ರಾಯನಾಳದಲ್ಲೇ ಜಯದೇವ ಆಸ್ಪತ್ರೆ

ಕುಷ್ಠರೋಗ ಆಸ್ಪತ್ರೆ ಜಾಗದಲ್ಲಿ 10 ಎಕರೆ ಮಂಜೂರು

Team Udayavani, Apr 12, 2022, 11:29 AM IST

1

ಧಾರವಾಡ: ಕಿತ್ತೂರು ಕರ್ನಾಟಕ ಭಾಗದ ಬಹುನಿರೀಕ್ಷಿತ ಜಯದೇವ ಹೃದ್ರೋಗ ಚಿಕಿತ್ಸಾ ಆಸ್ಪತ್ರೆಯ ಶಾಖೆ ಸ್ಥಾಪಿಸಲು ಮುಖ್ಯಮಂತ್ರಿಗಳು ಬಜೆಟ್‌ ನಲ್ಲಿ ಘೋಷಣೆ ಮಾಡಿದ ಬೆನ್ನಲ್ಲೇ ಜಿಲ್ಲಾಡಳಿತ ಅಗತ್ಯ ಭೂಮಿ ಮಂಜೂರು ಮಾಡಿದೆ.

ಮೊಟ್ಟಮೊದಲ ಬಾರಿಗೆ ಬಜೆಟ್‌ನಲ್ಲಿ ಘೋಷಣೆಯಾದ ಉತ್ತರ ಕರ್ನಾಟಕ ಭಾಗದ ಯೋಜನೆಯೊಂದಕ್ಕೆ ಆಡಳಿತ ಯಂತ್ರ ತೀವ್ರ ಪ್ರಗತಿಯ ಸ್ವರೂಪ ನೀಡಿದಂತಾಗಿದ್ದು, ಅಂತಿಮವಾಗಿ ರಾಯನಾಳ ಗ್ರಾಮದಲ್ಲಿ ಆಸ್ಪತ್ರೆ ತಲೆ ಎತ್ತುವುದು ಪಕ್ಕಾ ಆಗಿದೆ.

2022-23ರ ರಾಜ್ಯ ಬಜೆಟ್‌ನಲ್ಲಿ 250 ಕೋಟಿ ರೂ.ಗಳನ್ನು ಮುಖ್ಯಮಂತ್ರಿಗಳು ನೀಡಿದ ಬೆನ್ನಲ್ಲೇ ಅದರ ಸ್ಥಾಪನೆ ಕೆಲಸಕ್ಕೂ ವೇಗ ಸಿಕ್ಕಿದೆ. ಹುಬ್ಬಳ್ಳಿ ಸಮೀಪದ ರಾಯನಾಳ ಗ್ರಾಮದಲ್ಲಿ ಈಗಾಗಲೇ ಅಸ್ತಿತ್ವದಲ್ಲಿದ್ದ ಕುಷ್ಠರೋಗ ಆಸ್ಪತ್ರೆಗೆ ಮೀಸಲಿದ್ದ 20 ಎಕರೆ ಜಾಗದಲ್ಲಿ 10 ಎಕರೆ ಪ್ರದೇಶವನ್ನು ಜಯದೇವ ಹೃದ್ರೋಗ ಆಸ್ಪತ್ರೆಗೆ ಮಂಜೂರಾತಿ ನೀಡಲಾಗಿದ್ದು, ಜಿಲ್ಲಾಡಳಿತ ಅಧಿಕೃತವಾಗಿ ಈ ಕುರಿತು ಸರ್ಕಾರಕ್ಕೆ ಪತ್ರ ಮತ್ತು ಅಗತ್ಯ ಕಾಗದ ಪತ್ರಗಳನ್ನು ರವಾನೆ ಮಾಡಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕನಸಿನ ಕೂಸಾಗಿರುವ ಹೃದ್ರೋಗ ಸಂಸ್ಥೆಯನ್ನು ಕಿಮ್ಸ್‌ ಆಸ್ಪತ್ರೆ ಆವರಣದಲ್ಲಿ ಸ್ಥಾಪಿಸಲಾಗುತ್ತದೆ ಎನ್ನುವ ಮಾತುಗಳು ಕೇಳಿ ಬರುತ್ತಿದ್ದವು. ಆದರೆ ಸಾರಿಗೆ-ಸಂಪರ್ಕ, ಸಂವಹನ ಮತ್ತು ನುರಿತ ವೈದ್ಯರ ಲಭ್ಯತೆಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪವೇ ಜಯದೇವ ಹೃದ್ರೋಗ ಸಂಸ್ಥೆ ಇದ್ದರೆ ಸೂಕ್ತ ಎನ್ನುವ ಸಲಹೆಯನ್ನು ನುರಿತ ವೈದ್ಯರು ನೀಡಿದ್ದರಿಂದ ರಾಯನಾಳವನ್ನು ಅಂತಿಮಗೊಳಿಸಲಾಗಿದೆ.

