ಕಾಂಗ್ರೆಸ್‌ ನಲ್ಲಿ ಸಿಎಂ ಹುದ್ದೆಗೆ ಪೈಪೋಟಿ

ಕಾಂಗ್ರೆಸ್‌ ನೆಲಕಚ್ಚಲಿದೆ: ಅರುಣ್‌ಸಿಂಗ್‌

Team Udayavani, Apr 17, 2022, 11:14 AM IST

8

ಹೊಸಪೇಟೆ: ಕರ್ನಾಟಕ ಕಾಂಗ್ರೆಸ್‌ನಲ್ಲಿ “ಕೂಸು ಹುಟ್ಟುವ ಮುನ್ನ ಕುಲಾವಿ’ ಎಂಬಂತೆ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಶುರುವಾಗಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ನೆಲಕಚ್ಚಲಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ಸಿಂಗ್‌ ಹೇಳಿದ್ದಾರೆ.

ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ನಡುವೆ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಪ್ರಾರಂಭವಾಗಿದೆ. ದೇಶದೆಲ್ಲೆಡೆ ಜನತೆ ಕಾಂಗ್ರೆಸ್‌ ಮೇಲಿನ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ ಎಂದು ತಿಳಿಸಿದರು.

ದೇಶದ 4 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಏರಿದ ಬಳಿಕ ಕರ್ನಾಟಕದ ಕಾರ್ಯಕರ್ತರು ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಉತ್ಸುಕರಾಗಿದ್ದಾರೆ. ಕೇಂದ್ರದ ನರೇಂದ್ರ ಮೋದಿಯವರ ಸರಕಾರದ ಸಾಧನೆಗಳು ಹಾಗೂ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜನಪರ ಮತ್ತು ಬಡವರ ಪರವಾದ ಕಾರ್ಯಕ್ರಮಗಳ ವಿವರವನ್ನು ಜನರಿಗೆ ತಲುಪಿಸಿ ಬಿಜೆಪಿಯನ್ನು ಗೆಲ್ಲಿಸಲು ಕಾರ್ಯಕರ್ತರು ಸಜ್ಜಾಗಿದ್ದಾರೆಂದು ಹೇಳಿದರು.

ವಿಜಯನಗರದಿಂದ ಪದಾಧಿಕಾರಿಗಳು ವಿಜಯದ ಸಂಕಲ್ಪದೊಂದಿಗೆ ಹಿಂತೆರಳಲಿದ್ದಾರೆ. ಬಿಜೆಪಿ 2023ರ ವಿಧಾನಸಭಾ ಚುನಾ ವಣೆಯಲ್ಲಿ 150ಕ್ಕೂ ಹೆಚ್ಚು ಸೀಟುಗಳನ್ನು ಗೆದ್ದು ಅಧಿಕಾರಕ್ಕೆ ಏರುವ ವಿಶ್ವಾಸವಿದೆ ಎಂದು ತಿಳಿಸಿದರು.

ಕಾಮನ್‌ ಮ್ಯಾನ್‌ ಮತ್ತು ಸಿಂಪಲ್‌ ಮ್ಯಾನ್‌ ಎನಿಸಿದ ಬಸವರಾಜ ಬೊಮ್ಮಾಯಿ ಅವರು ಕಾರ್ಯಕರ್ತರ ಹುರುಪನ್ನು ಹೆಚ್ಚಿಸಿದ್ದಾರೆ. ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಅವರು ಸಂಘಟನಾ ಚತುರರಾಗಿದ್ದಾರೆ ಎಂದು ಶ್ಲಾಘಿಸಿದರು.

ಗುತ್ತಿಗೆದಾರ ಸಂತೋಷ ಪಾಟೀಲ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕೆ.ಎಸ್‌.ಈಶ್ವರಪ್ಪ ಪರವಾಗಿ ಬಿಜೆಪಿ ಪಕ್ಷ ನಿಲ್ಲಲಿದೆ ಎಂದು ತಿಳಿಸಿದರು.

