ದಶಕದ ನೀರಾವರಿ ಕನಸು ನನಸಾಗಲಿದೆ ಇಂದು

28 ಕೆರೆಗಳ ಒಡಲು ತುಂಬಲಿದೆ ಜಾಲವಾಡಗಿ ಏತ ನೀರಾವರಿ ಯೋಜನೆ

Team Udayavani, Apr 15, 2022, 12:10 PM IST

7

ಗದಗ: ಜಿಲ್ಲೆಯ ಎರಡೂ ಬದಿಗೆ ತುಂಗಭದ್ರಾ ಮತ್ತು ಮಲಪ್ರಭಾ ನದಿಗಳು ಹರಿಯುತ್ತಿದ್ದರೂ, ಜಿಲ್ಲೆಯ ಬಹುಭಾಗ ನೀರಾವರಿ ಸೌಲಭ್ಯದಿಂದ ವಂಚಿತವಾಗಿದೆ. ಗದಗ, ಮುಂಡರಗಿ ಹಾಗೂ ಶಿರಹಟ್ಟಿ ಭಾಗಕ್ಕೆ ನೀರಾವರಿ ಸೌಲಭ್ಯ ದೊರೆಯಬೇಕೆಂಬ ರೈತರ ಬಹು ವರ್ಷಗಳ ಬೇಡಿಕೆಗೆ ಸರಕಾರ ಸ್ಪಂದಿಸಿದೆ. ಮೂರೂ ತಾಲೂಕಿನ ಒಟ್ಟು 28 ಕೆರೆಗಳಿಗೆ ತುಂಗಭದ್ರಾ ನದಿ ನೀರು ತುಂಬಿಸಲು ರಾಜ್ಯ ಸರಕಾರ ಭಗೀರಥ ಪ್ರಯತ್ನಕ್ಕೆ ಮುಂದಾಗಿದೆ.

ಜಿಲ್ಲೆಗೆ ಹೊಂದಿಕೊಂಡೇ ಎರಡು ನದಿಗಳಿದ್ದು, ಮಳೆಗಾಲದಲ್ಲಿ ಜೀವ ಜಲದಿಂದ ಭೋರ್ಗರೆಯುತ್ತವೆ. ಆದರೂ, ಜಿಲ್ಲೆಯ ರೈತರ ಪಾಲಿಗೆ ಕೈಗೆಟುಕದ ಕುಸುಮವಾಗಿದೆ. ಈ ಭಾಗದ ರೈತರ ದಶಕಗಳ ನೀರಾವರಿ ಬೇಡಿಕೆಗೆ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ, ಶಾಸಕರಾದ ಕಳಕಪ್ಪ ಬಂಡಿ, ರಾಮಣ್ಣ ಲಮಾಣಿ ಹಾಗೂ ಗದಗ ಮತಕ್ಷೇತ್ರದ ಪರಾಜಿತ ಅಭ್ಯರ್ಥಿ ಅನಿಲ್‌ ಮೆಣಸಿನಕಾಯಿ ಸರಕಾರದ ಮಟ್ಟದಲ್ಲಿ ಧ್ವನಿಗೂಡಿಸಿದ್ದಾರೆ. ಅದಕ್ಕೆ ಸ್ಪಂದಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಾಲವಾಡಗಿ ಏತ ನೀರಾವರಿ ಯೋಜನೆಗೆ ಅಸ್ತು ಎಂದಿದ್ದು, 197.50 ಕೋಟಿ ರೂ. ಒದಗಿಸಿದ್ದಾರೆ ಎನ್ನಲಾಗಿದೆ.

ಜಾಲವಾಡಗಿ ಏತ ನೀರಾವರಿ ಯೋಜನೆಯಡಿ ಪ್ರಾಥಮಿಕ ಹಂತದಲ್ಲಿ 28 ಕೆರೆಗಳಿಗೆ ನೀರು ತುಂಬಿಸಲು ಉದ್ದೇಶಿಸಿದ್ದು, ಬಳಿಕ ಒಟ್ಟು 31 ಕೆರೆಗಳಿಗೆ ನೀರುಣಿಸುವ ಚಿಂತನೆ ನಡೆಸಿದೆ.