25 ಸಾವಿರ ಹೃದ್ರೋಗಿಗಳು: ಪ್ರತಿವರ್ಷ ಅಂದಾಜು 25 ಸಾವಿರಕ್ಕೂ ಅಧಿಕ ಹೃದ್ರೋಗಿಗಳು ಚಿಕಿತ್ಸೆ ಅರಸಿ ಬೆಂಗಳೂರು ಜಯದೇವ ಮತ್ತು ಖಾಸಗಿ ಹೃದ್ರೋಗ ಆಸ್ಪತ್ರೆಗಳ ಕದ ತಟ್ಟುತ್ತಿದ್ದಾರೆ. ಬಡವರು ಮತ್ತು ಅನಕ್ಷರಸ್ಥರಿಗಂತೂ ಬೆಂಗಳೂರಿನ ಹೃದ್ರೋಗ ಚಿಕಿತ್ಸೆ ದೊಡ್ಡ ಹಿಂಸೆಯಾಗುತ್ತಿದ್ದು, ಚಿಕಿತ್ಸೆಗಿಂತ ಅಲ್ಲಿಗೆ ಹೋಗಿ ಬರುವುದೇ ದೊಡ್ಡ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೆ ಹೃದ್ರೋಗ ಸಂಸ್ಥೆ ಕಾಲಿಟ್ಟಿದ್ದಕ್ಕೆ ಉತ್ತರ ಕರ್ನಾಟಕ ಭಾಗದ ಬಡ ಹಾಗೂ ಮಧ್ಯಮ ವರ್ಗದ ಜನರು ಸರ್ಕಾರವನ್ನು ಅಭಿನಂದಿಸಿದ್ದಾರೆ.

ಸ್ಥಳ ಪರಿಶೀಲಿಸಿದ ಕಾರ್ಯದರ್ಶಿ: ಜಯದೇವ ಹೃದ್ರೋಗ ಸಂಸ್ಥೆ ಸ್ಥಾಪನೆ ಕುರಿತು ಆರೋಗ್ಯ ಇಲಾಖೆ ಕಾರ್ಯದರ್ಶಿ ನವೀನರಾಜ್‌ ಸಿಂಗ್‌ ಅವರು ಹಿರಿಯ ಅಧಿಕಾರಿಗಳ ಜೊತೆಗೆ ಕಳೆದ ವಾರ ರಾಯನಾಳಕ್ಕೆ ಭೇಟಿಕೊಟ್ಟು ಜಾಗ ಪರಿಶೀಲನೆ ಮಾಡಿದ್ದಾರೆ. ಈಗಾಗಲೇ ಹುಬ್ಬಳ್ಳಿ ನಗರದ ಹೊರವಲಯ ಸಾಕಷ್ಟು ಬೆಳೆದಿದ್ದು, ರಾಯನಾಳ ಆಸ್ಪತ್ರೆಗೆ ಸೂಕ್ತ ಎನ್ನುವ ಅಭಿಮತಕ್ಕೆ ಅಧಿಕಾರಿಗಳೂ ಬಂದಿದ್ದಾರೆ ಎನ್ನಲಾಗಿದೆ.

