ಸಂಕಷ್ಟದಲ್ಲೂ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ: ರತ್ನಾಕರ ವಿ. ಶೆಟ್ಟಿ

ಬಾಂಬೆ ಬಂಟ್ಸ್‌ ಅಸೋಸಿಯೇಶನ್‌: ಬಂಟ್ಸ್‌ ಇನ್‌ಸ್ಟಿಟ್ಯೂಟ್‌ ಫಾರ್‌ ಹೈಯರ್‌ ಎಜುಕೇಶನ್‌ನ ಪದವಿ ಪ್ರದಾನ

Team Udayavani, Apr 7, 2022, 5:45 PM IST

shetty

ನವಿಮುಂಬಯಿ: ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ತರ ವಾಗಿದೆ. ಕಳೆದ ಎರಡು ವರ್ಷಗಳ ಕಾಲ ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ಬಾಂಬೆ ಬಂಟ್ಸ್‌ ಅಸೋಸಿಯೇಶನ್‌ ಉನ್ನತ ಶಿಕ್ಷಣ ಸಂಸ್ಥೆಯು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವಲ್ಲಿ ಯಶಸ್ವಿಯಾಗಿದೆ. ಸಂಸ್ಥೆಯ ಶಿಕ್ಷಕ ವೃಂದದವರು, ಶಿಕ್ಷಕೇತರ ಸಿಬಂದಿಯ ಸಹಾಯ, ಸಹಕಾರವನ್ನು ಮರೆಯುವಂತಿಲ್ಲ. ವಿದ್ಯಾರ್ಥಿಗಳು ಪದವಿ ಪಡೆಯುವುದರೊಂದಿಗೆ ಸುಸಂಸ್ಕೃತರಾಗಿ ಇಂದು ಹೊರಹೊಮ್ಮಿದ್ದಾರೆ ಎಂಬ ಬಲವಾದ ನಂಬಿಕೆ ನಮಗಿದ್ದು, ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಉಜ್ವಲಗೊಳ್ಳಲಿ ಎಂದು ಬಾಂಬೆ ಬಂಟ್ಸ್‌ ಅಸೋಸಿಯೇಶನ್‌ ಇದರ ಉನ್ನತ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ನ್ಯಾಯವಾದಿ ರತ್ನಾಕರ ವಿ. ಶೆಟ್ಟಿ ಅವರು ಹೇಳಿದರು.

ಜುಯಿನಗರದ ಬಾಂಬೆ ಬಂಟ್ಸ್‌ ಅಸೋಸಿ ಯೇಶನ್‌ ಇದರ ಬಂಟ್ಸ್‌ ಸೆಂಟರ್‌ನಲ್ಲಿ ಮಾ. 26 ರಂದು ನಡೆದ ಬಂಟ್ಸ್‌ ಇನ್‌ಸ್ಟಿಟ್ಯೂಟ್‌ ಫಾರ್‌ ಹೈಯರ್‌ ಎಜುಕೇಶನ್‌ ಸಂಸ್ಥೆಯ ವಾರ್ಷಿಕ ಪದವಿ ಪ್ರದಾನ ಸಮಾರಂಭದ ನೇತೃತ್ವ ವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉನ್ನತ ಹುದ್ದೆಯನ್ನು ಪಡೆದು ಕಲಿತ ಶಿಕ್ಷಣ ಸಂಸ್ಥೆ ಹಾಗೂ ಕಲಿಸಿದ ಗುರುಗಳನ್ನು ಎಂದಿಗೂ ಮರೆಯಬಾರದು. ಅಸೋಸಿಯೇಶನ್‌ನ ಶಿಕ್ಷಣ ಸಂಸ್ಥೆಯಲ್ಲಿ ಗುಣ ಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದ್ದು, ಸಮಾಜ ಬಾಂಧವರು ಹಾಗೂ ತುಳು-ಕನ್ನಡಿಗರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿದ್ದ ಹೊಟೇಲ್‌ ಉದ್ಯಮಿ ರಘುರಾಮ ಶೆಟ್ಟಿ ಮಾತನಾಡಿ, ಇಂದಿನ ಸಮಾರಂಭದಲ್ಲಿ ವಿದ್ಯಾರ್ಥಿಗಳ ಮುಖದಲ್ಲಿರುವ ನಗುವನ್ನು ಕಂಡಾಗ ಸಂತೋಷವಾಗುತ್ತಿದೆ. ಪದವಿ ಪಡೆದ ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳ್ಳಲಿ ಎಂದು ಹಾರೈಸಿದರು. ಇನ್ನೋರ್ವ ಅತಿಥಿ ರಿಜೆನ್ಸಿ ಗ್ರೂಪ್‌ ಆಫ್‌ ಹೊಟೇಲ್ಸ್‌ ಇದರ ಮುಖ್ಯ ಆಡಳಿತ ನಿರ್ದೇಶಕ ಜಯರಾಮ್‌ ಶೆಟ್ಟಿ ಮಾತನಾಡಿ, ಬಾಂಬೆ ಬಂಟ್ಸ್‌ ಅಸೋಸಿಯೇಶನ್‌ ಸಾಮಾಜಿಕ ಕ್ಷೇತ್ರದಲ್ಲಿ ಮಾತ್ರ ವಲ್ಲದೆ, ಶೈಕ್ಷಣಿಕ ರಂಗದಲ್ಲೂ ಕ್ರಾಂತಿಯನ್ನೇ ಮಾಡಿದೆ. ಎಲ್ಲ ಸಮಾಜದ ವಿದ್ಯಾರ್ಥಿಗಳು ಇಲ್ಲಿನ ಶೈಕ್ಷಣಿಕ ಸಂಸ್ಥೆಯ ಸೌಲಭ್ಯಗಳನ್ನು ಪಡೆದುಕೊಂಡು ಗುಣಮಟ್ಟದ ಶಿಕ್ಷಣವನ್ನು ಪಡೆಯಬೇಕು ಎಂದು ತಿಳಿಸಿ ಶುಭ ಹಾರೈಸಿದರು.

