ಸರ್ಕಾರಿ ವಾಹನಗಳ ಬಳಕೆ ಹೆಚ್ಚಲಿ: ಕಾರಜೋಳ

ಸರ್ಕಾರಿ ವಾಹನಗಳು ಉತ್ತಮ ಸುರಕ್ಷಿತ ವ್ಯವಸ್ಥೆ ಹೊಂದಿವೆ

Team Udayavani, Apr 14, 2022, 2:47 PM IST

15

ಬೆಳಗಾವಿ: ಸಾರ್ವಜನಿಕರು ಖಾಸಗಿ ವಾಹನಗಳಿಗಿಂತ ಸರ್ಕಾರಿ ವಾಹನಗಳನ್ನು ಹೆಚ್ಚು ಬಳಕೆ ಮಾಡಬೇಕು. ಖಾಸಗಿ ವಾಹನಗಳಿಗಿಂತ ಸರ್ಕಾರಿ ವಾಹನಗಳು ಅತೀ ಹೆಚ್ಚು ಸುರಕ್ಷತೆ ಜೊತೆಗೆ ಅಪಘಾತ ರಹಿತವಾಗಿವೆ ಎಂದು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಎಂ. ಕಾರಜೋಳ ಹೇಳಿದರು.

ನಗರ ಕೇಂದ್ರ ಬಸ್‌ ನಿಲ್ದಾಣದ ಆವರಣದಲ್ಲಿ ಬುಧವಾರ ನಡೆದ ಬೆಳಗಾವಿ ವಿಭಾಗ ವಾಯವ್ಯ ಕರ್ನಾಟಕ ರಸ್ಥೆ ಸಾರಿಗೆ ಸಂಸ್ಥೆಯ ಅಪಘಾತ ರಹಿತ ಚಾಲಕರಿಗೆ ಬೆಳ್ಳಿ ಪದಕ ವಿತರಿಸಿ ಅವರು ಮಾತನಾಡಿದರು.

ಖಾಸಗಿ ವಾಹನಗಳ ಜೊತೆ ಸರ್ಕಾರಿ ವಾಹನಗಳು ಪೈಪೋಟಿ ನಡೆಸುವ ಪರಿಸ್ಥಿತಿ ಸೃಷ್ಟಿಯಾಗಿದೆ. ಖಾಸಗಿ ವಾಹನಗಳಲ್ಲಿ ಯಾವುದೇ ಉತ್ತಮ ಗುಣಮಟ್ಟದ ಸುರಕ್ಷಿತ ವ್ಯವಸ್ಥೆ ಇರುವುದಿಲ್ಲ. ಖಾಸಗಿ ವಾಹನಗಳ ಅಪಘಾತಗಳು ಜಾಸ್ತಿ ಆಗುತ್ತಿವೆ. ಸುರಕ್ಷತೆ ದೃಷ್ಟಿಯಿಂದ ಸಾರ್ವಜನಿಕರು ಸರ್ಕಾರಿ ವಾಹನಗಳ ಬಳಕೆ ಮಾಡಬೇಕು. ಸರ್ಕಾರಿ ವಾಹನಗಳು ಉತ್ತಮ ಸುರಕ್ಷಿತ ವ್ಯವಸ್ಥೆ ಹೊಂದಿವೆ ಎಂದು ಹೇಳಿದರು.

ಉತ್ತಮ ಸೇವೆ ಮಾಡಿ ಬೆಳ್ಳಿ ಮತ್ತು ಬಂಗಾರದ ಪದಕ ಪಡೆದ ಚಾಲಕರಿಗೆ ಮತ್ತು ಇಂಧನ ಉಳಿತಾಯ ಮಾಡಿದ ಚಾಲಕರಿಗೆ ಅಭಿನಂದನೆ ಸಲ್ಲಿಸಿದ ಸಚಿವರು, ಬೆಳ್ಳಿ ಮತ್ತು ಬಂಗಾರ ಪದಕ ನೀಡುತ್ತಿರುವುದು ಉತ್ತಮ ಯೋಜನೆಯಾಗಿದೆ. ಕಾರಣ ಬೇರೆ ಚಾಲಕರು ಇದನ್ನು ಮಾದರಿಯಾಗಿ ಇಟ್ಟುಕೊಂಡು ಇನ್ನೂ ಉತ್ತಮ ರೀತಿ ಕಾರ್ಯನಿರ್ವಹಿಸಲು ಸಜ್ಜಾಗಬೇಕು ಎಂದು ಕಿವಿಮಾತು ಹೇಳಿದರು.

