ಬಸ್ ಪ್ರಯಾಣ ದರ ಹೆಚ್ಚಳ: ಇನ್ನೂ ತೀರ್ಮಾನ ಆಗಿಲ್ಲ
Team Udayavani, Apr 7, 2022, 6:50 AM IST
ಬೆಂಗಳೂರು: ಬಸ್ ಪ್ರಯಾಣ ದರ ಹೆಚ್ಚಳದ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಆಗಿಲ್ಲ’ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್ ಸ್ಪಷ್ಟಪಡಿಸಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಳು ವರ್ಷಗಳ ಹಿಂದೆ ಬಿಎಂಟಿಸಿ ಬಸ್ ಟಿಕೆಟ್ ದರ ಪರಿಷ್ಕರಣೆ ಮಾಡಲಾಗಿತ್ತು. ಅಲ್ಲಿಂದ ಇದುವರೆಗೆ ಶೇ. 50ರಷ್ಟು ಡೀಸೆಲ್ ಬೆಲೆ ಹೆಚ್ಚಳವಾಗಿದ್ದು, ಇದರಿಂದ ಸಂಸ್ಥೆಗೆ ಹೊರೆಯಾಗುತ್ತಿದೆ. ಸದ್ಯ ರಾಜ್ಯ ಸರಕಾರ ಸಂಸ್ಥೆಗೆ ಆಗುತ್ತಿರುವ ಹೊರೆಯನ್ನು ಭರಿಸುತ್ತಿದೆ. ಆದರೆ ಟಿಕೆಟ್ ದರ ಹೆಚ್ಚಿಸುವ ಬಗ್ಗೆ ಸರಕಾರದ ಮಟ್ಟದಲ್ಲಿ ತೀರ್ಮಾನ ಆಗಲಿದ್ದು, ಈ ನಿಟ್ಟಿನಲ್ಲಿ ಇದುವರೆಗೆ ಯಾವುದೇ ನಿರ್ಣಯ ಆಗಿಲ್ಲ ಎಂದು ಹೇಳಿದರು.
ಇ-ಪಾವತಿ ಸೌಲಭ್ಯದ ಇಟಿಎಂ
ಈ ಹಿಂದೆ ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ಬಳಕೆ ಮಾಡಲಾಗುತ್ತಿದ್ದ ಇಟಿಎಂನಲ್ಲಿ (ಎಲೆಕ್ಟ್ರಾನಿಕ್ ಟಿಕೆಟ್ ವಿತರಣ ಯಂತ್ರ) ಟಿಕೆಟ್ ಮಾತ್ರ ಮುದ್ರಣ ಮಾಡಿ ವಿತರಣೆ ಮಾಡಲಾಗುತ್ತಿತ್ತು. ಹೊಸದಾಗಿ ವಿತರಣೆ ಮಾಡುತ್ತಿರುವ ಯಂತ್ರಗಳಲ್ಲಿ ಟಿಕೆಟ್ ಮುದ್ರಣಗೊಂದಿಗೆ ಫೋನ್ಪೇ, ಗೂಗಲ್ಪೇ, ಎಟಿಎಂ ಕಾರ್ಡ್ ಸೇರಿದಂತೆ ಇನ್ನಿತರ ಡಿಜಿಟಲ್ ಮಾದರಿಯಲ್ಲಿ ಹಣ ಪಾವತಿ ಮಾಡಿ ಟಿಕೆಟ್ ಪಡೆಯಬಹುದಾಗಿದೆ. ಪ್ರಾಯೋಗಿಕವಾಗಿ ಇದನ್ನು ಈಗಾಗಲೇ ಜಾರಿಗೊಳಿಸಲಾಗಿದೆ. ಟೆಂಡರ್ ಆಹ್ವಾನಿಸಿ ಎಲ್ಲ ಬಸ್ಗಳಲ್ಲಿಯೂ ಈ ವ್ಯವಸ್ಥೆಯನ್ನು ವಿಸ್ತರಿಸಲಾಗುವುದು ಎಂದು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