ಸಮಾರಂಭದಲ್ಲಿ ಬಾಂಬೆ ಬಂಟ್ಸ್‌ ಅಸೋಸಿ ಯೇಶನ್‌ನ ಉಪಾಧ್ಯಕ್ಷ ಸಿಎ ಸುರೇಂದ್ರ ಕೆ. ಶೆಟ್ಟಿ, ಎಡ್ವೆ„ಸರಿ ಕೌನ್ಸಿಲ್‌ ಆಫ್‌ ಹೈಯರ್‌ ಎಜುಕೇಶನ್‌ ಕಮಿಟಿಯ ಕಾರ್ಯಾಧ್ಯಕ್ಷ ಅಡ್ವೊಕೇಟ್‌ ಅಶೋಕ್‌ ಡಿ. ಶೆಟ್ಟಿ, ಬಾಂಬೆ ಬಂಟ್ಸ್‌ ಅಸೋಸಿಯೇಶನ್‌ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲತಾ ಜಿ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಶಶಿಕಾಂತ್‌ ರೈ ಅವರು ಶುಭ ಹಾರೈಸಿದರು.

ಪ್ರಾಂಶುಪಾಲೆ ಡಾ| ರಶ್ಮಿ ಚಿತ್ಲಾಂ ವಿದ್ಯಾರ್ಥಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು. ಕಾರ್ಯಕ್ರಮದಲ್ಲಿ ಸುಮಾರು 125 ವಿದ್ಯಾರ್ಥಿ ಗಳಿಗೆ ಪದವಿ ಪ್ರದಾನ ಮಾಡಿ ಶುಭ ಹಾರೈ ಸಲಾಯಿತು. ಶಿಕ್ಷಣ ಸಂಸ್ಥೆಯ ಎಲ್ಲ ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಸಲಹೆ-ಸೂಚನೆಗಳನ್ನಿತ್ತು ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು. ವಿದ್ಯಾರ್ಥಿಗಳು ಹಾಗೂ ಗಣ್ಯರು ಸಾಂಪ್ರದಾಯಿಕ ಪದವಿ ಪ್ರದಾನ ಪೋಷಾಕಿನಲ್ಲಿ ಕಂಗೊಳಿಸಿದರು. ವಿದ್ಯಾರ್ಥಿಗಳು, ಶಿಕ್ಷಕವೃಂದದವರು, ಶಿಕ್ಷಕೇತರ ಸಿಬಂದಿ ಸಮಾರಂಭದ ಯಶಸ್ಸಿಗೆ ಸಹಕರಿಸಿದರು.

ಬಾಂಬೆ ಬಂಟ್ಸ್‌ ಅಸೋಸಿಯೇಶನ್‌ ಕಳೆದ ಹಲವಾರು ವರ್ಷಗಳಿಂದ ಶೈಕ್ಷಣಿಕ ರಂಗದಲ್ಲಿ ಅಪಾರ ಸಾಧನೆ ಮಾಡುತ್ತಿದ್ದು, ಗುಣಮಟ್ಟದ ಶಿಕ್ಷಣವನ್ನು ನೀಡುವಲ್ಲಿ ಯಶಸ್ವಿಯಾಗಿದೆ. ಕೊರೊನಾ ಸಂದರ್ಭದಲ್ಲೂ ವಿದ್ಯಾರ್ಥಿಗಳ ಕಲಿಕೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ವ್ಯವಸ್ಥೆ ಮಾಡಲಾಗಿತ್ತು. ಸಂಸ್ಥೆಯ ಅಭಿವೃದ್ಧಿಯಲ್ಲಿ ಶ್ರಮಿಸುತ್ತಿರುವ ಶೈಕ್ಷಣಿಕ ಸಮಿತಿಯ ಕಾರ್ಯಾಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಪ್ರಾಂಶುಪಾಲರು, ಹಾಗೂ ಶಿಕ್ಷಕವೃಂದದವರು, ಶಿಕ್ಷಕೇತರ ಸಿಬಂದಿಯನ್ನು ಅಭಿನಂದಿಸುತ್ತಿದ್ದೇನೆ. ಭವಿಷ್ಯದಲ್ಲೂ ನಿಮ್ಮೆಲ್ಲರ ಸಹಾಯ, ಸಹಕಾರ ಇದೇ ರೀತಿಯಲ್ಲಿ ಮುಂದುವರಿಯಲಿ. -ಮುರಳಿ ಕೆ. ಶೆಟ್ಟಿ ಅಧ್ಯಕ್ಷರು, ಬಾಂಬೆ ಬಂಟ್ಸ್‌ ಅಸೋಸಿಯೇಶನ್‌

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.