ಯಾವ್ಯಾವ ಕೆರೆಗಳಿಗೆ ನೀರು? ಜಾಲವಾಡಗಿ ಏತ ನೀರಾವರಿ ಯೋಜನೆಯಡಿ ಎರಡು ಹಂತದಲ್ಲಿ ನೀರೆತ್ತುವಳಿ ಮಾಡಿ, ಕೊಳವೆ ಮಾರ್ಗದ ಮೂಲಕ 28 ಕೆರೆಗಳಿಗೆ ನೀರು ತುಂಬಿಸಲು ನೀಲನಕ್ಷೆ ಸಿದ್ಧಪಡಿಸಿದೆ. ಮೊದಲ ಹಂತದ ನೀರೆತ್ತಿ, ಹಮ್ಮಿಗಿ ಸ್ವಾಗಿನಕೆರೆ, ಕಟ್ಟೆಬಸವಣ್ಣ ಕೆರೆ, ಮುರಡಿಕೆರೆ, ಕೇಲೂರು ಕೆರೆ, ಚಿಕ್ಕವಡ್ಡಟ್ಟಿಯ ಎರಡು ಕೆರೆಗಳು, ಕಡಕೋಳ ಕೆರೆ ಹಾಗೂ ಎರಡು ಚೆಕ್‌ಡ್ಯಾಂಗಳಿಗೆ ನೀರು ಹರಿಸಲಾಗುತ್ತದೆ.

2ನೇ ಹಂತದ ನೀರೆತ್ತುವಳಿ ಮಾಡಿ ಜಲ್ಲಿಗೇರಿ ಕೆರೆ, ಹೊಸಳ್ಳಿ ಕೆರೆ, ಮಾಗಡಿ ಕೆರೆ, ಮಹಲಿಂಗಪುರ, ಸೊರಟೂರು, ಅತ್ತಿಕಟ್ಟಿ, ನಭಾಪುರ, ನಾಗಾವಿ, ಹೊಸೂರು, ಸೀತಾಲಹರಿ, ಹರ್ತಿ, ಕುರ್ತಕೋಟಿ, ಮುಳಗುಂದ, ಬೆಳದಡಿ, ಮಲ್ಲಸಮುದ್ರ, ಕಣವಿ, ಚಿಂಚಲಿ, ಕಲ್ಲೂರು, ನಿಲಗುಂದ, ಕಳಸಾಪುರ ಮತ್ತು ಪಾಪನಾಶಿ ಕೆರೆಗಳ ಒಡಲು ತುಂಬಿಸುವುದು ಯೋಜನೆಯ ಮುಖ್ಯ ಉದ್ದೇಶ.

0.557 ಟಿಎಂಸಿ ನೀರಿನ ಸದ್ಬಳಕೆ: ಪ್ರತೀ ವರ್ಷ ಜೂನ್‌ ಮತ್ತು ನವೆಂಬರ್‌ ತಿಂಗಳಲ್ಲಿ ತುಂಗಭದ್ರಾ ನದಿ ಉಕ್ಕಿ ಹರಿಯುತ್ತದೆ. ಮಳೆಗಾಲದಲ್ಲಿ ಅಪಾರ ಪ್ರಮಾಣದ ಮುಂದಕ್ಕೆ ಹರಿದು ಹೋಗುವ ನೀರನ್ನು ಏತ ನೀರಾವರಿ ಯೋಜನೆ ಮೂಲಕ 28 ಕೆರೆಗಳಿಗೆ ಈ ವೇಳೆ ಸತತ 120 ದಿನಗಳ ಕಾಲ ಸುಮಾರು 0.557 ಟಿಎಂಸಿ ನೀರು ಎತ್ತುವಳಿ ಮಾಡಲಾಗುತ್ತದೆ. ಅದಕ್ಕಾಗಿ ಹಮ್ಮಿಗಿ ಬ್ಯಾರೇಜ್‌ ಹಿನ್ನೀರಿನಲ್ಲಿ ಜ್ಯಾಕ್ವೆಲ್‌ ನಿರ್ಮಿಸಲಾಗುತ್ತದೆ. ಬಳಿಕ ಅದನ್ನು ಭೂಮಿಯ ಗುರುತ್ವಾಕರ್ಷಣೆ ಆಧರಿಸಿ ಕೊಳವೆಗಳ ಮೂಲಕ ಕೆರೆಗಳಿಗೆ ನೀರು ಹರಿಸಲು ಯೋಜನೆ ರೂಪಿಸಲಾಗಿದೆ.