ಮಾಜಿ ಸಚಿವ ಈಶ್ವರಪ್ಪ ನಮ್ಮ ಪಕ್ಷದ ಹಿರಿಯ ನಾಯಕರು. ರಾಜ್ಯ ದಲ್ಲಿ ಬಿಜೆಪಿ ಪಕ್ಷ ಈ ಹಂತಕ್ಕೆ ಬರಲು ಈಶ್ವರಪ್ಪ ಅವರ ಕೊಡುಗೆಯೂ ದೊಡ್ಡದಿದೆ. ಶೀಘ್ರದಲ್ಲೇ ಅವರು ಆರೋಪ ಮುಕ್ತರಾಗುವ ವಿಶ್ವಾಸ ವಿದೆ. ಆ ಬಳಿಕ ಅವರು ಪುನಃ ಸಚಿವರಾಗುತ್ತಾರೆ ಎಂದು ಹೇಳಿದರು.

ಸಂತೋಷ ಪಾಟೀಲ್‌ ಪ್ರಕರಣದಲ್ಲಿ ಈಶ್ವರಪ್ಪರನ್ನು ಸಿಲುಕಿಸಲು ಷಡ್ಯಂತ್ರ ನಡೆದಿದೆ. ಸದ್ಯ ಪ್ರಕರಣದ ತನಿಖೆ ನಡೆಯುತ್ತಿದೆ. ಆ ಬಳಿಕ ಸತ್ಯ ಹೊರಬರಲಿದೆ. ಈಶ್ವರಪ್ಪ ತಳಮಟ್ಟದಿಂದ ಬಿಜೆಪಿಯನ್ನು ಕಟ್ಟಿದ್ದಾರೆ. ನಮ್ಮ ಪಕ್ಷ ಅವರೊಂದಿಗಿದೆ. ಪ್ರಕರಣದಲ್ಲಿ ಕಾಂಗ್ರೆಸ್‌ ಷಡ್ಯಂತ್ರವಿದ್ದು ಅದು ತನಿಖೆಯಿಂದ ಬಹಿರಂಗವಾಗಲಿದೆ ಎಂದು ಹೇಳಿದರು.

ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರು ಭಾನುವಾರ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಗೆಲುವಿನ ಮೂಲ ಮಂತ್ರ ವನ್ನು ತಿಳಿಸಿ ಕಾರ್ಯಕರ್ತರ ಉತ್ಸಾಹವನ್ನು ಹೆಚ್ಚಿಸಲಿದ್ದಾರೆ ಎಂದು ತಿಳಿಸಿದರು.

ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ 150 ಕ್ಷೇತ್ರಗಳಲ್ಲಿ ಗೆಲ್ಲುವ ಕುರಿತು ಕಾರ್ಯಕಾರಿಣಿಯಲ್ಲಿ ಚರ್ಚಿಸಲಾಗಿದೆ. ನಮ್ಮೆಲ್ಲರ ಗುರಿ. ಪಕ್ಷವನ್ನು ಮತ್ತೂಮ್ಮೆ ಆಧಿಕಾರಕ್ಕೆ ತರುವುದಾಗಿದೆ. ಈ ಎರಡು ದಿನಗಳ ಕಾರ್ಯಕಾರಿಣಿಯನ್ನು ಸಚಿವ ಆನಂದ್‌ ಸಿಂಗ್‌ ಅವರು ಅಚ್ಚುಕಟ್ಟಾಗಿ ಆಯೋಜನೆ ಮಾಡಿದ್ದಾರೆ. ●ಬಿ.ಎಸ್‌. ಯಡಿಯೂರಪ್ಪ, ಮಾಜಿ ಸಿಎಂ

ಕಾಂಗ್ರೆಸ್‌ಗೆ ಮರ್ಮಾಘಾತ ನೀಡುವ ಅನೇಕ ಸಂಗತಿಗಳು ಬಿಜೆಪಿಗೆ ಲಭಿಸಿವೆ. ಅದನ್ನು ಚುನಾವಣಾ ರಾಜಕೀಯ ತಂತ್ರಗಾರಿಕೆ ರೂಪದಲ್ಲಿ ಅವರಿಗೆ ಪ್ರತಿರೋಧ ಒಡ್ಡಲು ಕಾರ್ಯಕರ್ತರು ಬಳಸಿಕೊಳ್ಳಲು ನಿರ್ಧರಿಸಲಾಗಿದೆ. ● ಸಿ.ಟಿ.ರವಿ ಬಿಜೆಪಿ ರಾಷ್ಟ್ರೀಯ ಪ್ರ.ಕಾರ್ಯದರ್ಶಿ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಭಿವೃದ್ಧಿ ಹೆಸರಿನಲ್ಲೇ ಚುನಾವಣೆ ಎದುರಿಸುತ್ತೇವೆ. ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳ ಅಭಿವೃದ್ಧಿ ಕಾಮಗಾರಿಗಳನ್ನು ನಮ್ಮ ಕಾರ್ಯಕರ್ತರು ಜನರ ಮುಂದಿಡಬೇಕು. ●ನಳೀನ್‌ಕುಮಾರ್‌ ಕಟೀಲ್‌ ಬಿಜೆಪಿ ರಾಜ್ಯಾಧ್ಯಕ್ಷ

