ಬೀದಿಬೀದಿಗೆ ಅಧಿಕಾರಿಗಳ ಭೇಟಿ-ಅಹವಾಲು ಸ್ವೀಕಾರ

ಸುಮಾರು 63 ಸಮಸ್ಯೆಗಳ ಕುರಿತು ನಾಗರಿಕರು ಅರ್ಜಿ ಸಲ್ಲಿಸಿದ್ದರು

Team Udayavani, Apr 17, 2022, 2:15 PM IST

17

ಬೈಲಹೊಂಗಲ: ತಾಲೂಕಿನ ಮುರಕಿಭಾವಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ತಹಶೀಲ್ದಾರ್‌ ಬಸವರಾಜ ನಾಗರಾಳ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಗ್ರಾಮದ ಪ್ರತಿ ಬೀದಿಗಳಿಗೆ ವಿವಿಧ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದರು.

ಮನೆ ಬಿದ್ದಿರುವುದು, ವಿದ್ಯುತ್‌ ಅಭಾವ, ಟಿಸಿ ಬದಲಾವಣೆ, ಹಕ್ಕು ಪತ್ರ ಬದಲಾವಣೆ, ಗ್ರಾಮದ ಅಸ್ವತ್ಛತೆ ಮೊದಲಾದ ಸಮಸ್ಯೆ ಕುರಿತು ಜನರು ತಹಶೀಲ್ದಾರ್‌ ಗಮನಸೆಳೆದರು. ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯಿಂದ 40 ಜನರಿಗೆ ಮಾಶಾಸನ ನೀಡಲಾಯಿತು.

ಸುಮಾರು 63 ಸಮಸ್ಯೆಗಳ ಕುರಿತು ನಾಗರಿಕರು ಅರ್ಜಿ ಸಲ್ಲಿಸಿದ್ದರು. ಆರೋಗ್ಯ ಇಲಾಖೆಯಿಂದ 10 ಜನರಿಗೆ ಆಯುಷ್ಮಾನ್‌ ಭಾರತ ಆರೋಗ್ಯ ಕಾರ್ಡ್‌ ವಿತರಿಸಿ, ಆರೋಗ್ಯ ತಪಾಸಣೆ ನಡೆಸಲಾಯಿತು. ಕೃಷಿ ಇಲಾಖೆಯಿಂದ ಇಬ್ಬರು ರೈತರಿಗೆ ತುಂತುರು ನೀರಾವರಿ ಸಲಕರಣೆ ಹಾಗೂ ಮೈಕ್ರೋ ನ್ಯೂಟ್ರಿಯಂಟ್‌ ವಿತರಿಸಲಾಯಿತು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ 10 ಜನರಿಗೆ ಸುಕನ್ಯಾ ಸಮೃದ್ಧಿ ಯೋಜನೆ ಪ್ರಮಾಣ ಪತ್ರ ಹಂಚಲಾಯಿತು. ಮಕ್ಕಳ ಹುಟ್ಟುಹಬ್ಬ, ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ, ಪೋಷಣ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ತಹಶೀಲ್ದಾರ್‌ ಬಸವರಾಜ ನಾಗರಾಳ ಮಾತನಾಡಿ, ಕೊರೊನಾ ಸಂದರ್ಭದಲ್ಲಿ ಸಾಕಷ್ಟು ಕಷ್ಟಗಳಾದವು. ಗ್ರಾಮದಲ್ಲಿ ಆಗಬೇಕಾದ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತಂದರೆ ಬಗೆಹರಿಸಲಾಗುವುದು. ಸರಕಾರದ ಸೌಲಭ್ಯಗಳನ್ನು ಸರಿಯಾಗಿ ಬಳಕೆ ಮಾಡಬೇಕೆಂದರು.

ಗ್ರಾಪಂ ಅಧ್ಯಕ್ಷೆ ಅನಸೂಯಾ ತಳವಾರ, ಉಪಾಧ್ಯಕ್ಷೆ ರೂಪಾ ಹೊಸಮನಿ, ಆರ್‌ .ಎ. ಪಾಟೀಲ, ಸದಸ್ಯರಾದ ಶಿವಾನಂದ ಪಾಟೀಲ, ನಾಗಮ್ಮ ಪಾಟೀಲ, ಅಡಿವೆಪ್ಪ ಮೋದಗಿ, ಯಲ್ಲನಗೌಡ ದೊಡ್ಡಗೌಡರ, ಗಂಗಪ್ಪ ಸಂಗಮ್ಮನವರ, ತಾ.ಪಂ ಇಒ ಸುಭಾಸ ಸಂಪಗಾವಿ, ತಾಪಂ ಸಹಾಯಕ ನಿರ್ದೇಶಕ ವಿಜಯ ಪಾಟೀಲ, ಬಿಇಒ ಎ.ಎನ್‌. ಪ್ಯಾಟಿ, ಕೃಷಿ ಇಲಾಖೆ ಅಧಿಕಾರಿಗಳಾದ ರುದ್ರಪ್ಪ ಕುಂಬಾರ, ಬಿ.ಎಸ್‌. ಚಿಕ್ಕಮಠ, ಎಇಇ ಎಸ್‌. ಕೆ. ಮೂಗಸಜ್ಜಿ, ಕೆಇಬಿ ಎ.ಇ. ಅಣ್ಣಪ್ಪ ಲಮಾಣಿ, ಉಪ ತಹಶೀಲ್ದಾರ್‌ ಬಸವರಾಜ ಹುಬ್ಬಳ್ಳಿ, ವೃತ್ತ ನಿರೀಕ್ಷಕ ಬಸವರಾಜ ಬೊರಗಲ್ಲ, ಪಿಡಿಒ ರಮೇಶ ನಂದಿಹಳ್ಳಿ, ಗ್ರಾಮ ಲೆಕ್ಕಾಧಿಕಾರಿಗಳಾದ ರಾಮಚಂದ್ರ ನಾಯಕ, ಶಿವಾನಂದ ಕರಿಗಾರ, ಮಹಾಂತೇಶ ಕೊಣೀನವರ, ಜಗದೀಶ ಗೌಡರ, ಡಾ| ಬಸವಣೆಪ್ಪ ಕುರಗುಂದ, ಇಲಾಖೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶಿಕ್ಷಕ ಎ.ಎಸ್‌. ಉಳವಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಶ್ರೀಕಾಂತ ಉಡಕೇರಿ ಸ್ವಾಗತಿಸಿದರು. ಬಸವರಾಜ ಕೆರಕನ್ನವರ ನಿರೂಪಿಸಿದರು. ಅರ್ಜುನ ಕೋಣಿನವರ ವಂದಿಸಿದರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.