ಸಿಡಿದೆದ್ದ ಕಾಂಗ್ರೆಸ್‌ನಿಂದ ಭಾರೀ ಪ್ರತಿಭಟನೆ

ಸಿಬಿಐ ತನಿಖೆ-ಈಶ್ವರಪ್ಪ ರಾಜೀನಾಮೆಗೆ ಆಗ್ರಹ

Team Udayavani, Apr 14, 2022, 2:34 PM IST

14

ಬೆಳಗಾವಿ: ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣವನ್ನು ಸರ್ಕಾರ ಕೂಡಲೇ ಸಿಬಿಐಗೆ ಒಪ್ಪಿಸಬೇಕು. ಇದಕ್ಕೆ ಕಾರಣರಾದ ಸಚಿವ ಕೆ.ಎಸ್‌. ಈಶ್ವರಪ್ಪ ಅವರಿಂದ ರಾಜೀನಾಮೆ ಪಡೆಯಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಒತ್ತಾಯಿಸಿದರು.

ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣ ಖಂಡಿಸಿ ಹಾಗೂ ಸಚಿವ ಕೆ.ಎಸ್‌. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ನಗರದ ಕಾಂಗ್ರೆಸ್‌ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆದ ಬೃಹತ್‌ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ಸಿದ್ದರಾಮಯ್ಯ ಆಡಳಿತಾವಧಿಯ ಸರ್ಕಾರವನ್ನು ಯಾವುದೇ ಆಧಾರವಿಲ್ಲದೇ ಶೇ.10 ಕಮಿಷನ್‌ ಸರ್ಕಾರ ಎಂದು ಆರೋಪಿಸಿದ್ದರು.

ಆದರೆ ಈಗ ಬಿಜೆಪಿ ಸರ್ಕಾರ ಹಾಗೂ ಸಚಿವ ಕೆ.ಎಸ್‌. ಈಶ್ವರಪ್ಪ ವಿರುದ್ಧ ಗುತ್ತಿಗೆದಾರರು ಶೇ.40 ಕಮಿಷನ್‌ ತೆಗೆದುಕೊಳ್ಳುತ್ತಿದ್ದಾರೆ ಎಂದು ಆರೋಪ ಮಾಡಿದರೂ ಪ್ರಧಾನಿ ಮೋದಿ ತುಟಿ ಬಿಚ್ಚುತ್ತಿಲ್ಲ ಎಂದರು.

ಗುತ್ತಿಗೆದಾರ ಸಂತೋಷ ಪಾಟೀಲ್ ಪತ್ರಕ್ಕೆ ಪ್ರಧಾನಿ, ರಾಜ್ಯ ಸರ್ಕಾರ ಸ್ಪಂದಿಸಿದ್ದರೆ ಸಂತೋಷ ಅವರ ಜೀವ ಉಳಿಸಬಹುದಿತ್ತು. ಆದರೆ ಬಿಜೆಪಿ ಸರ್ಕಾರ ಹಾಗೂ ಸಚಿವರ ಭ್ರಷ್ಟ ಆಡಳಿತಕ್ಕೆ ಸಂತೋಷ ಜೀವ ಬಲಿಯಾಗಿದ್ದು, ಅವರ ಕುಟುಂಬ ಅನಾಥವಾಗಿದೆ. ಗುತ್ತಿಗೆದಾರ ಸಂತೋಷ ಪಾಟೀಲ ತನಗೆ ಆದ ಅನ್ಯಾಯದ ಬಗ್ಗೆ ಸರ್ಕಾರದ ಗಮನಕ್ಕೆ ತಂದಿದ್ದರು. ಆದರೆ ಸರ್ಕಾರ ಅವರಿಗೆ ಸ್ಪಂದಿಸಿಲ್ಲ. ಶೇ.40ರಷ್ಟು ಕಮಿಷನ್‌ ತೆಗೆದುಕೊಳ್ಳುವ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಪ್ರಕರಣದಲ್ಲಿ ಸರಿಯಾದ ತನಿಖೆ ನಡೆಯಬೇಕು. ಸಂತೋಷಗೆ ಯಾರಾದರೂ ಹೇಳಿ ಕೆಲಸ ಮಾಡಿಸಿರಬಹುದು. ಇದರ ಬಗ್ಗೆ ಸಮಗ್ರ ತನಿಖೆ ನಡೆಸಲಿ. ಶಾಸಕರ ಗಮನಕ್ಕೆ ತರದೆ ಕಾಮಗಾರಿ ನಡೆಸಲಾಗಿದೆ. ಇದು ನಮ್ಮ ಕ್ಷೇತ್ರದಲ್ಲೂ ಆಗಿದೆ. ಇದೇ ರೀತಿ ಅನೇಕ ಕಡೆಗಳಲ್ಲಿ ನಡೆದಿದೆ ಎಂದರು. ‌

ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಕಚೇರಿ ಎದುರು ಕೆ.ಎಸ್‌. ಈಶ್ವರಪ್ಪ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಕೂಡಲೇ ಕಠಿಣ ಕ್ರಮ ಜರುಗಿಸಬೇಕು. ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಶಾಸಕಿ ಲಕ್ಷ್ಮೀ ಹೆಬ್ಟಾಳಕರ್‌, ಮಾಜಿ ಶಾಸಕ ಅಶೋಕ ಪಟ್ಟಣ, ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ವಿನಯ ನಾವಲಗಟ್ಟಿ, ಚಿಕ್ಕೋಡಿ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ್‌ ಚಿಂಗಳೆ, ಬೆಳಗಾವಿ ನಗರ ಅಧ್ಯಕ್ಷ ರಾಜು ಸೇಠ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ ಎಂ.ಜೆ., ಮಾಜಿ ಶಾಸಕ ಶ್ಯಾಮ ಘಾಟಗೆ, ಸುನೀಲ್‌ ಹನಮಣ್ಣವರ್‌ ಮಹಾವೀರ ಮೋಹಿತೆ, ಗಜಾನನ ಮಂಗಸೂಳಿ, ಸುನೀಲ್‌ ಸಂಕ, ಸದಾಶಿವ ಬೂಟಾಳಿ, ಸಿದ್ದಾರ್ಥ ಸಿಂಗೆ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.