ನೂತನ ಶಿಕ್ಷಣ ನೀತಿಯಿಂದ ಅಭಿವೃದ್ಧಿ

ಜ್ಞಾನ ಜಗತ್ತಿನ ಬಲಶಾಲಿ ರಾಷ್ಟ್ರವಾಗಿಸುವ ಉದ್ದೇಶ

Team Udayavani, Apr 14, 2022, 2:58 PM IST

16

ಬೆಳಗಾವಿ: ರಾಷ್ಟೀಯ ಶಿಕ್ಷಣ ನೀತಿ ಅಳವಡಿಕೆಯಿಂದ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಬದಲಾವಣೆ ತರಲಾಗುವುದು. ಇದರಿಂದ ಭವಿಷ್ಯದಲ್ಲಿ ವಿವಿಧ ಕ್ಷೇತ್ರಗಳು ಅಭಿವೃದ್ಧಿ ಆಗಲಿವೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಹೇಳಿದರು.

ನಗರದ ಗಾಂಧಿ ಭವನದಲ್ಲಿ ಬುಧವಾರ ನಡೆದ ರಾಷ್ಟೀಯ ಶಿಕ್ಷಣ ನೀತಿ-2020ರ ಶೈಕ್ಷಣಿಕ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ರಾಷ್ಟ್ರದಲ್ಲಿ ಮೊಟ್ಟಮೊದಲ ಬಾರಿಗೆ ಕರ್ನಾಟಕ ರಾಜ್ಯ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಿದೆ. 34 ವರ್ಷಗಳ ನಂತರ ಮೊದಲ ಬಾರಿಗೆ ಜಾರಿಗೆ ತಂದ ಶಿಕ್ಷಣ ನೀತಿ ಇದಾಗಿದ್ದು, ದೇಶದ ವಿವಿಧ ಕ್ಷೇತ್ರಗಳಲ್ಲಿ ಬದಲಾವಣೆ ತರಲಿದೆ ಎಂದರು.

ಭಾರತವನ್ನು ಜ್ಞಾನ ಜಗತ್ತಿನ ಬಲಶಾಲಿ ರಾಷ್ಟ್ರವನ್ನಾಗಿಸಲು ಎಲ್ಲರಿಗೂ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿ, ಸಮತೆಯುಳ್ಳ ಮತ್ತು ಚಲನಶೀಲ ಜ್ಞಾನ ಸಮಾಜವನ್ನಾಗಿ ಪರಿವರ್ತಿಸುವುದು ಈ ಶೈಕ್ಷಣಿಕ ನೀತಿಯ ದೃಷ್ಟಿಕೋನದ ಮೂಲ ಉದ್ದೇಶವಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯವರೆಗೂ ಶಿಕ್ಷಣ ತಲುಪಬೇಕು ಎಂಬುದು ಶೈಕ್ಷಣಿಕ ಪದ್ಧತಿಯ ಸಿದ್ಧಾಂತವಾಗಿದ್ದು, ಸಾಮಾಜಿಕ ಬೆಳವಣಿಗೆಗೆ ಬೇಕಾಗುವ ಕಲಿಕೆಯ ಅವಶ್ಯಕ ಪಠ್ಯ ಹಾಗೂ ಚಟುವಟಿಕೆಗಳಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯು ಭಾಗವಹಿಸಬೇಕು ಎಂದು ಹೇಳಿದರು.

ರಾಷ್ಟೀಯ ಶಿಕ್ಷಣ ನೀತಿ ಜಾರಿಗೆ ತಂದ ನಂತರ ಅನೇಕ ಶಿಕ್ಷಕರು ಗೊಂದಲಕ್ಕೆ ಒಳಗಾಗಿದ್ದು, ಮುಂಬರುವ ದಿನಗಳಲ್ಲಿ ಈ ಕುರಿತು ಕಾರ್ಯಗಾರ ಏರ್ಪಡಿಸುವ ಮೂಲಕ ಸೂಕ್ತ ಸಲಹೆಗಳನ್ನು ನೀಡಲಾಗುವುದು. ಪ್ರತಿ ಶಾಲಾ-ಕಾಲೇಜುಗಳಲ್ಲಿ ಶಿಕ್ಷಕರಿಗೆ ರಾಷ್ಟೀಯ ಶಿಕ್ಷಣ ನೀತಿಯ ಪಠ್ಯ ಹಾಗೂ ಶೈಕ್ಷಣಿಕ ಚಟುವಟಿಕೆಗಳ ಕುರಿತು ಮಾಹಿತಿ ನೀಡಲಾಗುವುದು ಎಂದು ಸಚಿವ ಬಿ.ಸಿ ನಾಗೇಶ್‌ ಹೇಳಿದರು.

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಅನಿಲ ಬೆನಕೆ ಮಾತನಾಡಿ, ಪಠ್ಯಗಳ ಬದಲಾವಣೆಯಿಂದ ಮಕ್ಕಳ ಭವಿಷ್ಯದಲ್ಲಿ ಉತ್ತಮ ಬದಲಾವಣೆಯಾಗಲಿದೆ. ರಾಷ್ಟೀಯ ಶಿಕ್ಷಣ ನೀತಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಬೆಳವಣಿಗೆಯ ಕಾರ್ಯ ನಿರ್ವಹಿಸಲಿದೆ ಎಂದರು.

ರಾಷ್ಟೀಯ ಶಿಕ್ಷಣ ನೀತಿ ಸಮೀಕ್ಷೆ ಮೂಲಕ ಸಾರ್ವಜನಿಕರ ಸಲಹೆ ಪಡೆದು, 65 ಪುಟಗಳ ರಾಷ್ಟೀಯ ಶಿಕ್ಷಣ ನೀತಿಯ ನಡುವಳಿಗಳನ್ನು ಪ್ರಕಟಿಸಲಾಗಿದೆ. ಉತ್ತಮ ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್‌ ಸದಸ್ಯರಾದ ಅರುಣ ಶಹಾಪೂರ, ಹನುಮಂತ ನಿರಾಣಿ, ಡಿಡಿಪಿಐ ಗಜಾನನ ಮನ್ನಿಕೇರಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.