ನಗರ ಮಧ್ಯದಲ್ಲಿರುವ ಕಿಮ್ಸ್‌ ಆಸ್ಪತ್ರೆಯ ಆವರಣದಲ್ಲಿ ಈಗಾಗಲೇ ಹೈಟೆಕ್‌ ಆಸ್ಪತ್ರೆ ಗುತ್ಛಗಳೇ ತಲೆ ಎತ್ತುತ್ತಿದ್ದು, ಹೃದ್ರೋಗ ಆಸ್ಪತ್ರೆಗೆ ಸಾಕಷ್ಟು ಸ್ಥಳಾವಕಾಶ ಮತ್ತು ಪ್ರತ್ಯೇಕ ವ್ಯವಸ್ಥೆ ಸೂಕ್ತ ಎನ್ನುವ ಅಭಿಮತದ ಹಿನ್ನೆಲೆಯಲ್ಲಿ ರಾಯನಾಳಕ್ಕೆ ಅಧಿಕಾರಿ ವರ್ಗವೂ ಹಸಿರು ನಿಶಾನೆ ತೋರಿಸಿದೆ ಎನ್ನಲಾಗಿದೆ.

ಸ್ವಂತ ಕಟ್ಟಡಕ್ಕೂ ಮುನ್ನವೇ ಆಸ್ಪತ್ರೆ? ಜಯದೇವ ಹೃದ್ರೋಗ ಸಂಸ್ಥೆ ಸ್ವಂತ ಕಟ್ಟಡ ನಿರ್ಮಾಣಕ್ಕೂ ಮುನ್ನವೇ ಜಿಲ್ಲೆಯಲ್ಲಿ ತಾತ್ಕಾಲಿಕವಾಗಿ ಎಲ್ಲಿಯಾದರೂ ಆಸ್ಪತ್ರೆ ಕಾರ್ಯಾರಂಭ ಮಾಡುವ ಸಾಧ್ಯತೆ ಇದೆ. ಸಣ್ಣ ಪ್ರಮಾಣದ ಯಂತ್ರೋಪಕರಣ ಮತ್ತು ವೈದ್ಯರ ತಂಡ ರಚಿಸಿ ತಾತ್ಕಾಲಿಕವಾಗಿ ವೈದ್ಯಕೀಯ ಸೇವೆ ಆರಂಭಿಸುವ ಚಿಂತನೆ ನಡೆದಿದ್ದು, ಈ ಕುರಿತು ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳು ಜಿಲ್ಲಾಡಳಿತದ ಜೊತೆ ಸಂಪರ್ಕ ನಡೆಸಿದ್ದಾರೆ ಎನ್ನಲಾಗಿದೆ. ಐಐಟಿಯನ್ನು ವಾಲ್ಮಿ ಕಟ್ಟಡದಲ್ಲಿ ನಡೆಸಿದ ಮಾದರಿಯಲ್ಲೇ ಹೃದ್ರೋಗ ಸಂಸ್ಥೆಯನ್ನು ಶೀಘ್ರವೇ ಆರಂಭಿಸಬೇಕು ಎನ್ನುವ ಒತ್ತಾಯ ಕೇಳಿಬರುತ್ತಿದೆ.

ಷಟ್ಪಥ ಕಾಮಗಾರಿಗೂ ಚುರುಕು: ಹು-ಧಾ ಬೈಪಾಸ್‌ ಷಟ್ಪಥ ಕಾಮಗಾರಿಯೂ ತೀವ್ರತೆ ಪಡೆದುಕೊಂಡಿದ್ದು ಈ ಸಂಬಂಧದ ಭೂ ಸ್ವಾಧೀನ ಪ್ರಕ್ರಿಯೆ ಚುರುಕು ಪಡೆದುಕೊಂಡಿದೆ. ಈಗಾಗಲೇ 67 ಎಕರೆ ಭೂಮಿಯನ್ನು ಹೆದ್ದಾರಿ ನಿರ್ಮಾಣಕ್ಕೆ ಜಿಲ್ಲಾಡಳಿತ ಭೂ ಸ್ವಾಧೀನ ಮಾಡಿಕೊಂಡಿದ್ದು, ಕಾಮಗಾರಿಯೂ ಶೀಘ್ರವೇ ಆರಂಭಗೊಳ್ಳುವ ಸಾಧ್ಯತೆ ಇದೆ. ಅಷ್ಟೇಯಲ್ಲ, 2024ರ ಒಳಗಾಗಿಯೇ ಹೆದ್ದಾರಿ ನಿರ್ಮಾಣ ಕಾಮಗಾರಿಯನ್ನೂ ಮುಕ್ತಾಯಗೊಳಿಸುವ ಯೋಜನೆ ರೂಪಿಸಲಾಗಿದೆ. ಈ ಹೆದ್ದಾರಿ ಹೃದ್ರೋಗ ಆಸ್ಪತ್ರೆ ಸಂಪರ್ಕವನ್ನು ಇನ್ನಷ್ಟು ಸರಳಗೊಳಿಸಲಿದೆ.