ಟಾಪ್ ನ್ಯೂಸ್

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

1-murali

ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್‌ ಆಗ್ರಹ

1-sm

Delhi; ಬಿಭವ್‌ ಬಿಡುಗಡೆಯಾದರೆ ಅಪಾಯ: ಸಂಸದೆ ಸ್ವಾತಿ ಮಲಿವಾಲ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌

1-qeewqewqewe

Naxal ಬೆದರಿಕೆ; ಪದ್ಮಶ್ರೀ ವಾಪಸ್‌: ನಾಟಿ ವೈದ್ಯ ಹೇಳಿಕೆ

Sullia ಹಲಸಿನ ಹಣ್ಣು ಕೊಯ್ಯುವಾಗ ದಂಪತಿಗೆ ವಿದ್ಯುದಾಘಾತ

Sullia ಹಲಸಿನ ಹಣ್ಣು ಕೊಯ್ಯುವಾಗ ದಂಪತಿಗೆ ವಿದ್ಯುದಾಘಾತ

1-reaa

I.N.D.I.A. ಸಭೆ; ಜೂ.1ರಂದು ಫ‌ಲಿತಾಂಶ ಬಳಿಕದ ಕಾರ್ಯತಂತ್ರ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayanagara: ದಶಕಗಳ ನಂತರ ಹುಲಿಕೆರೆ ಕೆರೆಗೆ ನೀರು… ಗ್ರಾಮಸ್ಥರಿಂದ ಗಂಗಾ ಪೂಜೆ

Vijayanagara: ದಶಕಗಳ ಬಳಿಕ ಹುಲಿಕೆರೆ ಕೆರೆಗೆ ನೀರು… ಗ್ರಾಮಸ್ಥರಿಂದ ಗಂಗಾ ಪೂಜೆ

ಪ್ರಹ್ಲಾದ ಜೋಶಿ

Bellary; ಆಂತರಿಕ ಬೇಗುದಿಯಿಂದ ಸರ್ಕಾರ ಬಿದ್ದರೆ ನಾವು ಹೊಣೆಯಲ್ಲ: ಪ್ರಹ್ಲಾದ ಜೋಶಿ

1-adasas

Ballari: 55 ಕೆಜಿ ಗಾಂಜಾ ಸಹಿತ ಐವರ ಬಂಧನ

state’s state of education has deteriorated; N. Ravikumar

Bellary; ರಾಜ್ಯದ ಶಿಕ್ಷಣದ ಸ್ಥಿತಿ ಅಧೋಗತಿಗೆ ತಲುಪಿದೆ; ಎನ್.ರವಿಕುಮಾರ್

online

Online Fraud; ಬಳ್ಳಾರಿ ಮಹಿಳೆಗೆ 17 ಲಕ್ಷ ರೂ.ವಂಚನೆ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

1-murali

ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್‌ ಆಗ್ರಹ

sensex

76,000 ಅಂಕ ತಲುಪಿದ್ದ ಬಿಎಸ್‌ಇ ಸೂಚ್ಯಂಕ: 23,000ಕ್ಕೇರಿ ಕುಸಿದ ನಿಫ್ಟಿ

arrested

Ranchi;ಮದ್ಯ ಕೊಡದ್ದಕ್ಕೆ ಗುಂಡಿಕ್ಕಿ ಡಿಜೆಯ ಹತ್ಯೆ: ಆರೋಪಿ ಪೊಲೀಸರ ವಶಕ್ಕೆ

1-sm

Delhi; ಬಿಭವ್‌ ಬಿಡುಗಡೆಯಾದರೆ ಅಪಾಯ: ಸಂಸದೆ ಸ್ವಾತಿ ಮಲಿವಾಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.