ಸಮಸ್ಯೆಗೆ ಸ್ಪಂದಿಸುವುದು ಅಧಿಕಾರಿಗಳ ಕರ್ತವ್ಯ: ಡೀಸಿ

Team Udayavani, Apr 17, 2022, 5:31 PM IST

Untitled-1

ಹಾಸನ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಧಿಕಾರಿಗಳು ಪ್ರಜೆಗಳ ಬಳಿ ಹೋಗಿ ಸಮಸ್ಯೆ ಆಲಿಸಿ ಪರಿಹಾರ ಒದಗಿಸುವುದು ಅಧಿಕಾರಿಗಳ ಕರ್ತವ್ಯ ವಾಗಿದೆ ಎಂದು ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಅವರು ಅಭಿಪ್ರಾಯಪಟ್ಟರು.

ಜಿಲ್ಲಾಧಿಕಾರಿ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದ ಅಂಗವಾಗಿ ಹೊಳೆ ನರಸೀಪುರ ತಾಲೂಕಿನ ಹಳ್ಳಿ ಮೈಸೂರು ಹೋಬಳಿ ಮೆಣಗನಹಳ್ಳಿಯಲ್ಲಿ ಶನಿವಾರ ವಾಸ್ತವ್ಯ ಹೂಡಿದ್ದ ಜಿಲ್ಲಾಧಿಕಾರಿ ರೈತರಿಂದ ಹಾಗೂ ಸ್ಥಳೀಯ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿದರು. ಗ್ರಾಮಕ್ಕೆ ರಸ್ತೆ, ಬಸ್‌ ಸಂಚಾರ ದ ವ್ಯವಸ್ಥೆ, ಶಾಲಾ ಕಟ್ಟಡ ನಿರ್ಮಾಣ, ಕುಡಿಯುವ ನೀರು ಇನ್ನಿತರ ಮೂಲಭೂತ ಸೌಲಭ್ಯ ಶೀಘ್ರವೇ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನಾನಾ ಸಮಸ್ಯೆಗಳಿಗೆ ಕ್ರಮ: ಸ್ಥಳೀಯವಾಗಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಂಡಿದ್ದು ಸುತ್ತ ಮುತ್ತ ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿದೆ ಎಂದು ದೂರು ಬಂದಿದೆ. ಅಬಕಾರಿ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊ ಳ್ಳಬೇಕು. ಎಂದರು.

ವಿದ್ಯುತ್‌ ಸಂಪರ್ಕದ ಅವ್ಯವಸ್ಥೆಯಿದೆ. ಸೆಸ್ಕಾಂ ಅಧಿಕಾರಿಗಳಿಗೆ ಸಂಪರ್ಕ ಕಲ್ಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಮನೆ ಅವಶ್ಯಕತೆ ಇರುವವರಿಂದ ಅರ್ಜಿ ಪಡೆದು ಆದ್ಯತೆ ಮೇರೆಗೆ ಮನೆ ಕಲ್ಪಿಸ ಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸರ್ಕಾರದಿಂದ ಈಗಾಗಲೇ ದಿಶಾ ಆ್ಯಪ್‌ನ್ನು ರೈತರ ಉಪಯೋಗಕ್ಕಾಗಿ ಬಿಡುಗಡೆ ಮಾಡಿದ್ದು, ತಮ್ಮ ಜಮೀನುಗಳನ್ನು ರೈತರು ಖುದ್ದು ತಾವೇ ಸರ್ವೆ ಮಾಡಿ ನಕಾಶೆ ರಚಿಸಿಕೊಳ್ಳಬಹುದು. ನಿಮ್ಮ ಜಮೀನಿನ ಪೂರ್ಣ ಮಾಹಿತಿ ಪಡೆದುಕೊಳ್ಳಿ ಎಂದರು.

ಜಿಲ್ಲಾಡಳಿತದಿಂದ ಸಮಸ್ಯೆಗಳಿಗೆ ಮುಕ್ತಿ: ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಎ.ಟಿ. ರಾಮಸ್ವಾಮಿ ಅವರು, ಸರ್ಕಾರದ ಎಲ್ಲ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ಒದಗಿಸುವ, ಜನರ ಕಷ್ಟಗಳಿಗೆ ಸ್ಪಂದಿಸುವ ಕಾರ್ಯಕ್ರಮವೇ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ. ರೈತರಿಗೆ ಉತ್ತಮ ಬದುಕು ಕಟ್ಟಿಕೊಡಲು ಸರ್ಕಾರ ಸಹಕಾರ ಇದ್ದೇ ಇರುತ್ತದೆ ಎಂದರು.

ಜಿಲ್ಲಾಡಳಿತವು ಯಾವುದೇ ಸಮಸ್ಯೆಗಳಿಗೆ ಪರಿಹಾರ ನೀಡಬಲ್ಲದು. ಎಲ್ಲ ಅಧಿಕಾರಿಗಳು ಪರಸ್ಪರ ಸಹಕಾರದಿಂದ ಕಾರ್ಯನಿರ್ವಸಿದರೆ ಮಾತ್ರ ಜನಸಾಮಾನ್ಯರು ಅಭಿವೃದ್ಧಿ ಆಗಲು ಸಾಧ್ಯ. ಮೆಣಗನಹಳ್ಳಿ ದೇವಸ್ಥಾನದ ಅಭಿವೃದ್ಧಿಗೆ 2 ಲಕ್ಷ ರೂ. ನೀಡಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಫ‌ಲಾನುಭವಿಗಳಿಗೆ ಸಾಗುವಳಿ ಚೀಟಿ, ಮಾಸಾಶನ ಮಂಜೂರಾತಿ ಆದೇಶ ಪ್ರತಿಗಳನ್ನು ಫ‌ಲಾನುಭವಿಗಳಿಗೆ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಕವಿತಾರಾಜರಾಂ. ಜಿಪಂ ಉಪಕಾರ್ಯದರ್ಶಿ ಚಂದ್ರಶೇಖರ್‌, ಉಪಭಾಗಾಧಿಕಾರಿ ಬಿ.ಎ. ಜಗದೀಶ್‌, ಕೃಷಿ ಉಪನಿರ್ದೇಶಕ ಭಾನು ಪ್ರಕಾಶ್‌, ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಯೋಗೇಶ್‌, ಭೂ ದಾಖಲೆಗಳ ಇಲಾಖೆ ಉಪ ನಿರ್ದೇಶಕಿ ಹೇಮಲತಾ, ತಹಶೀಲ್ದಾರ್‌ ಕೆ.ಕೃಷ್ಣಮೂರ್ತಿ, ತಾಪಂ ಕಾರ್ಯ ನಿರ್ವಾಣಾಧಿಕಾರಿ ಯೋಗೇಶ್‌, ಗ್ರಾಪಂ ಅಧ್ಯಕ್ಷೆ ಶಿವಮ್ಮ ಮತ್ತಿತರ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.