ಅವಳಿನಗರ ಮಧ್ಯದ ಜಾಗದ ಹುಡುಕಾಟ: ಜಯದೇವ ಹೃದ್ರೋಗ ಸಂಸ್ಥೆಯನ್ನು ಅವಳಿನಗರದ ಯಾವ ಭಾಗದಲ್ಲಿ ಸ್ಥಾಪನೆ ಮಾಡಬೇಕು ಎನ್ನುವ ಕುರಿತು ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಸಲಹೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಮೊದಲು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಯಲ್ಲಿ ಸ್ಥಾಪಿಸುವ ಚಿಂತನೆ ಇತ್ತು. ನಂತರ ಅವಳಿನಗರ ಮಧ್ಯದ ಜಾಗದ ಹುಡುಕಾಟ ನಡೆಯಿತು. ಕೊನೆಗೆ ರಾಯಾಪುರ, ತಡಸಿನಕೊಪ್ಪ, ಇಟ್ಟಿಗಟ್ಟಿ, ತಾರಿಹಾಳ, ಚಿಕ್ಕಮಲ್ಲಿಗವಾಡ ಸೇರಿ ಬೈಪಾಸ್‌ ಅಕ್ಕಪಕ್ಕದ ಅನೇಕ ಜಾಗಗಳನ್ನು ಗುರುತಿಸಲಾಗಿತ್ತು. ಇದೀಗ ರಾಯನಾಳ ಸೂಕ್ತ ಸ್ಥಳ ಎಂದು ನಿಗದಿ ಮಾಡಲಾಗಿದೆ.

ಉತ್ತರ ಕರ್ನಾಟಕ ಭಾಗದ ಹೃದ್ರೋಗಿಗಳಿಗೆ ಆದಷ್ಟು ಬೇಗ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಬಜೆಟ್‌ನಲ್ಲಿ ಘೋಷಣೆಯಾದ ಬೆನ್ನಲ್ಲೇ ಆಸ್ಪತ್ರೆ ನಿರ್ಮಾಣದ ಕೆಲಸ ತೀವ್ರಗತಿಯಲ್ಲಿ ಸಾಗಿದೆ. ಎರಡು ವರ್ಷದ ಅವಧಿಯಲ್ಲಿ ಕಟ್ಟಡ ಕಾಮಗಾರಿಗಳನ್ನು ಮುಗಿಸುವ ಗುರಿ ಹೊಂದಲಾಗಿದೆ. –ಆರೋಗ್ಯ ಇಲಾಖೆ ಹಿರಿಯ ಅಧಿಕಾರಿ, ಬೆಂಗಳೂರು

ರಾಯನಾಳ ಸೇರಿದಂತೆ ಜಯದೇವ ಆಸ್ಪತ್ರೆ ಸ್ಥಾಪನೆಗೆ ಅನೇಕ ಜಾಗಗಳನ್ನು ಗುರುತಿಸಲಾಗಿದೆ. ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಜನರ ಅಭಿಮತ ಪಡೆದು ಅಂತಿಮಗೊಳಿಸಲಾಗುವುದು. ಈ ಕುರಿತು ಶೀಘ್ರವೇ ಸರ್ಕಾರದ ಆದೇಶ ಹೊರಬೀಳಲಿದೆ.  –ನಿತೇಶ ಪಾಟೀಲ್‌, ಜಿಲ್ಲಾಧಿಕಾರಿ

-ಬಸವರಾಜ ಹೊಂಗಲ್‌

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.