ಖಾತ್ರಿ ಕಾರ್ಮಿಕರಿಗೆ ಅನುಕೂಲ ಕಲ್ಪಿಸಲು ಒತ್ತಾಯ


Team Udayavani, Apr 21, 2022, 11:40 AM IST

6appeal

ಆಳಂದ: ಬೇಸಿಗೆಯ ವಿಪರೀತ ಬಿಸಿಲಿನಲ್ಲೂ ಉದ್ಯೋಗ ಖಾತ್ರಿ ಕಾಮಗಾರಿ ಕೈಗೊಳ್ಳುವ ಕಾರ್ಮಿಕರಿಗೆ ದಿನದ ಎರಡು ಬಾರಿ ಹಾಜರಿ ಹಾಕುವ ಕ್ರಮ ಕೈಬಿಟ್ಟು ಕಾರ್ಮಿಕರಿಗೆ ಅನುಕೂಲ ಒದಗಿಸಲು ಮಧ್ಯಾಹ್ನದ ಹಾಜರಾತಿ ರದ್ದುಗೊಳಿಸಬೇಕು ಎಂದು ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಕೆ. ನೀಲಾ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ತಾಪಂ ಕಚೇರಿ ಎದುರು ಬುಧವಾರ ಅಖೀಲಭಾರತ ಜನವಾದಿ ಮಹಿಳಾ ಸಂಘಟನೆ, ಕರ್ನಾಟಕ ಪ್ರಾಂತ ಕೃಷಿ ಕೂಲಿಕರಾರರ ಸಂಘ, ದಲಿತ ಸಮನ್ವಯ ಸಮಿತಿಗಳ ತಾಲೂಕು ಘಟಕಗಳು ಜಂಟಿಯಾಗಿ ಉದ್ಯೋಗ ಖಾತ್ರಿ ಕಾರ್ಮಿಕರ ಬೇಡಿಕೆಗೆ ಒತ್ತಾಯಿಸಿ ಕೈಗೊಂಡ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಗ್ರಾಮ ಪಂಚಾಯತ್‌ ಮಟ್ಟದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕಾರ್ಮಿಕರು ಬೆಳಗಿನಿಂದ 7ಗಂಟೆಯಿಂದ 11ಗಂಟೆ ವರೆಗೆ ಕೆಲಸ ನಿರ್ವಹಿಸಿ ಹಾಜರಿ ಹಾಕಿ ಮನೆಗೆ ಹೋಗುತ್ತಾರೆ. ಆದರೆ ಸರ್ಕಾರ ಸಮಯದ ಮಿತಿ ಹೇರಿ ಎರಡು ಬಾರಿ ಹಾಜರಿಯ ಮಿತಿ ಹೇರಿದ್ದರಿಂದ ಕಾರ್ಮಿಕರು ದಿನವಿಡಿ ಕೆಲಸ ಮಾಡಿದರೂ ಹಾಜರಿ ಹಾಕಲು ಸ್ಥಳದಲ್ಲೇ ಸಂಜೆಯ ವರೆಗೆ ಕುಳಿತುಕೊಳ್ಳುತ್ತಿರುವುದರಿಂದ ಬೇಸಿಗೆ ಧಗೆಗೆ ತೊಂದರೆ ಪಡುವಂತಾಗಿದೆ. ಕೂಡಲೇ ಸರ್ಕಾರ ಸಮಯದ ಮಿತಿ ತೆಗೆದು ಹಾಕಬೇಕು ಎಂದು ಆಗ್ರಹಿಸಿದರು.

ಹೊಸ ಆ್ಯಫ್‌ ಬಳಸುತ್ತಿರುವುದರಿಂದ (ಎನ್‌ಎಂಎಂಎಸ್‌) ಕೃಷಿ ಕೂಲಿಕಾರರಿಗೆ ತೊಂದರೆ ಆಗುತ್ತಿದೆ. ಬೇಸಿಗೆ ತಾಪ ಮಾನ ಹೆಚ್ಚುತ್ತಿದ್ದು, ಮಧ್ಯಾಹ್ನ 2ಗಂಟೆಗೆ ಆನ್‌ಲೈನ್‌ ಹಾಜರಾತಿ ಕಡ್ಡಾಯಗೊಳಿಸಿದ್ದರಿಂದ ತೊಂದರೆ ಆಗುತ್ತಿದೆ. ಸರ್ಕಾರ ಕೂಡಲೇ ಆನ್‌ ಲೈನ್‌ ಹಾಜರಾತಿ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ಪ್ರಾಂತ ರೈತ ಸಂಘದ ತಾಲೂಕು ಕಾರ್ಯದರ್ಶಿ ಪಾಂಡುರಂಗ ಮಾವೀ ನಕರ್‌, ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಸಂಚಾಲಕ ಸುಧಾಮ ಧನ್ನಿ ಮಾತನಾಡಿ, ಉದ್ಯೋಗ ಖಾತ್ರಿ ಕಾಮಗಾರಿಯಡಿ ಒಂದು ವಾರ ಕೆಲಸ ಕೊಟ್ಟು ನಾಲ್ಕು ವಾರ ಬಿಡುವು ಮಾಡದೇ ನಿರಂತರವಾಗಿ ಕೆಲಸ ನೀಡಬೇಕು. ಕೂಲಿ ಕಾರ್ಮಿಕರಿಗೆ ಪ್ರತಿನಿತ್ಯ 600 ರೂ. ನೀಡಬೇಕು ಎಂದು ಮುಖ್ಯಮಂತ್ರಿಗೆ ಬರೆದ ಪತ್ರವನ್ನು ತಾಪಂ ಇಒಗೆ ಸಲ್ಲಿಸಿದರು.

ಮನವಿ ಸ್ವೀಕರಿಸಿದ ತಾಪಂ ಇಒ ಡಾ| ಸಂಜಯ ರೆಡ್ಡಿ ಮಾತನಾಡಿ, ಮನವಿಯನ್ನು ಸರ್ಕಾರಕ್ಕೆ ಕಳುಹಿಸ ಲಾಗುವುದು ಎಂದು ತಿಳಿಸಿದರು. ಬಂಡಾಯ ಸಾಹಿತಿ ಡಾ| ಪ್ರಭು ಖಾನಾಪುರೆ, ಜನವಾದಿ ಮಹಿಳಾ ಸಂಘಟನೆ ತಾಲೂಕು ಅಧ್ಯಕ್ಷೆ ಮಲ್ಲಮ್ಮ ಜಿಡಗಾ, ಕಾರ್ಯದರ್ಶಿ ಸುಮಂಗಲಾ, ಶಶಿಕಲಾ ಪಾಟೀಲ ಕಡಗಂಚಿ, ರೂಪದೇವಿ, ಇಂದುಮತಿ, ಫಯಾಜ್‌ ಪಟೇಲ್‌ ಮತ್ತಿತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು

ಟಾಪ್ ನ್ಯೂಸ್

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.