ಅಂತರ್ಜಲ ವೃದ್ಧಿಗೆ ಒತ್ತು: ವರ್ಷದಿಂದ ವರ್ಷಕ್ಕೆ ಮಳೆ ಪ್ರಮಾಣ ಕಡಿಮೆಯಾಗುತ್ತಿದ್ದು, ಅಂತರ್ಜಲ ಮಟ್ಟ ಕುಸಿದಿದೆ. ಹೀಗಾಗಿ, ಕೆರೆಗಳಿಗೆ ನದಿ ನೀರು ತುಂಬಿಸುವುದರಿಂದ ಅಂತರ್ಜಲ ಮರು ಪೂರಣವಾಗಲಿದೆ. ಜೊತೆಗೆ ಸುತ್ತಮುತ್ತಲಿನ ಕೃಷಿಕರು, ಜನ, ಜಾನುವಾರುಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂಬ ಮಹತ್ವಾಕಾಂಕ್ಷೆಯಿಂದ ಜಾಲವಾಡಗಿ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ತರಲಾಗುತ್ತಿದೆ.

ದಶಕದ ಕನಸು ಈಡೇರುವ ಹೊತ್ತು: ಈ ಹಿಂದೆ ಸಿಂಗಟಾಲೂರು ಏತ ನೀರಾವರಿ ಯೋಜನೆ ಜಾರಿ ವೇಳೆ ಮೂರು ತಾಲೂಕುಗಳ ವಿವಿಧ ಗ್ರಾಮಗಳು ಕೈಜಾರಿ ಹೋಗಿದ್ದವು. ಇದರಿಂದ ಆಕ್ರೋಶಗೊಂಡ ರೈತಾಪಿ ಜನರು, ಸರಕಾರದ ವಿರುದ್ಧ ಸಣ್ಣ ಧ್ವನಿಯಲ್ಲೇ ಪ್ರತಿಭಟನೆ ನಡೆಸಿದ್ದರು. ದಶಕದ ಕನಸಿಗೆ ಈಗ ಈಡೇರುವ ಕಾಲು ಕೂಡಿಬಂದಿದೆ.

ಈ ಭಾಗದ ಹಳ್ಳಿಗರ ಬಹುದಿನಗಳ ಬೇಡಿಕೆಯಾಗಿದ್ದ ಜಾಲವಾಡಗಿ ಏತ ನೀರಾವರಿ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 197.50 ಕೋಟಿ ರೂ. ಒದಗಿಸಿದ್ದಾರೆ. ಶೀಘ್ರವೇ ಯೋಜನೆಗೆ ಚಾಲನೆ ದೊರೆಯಲಿದ್ದು, ಈ ಭಾಗದಲ್ಲಿ ಅಂತರ್ಜಲ ಮಟ್ಟ ಹೆಚ್ಚಿ, ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಅನುಕೂಲವಾಗಲಿದೆ.     –ಸಿ.ಸಿ.ಪಾಟೀಲ, ಲೋಕೋಪಯೋಗಿ ಸಚಿವರು

-ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.