಣು ಸಮೀಪದ ತೋಡು ಸೇರಿ ಭರ್ತಿಯಾಗಿದೆ. ಸುರತ್ಕಲ್‌ನ ತಡಂಬೈಲ್‌ ಮತ್ತು ಸರ್ವಿಸ್‌ ರಸ್ತೆಯ ನಡುವೆ ಕಾಮಗಾರಿ ನಡೆದ ಹಲವು ಕಡೆ ಇದೇ ಸ್ಥಿತಿಯಿದೆ. ಪೂರ್ವ ಮುಂಗಾರು ಇನ್ನೇನು ಆರಂಭವಾಗಲಿದ್ದು, ಇದುವರೆಗೆ ತೋಡು ಸ್ವತ್ಛಗೊಳಿಸುವ ಕೆಲಸಕ್ಕೆ ಹೆದ್ದಾರಿ ಪ್ರಾಧಿಕಾರ ಮುಂದಾಗಿಲ್ಲ. ಅಧಿಕಾರಿಗಳು ಕನಿಷ್ಠ ಪಕ್ಷ ಸರ್ವಿಸ್‌ ರಸ್ತೆ, ತೋಡುಗಳ ಸ್ಥಿತಿಗತಿ ಪರಿಶೀಲನೆಯನ್ನೂ ನಡೆಸಿಲ್ಲ. ಹಲವು ಕಡೆ ವಿವಿಧ ಬಡಾವಣೆ, ಹೆದ್ದಾರಿಯಿಂದ ಸರ್ವಿಸ್‌ ರಸ್ತೆಗೆ ಸಂಪರ್ಕ ಕಲ್ಪಿಸಲು ತೋಡಿಗೆ ಮಣ್ಣು ಸುರಿಯಲಾಗಿದೆ. ಇನ್ನು ಹಲವೆಡೆ ಹೆದ್ದಾರಿ ಬದಿ ತೋಡುಗಳು ತ್ಯಾಜ್ಯ ಎಸೆಯುವ ಗುಂಡಿಯಾಗಿ ಮಾರ್ಪಟ್ಟಿವೆ. ಮಳೆನೀರಿನ ಜತೆಗೆ ತ್ಯಾಜ್ಯ ಸೇರಿಕೊಂಡು ಸರಾಗ ಹರಿವಿಗೆ ಅಡ್ಡಿಯಾಗಿ ಉಕ್ಕೇರುವುದು ಖಚಿತ. ಇನ್ನು ಹಲವು ಕಡೆ ತೋಡು ಬ್ಲಾಕ್‌ ಆಗಿ ಮಳೆ ನೀರು ಸರ್ವಿಸ್‌ ರಸ್ತೆಯಲ್ಲಿ ಹರಿದು ತಗ್ಗು ಪ್ರದೇಶದ ಮನೆಗಳಿಗೆ ನುಗ್ಗುವ ಭೀತಿಯಿದೆ. ಹೆದ್ದಾರಿ ಇಲಾಖೆಯ ಅನುಮತಿಯೊಂದಿಗೆ ರಸ್ತೆ ಅಗೆದಿದ್ದರೂ ಪಾಲಿಕೆ ವ್ಯಾಪ್ತಿಯ ಬಡಾ ವಣೆಗಳಿಗೆ ಮಳೆಗಾಲದಲ್ಲಿ ಸಮಸ್ಯೆ ಆಗಲಿ ರುವುದರಿಂದ ಪಾಲಿಕೆ ಅಧಿಕಾರಿಗಳು ತೋಡುಗಳ ಸ್ವತ್ಛತೆಗೆ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ತಾಕೀತು ಮಾಡಬೇಕಿದೆ.

ಮುಕ್ಕ ಪ್ರದೇಶದಲ್ಲಿ ಬೃಹತ್‌ ರಾಜ ಕಾಲುವೆಯ ಕಾಮಗಾರಿಗೆ ಹೆದ್ದಾರಿ ಇಲಾಖೆ ಮುಂದಾಗಿದ್ದು, ಮಳೆಗಾಲಕ್ಕೆ ಮುನ್ನ ಪೂರ್ಣಗೊಳಿಸಲು ಹೆಣಗಾಡುತ್ತಿದೆ. ಬೈಕಂಪಾಡಿ ಪ್ರದೇಶದಲ್ಲಿ ಇದ್ದ ತೋಡುಗಳು ಹೂಳು ತುಂಬಿ ಕಾಣದಂತಾಗಿವೆ. ಘನ ಟ್ರಕ್‌ಗಳ ಸಂಚಾರದಿಂದ ಈ ತೋಡುಗಳು ಸರ್ವನಾಶವಾಗಿವೆ. ವಿವಿಧೆಡೆ ಅಂಗಡಿ ಮುಂಗಟ್ಟುಗಳ ಮುಂಭಾಗ ತೋಡುಗಳಿಗೆ ಅಡ್ಡಲಾಗಿ ಪೈಪ್‌ಗ್ಳನ್ನು ಅಳವಡಿಸಿದೆ. ಇಲ್ಲಿ ಕಟ್ಟಿಕೊಂಡಿರುವ ತ್ಯಾಜ್ಯ ರಾಶಿಯನ್ನು ಸ್ವತ್ಛಗೊಳಿಸಿಲ್ಲ. ಬೈಕಂಪಾಡಿ ಜಂಕ್ಷನ್‌ ಭಾಗದಲ್ಲಿ ತೋಡುಗಳ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆಯಲ್ಲೇ ಹರಿದು ಸ್ಥಳೀಯ ಕಾಲುವೆ ಸೇರುತ್ತದೆ. ಇದರಿಂದ ಒಳ ರಸ್ತೆಗಳ ಡಾಮರು ಎದ್ದು ಹೋಗಿದೆ.

ಹೆದ್ದಾರಿ ಬದಿಯ ತೋಡುಗಳ ನಿರ್ಮಾಣ ಅವೈಜ್ಞಾನಿಕವಾಗಿದ್ದು, ಚಿತ್ರಾಪುರ, ಕುಳಾಯಿ ಭಾಗದಲ್ಲಿ ಮಳೆ ನೀರು ತೋಡಿನಲ್ಲಿಯೇ ನಿಂತು ನುಸಿ ಕಾಟಕ್ಕೆ ಕಾರಣವಾಗುತ್ತಿದೆ.

ಹೆದ್ದಾರಿ ಅಧಿಕಾರಿಗಳೇ ಹೊಣೆ

ಹೆದ್ದಾರಿ ಬದಿ ತೋಡುಗಳು ಹೂಳು, ಕಸ ಕಡ್ಡಿ ಸ್ವತ್ಛತೆಗೆ ಹೆದ್ದಾರಿ ಇಲಾಖೆಯೇ ಮುಂದಾಗಬೇಕು. ಈ ಬಗ್ಗೆ ಪಾಲಿಕೆಯು ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರುವ ಕೆಲಸ ಮಾಡಲಿದೆ. ಮಳೆಗಾಲದಲ್ಲಿ ಮನೆ, ಬಡಾವಣೆಗೆ ಕೃತಕ ನೀರು ನುಗ್ಗಿದರೆ ಹೆದ್ದಾರಿ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು. -ಪ್ರೇಮಾನಂದ ಶೆಟ್ಟಿ, ಮೇಯರ್‌, ಮಂಗಳೂರು ಮನಪಾ

ಟಾಪ್ ನ್ಯೂಸ್

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.