ಸಾರ್ವಜನಿಕರ ಜೀವ ಉಳಿಸುವ ಜೊತೆಗೆ ಉತ್ತಮ ಸೇವೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲ ಚಾಲಕರು ಬೆಳ್ಳಿ ಮತ್ತು ಬಂಗಾರದ ಪದಕ ಪಡೆಯಬೇಕು ಎಂದರು. ಸಾರಿಗೆ ಸಂಸ್ಥೆ ಕರೊನಾ ಪರಿಸ್ಥಿತಿಯಿಂದ ನಷ್ಟವನ್ನು ಅನುಭವಿಸುತ್ತಿದ್ದು, ಸಂಸ್ಥೆಯವರು ಜವಾಬ್ದಾರಿ ಮತ್ತು ಕರ್ತವ್ಯ ಅರ್ಥ ಮಾಡಿಕೊಂಡು ನಷ್ಟದಿಂದ ಹೇಗೆ ಹೊರತರಬೇಕು ಎಂದು ಚಿಂತನೆ ಮಾಡಬೇಕು ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು.

ಬೆಳಗಾವಿ ವಿಭಾಗ ವಾ.ಕ.ರ.ಸಾ. ಸಂಸ್ಥೆಯ ವಿಭಾಗೀಯ ನಿಯಂತ್ರಣಾ ಧಿಕಾರಿ ಪಿ.ವೈ.ನಾಯಕ್‌ ಸ್ವಾಗತಿಸಿ ಅಪರಾಧ, ಅಪಘಾತ ಇಲ್ಲದೇ ಉತ್ತಮ ರೀತಿ ಕಾರ್ಯ ನಿರ್ವಹಿಸಿದ 125 ಜನ ಚಾಲಕರಿಗೆ ಬೆಳ್ಳಿ ಪದಕ, 5 ಜನ ಚಾಲಕರಿಗೆ ಬಂಗಾರದ ಪದಕ ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ಪದಕ ವಿಜೇತರ ಸಂಖ್ಯೆ ಹೆಚ್ಚಾಗಬೇಕು, ಚಾಲಕರು ಉತ್ತಮ ಸೇವೆ ಸಲ್ಲಿಸಬೇಕು ಎಂದರು.

ಇದಕ್ಕೂ ಮುನ್ನ ಬೆಳಗಾವಿ ವಿಭಾಗದ ಸಿಬ್ಬಂದಿ ಹಾಗೂ ಸಿಬ್ಬಂದಿ ಮಕ್ಕಳಿಂದ ರಸಮಂಜರಿ ಕಾರ್ಯಕ್ರಮ ನಡೆಯಿತು. ಬೆಳಗಾವಿ ಉತ್ತರ ಶಾಸಕರಾದ ಅನಿಲ ಬೆನಕೆ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಕರ್ನಾಟಕ ಕೊಳಗೇರಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷರಾದ ಮಹೇಶ ಕುಮಠಳ್ಳಿ, ಹುಬ್ಬಳ್ಳಿ ವಾ.ಕ.ರ.ಸಾ. ಕೇಂದ್ರ ಕಚೇರಿಯ ಅಧ್ಯಕ್ಷರಾದ ವ್ಹಿ.ಎಸ್‌ .ಪಾಟೀಲ, ಉಪಾಧ್ಯಕ್ಷರಾದ ಡಾ.ಬಸವರಾಜ ಎಸ್‌.ಕೆಲಗಾರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.