2011ರ ಕೆಎಎಸ್‌ ನೇಮಕಾತಿ ಸಕ್ರಮ ಪ್ರಶ್ನಿಸಿದ ಅರ್ಜಿ ವಜಾ

ಆಯ್ಕೆ ಪಟ್ಟಿಯನ್ನು ಹಿಂದೆ ಹೈಕೋರ್ಟ್‌ ರದ್ದುಪಡಿಸಿತ್ತು. ಇದನ್ನು ಸುಪ್ರೀಂ ಕೋರ್ಟ್‌ ಸಹ ಎತ್ತಿ ಹಿಡಿದಿದೆ.

Team Udayavani, Apr 22, 2022, 11:58 AM IST

2011ರ ಕೆಎಎಸ್‌ ನೇಮಕಾತಿ ಸಕ್ರಮ ಪ್ರಶ್ನಿಸಿದ ಅರ್ಜಿ ವಜಾ

ಬೆಂಗಳೂರು: 2011ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಯ 362 ಅಭ್ಯರ್ಥಿಗಳ ಆಯ್ಕೆಯನ್ನು ಸಿಂಧುಗೊಳಿಸಿ ನೇಮಕಾತಿ ಆದೇಶ ನೀಡಲು ಸರ್ಕಾರ ಜಾರಿಗೆ ತಂದಿರುವ “ಕರ್ನಾಟಕ ನಾಗರಿಕ ಸೇವೆಗಳ (2011ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರ್‌ಗಳ ಆಯ್ಕೆ ಮತ್ತು ನೇಮಕಾತಿ ಸಿಂಧುಗೊಳಿಸುವಿಕೆ) ಕಾಯ್ದೆ-2022ರ ಇದನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್‌ ಆರೀಫ್ ಜಮೀಲ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಹಾಗೂ ನ್ಯಾ. ಎಸ್‌.ಆರ್‌. ಕೃಷ್ಣಕುಮಾರ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು. ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ರಹ್ಮತುಲ್ಲಾ ಕೊತ್ವಾಲ್‌ ವಾದ ಮಂಡಿಸಿ, ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಕೆಪಿಎಸ್‌ಸಿ ಕಾನೂನುಬಾಹಿರ ಚಟುವಟಿಕೆ ನಡೆಸಿರುವುದು ಸಿಐಡಿ ವರದಿಯಿಂದ ಬಹಿರಂಗವಾಗಿದೆ.ಕೆಪಿಎಸ್‌ಸಿ ನೇಮಕಾತಿ ಅಧಿಸೂಚನೆಯನ್ನು ಹೈಕೋರ್ಟ್‌ ರದ್ದುಪಡಿಸಿದೆ. ಅದನ್ನು ಸುಪ್ರೀಂ ಕೋರ್ಟ್‌ ಸಹ ಎತ್ತಿ ಹಿಡಿದಿದೆ.

ಆದರೂ ಕಾನೂನುಬಾಹಿರವಾಗಿ ಸರ್ಕಾರ ಈ ಕಾಯ್ದೆಯನ್ನು ರೂಪಿಸಿ ಜಾರಿಗೆ ತಂದಿದೆ. ಹಾಗಾಗಿ, ಈ ಕಾಯ್ದೆ ಅಸಾಂವಿಧಾನಿಕ ಮತ್ತು ಅಕ್ರಮವಾಗಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, “2011ನೇ ಸಾಲಿನ ನೇಮಕಾತಿಯಲ್ಲಿ ಕೆಪಿಎಸ್‌ಸಿಯ ಆಯ್ಕೆ ಪಟ್ಟಿಯನ್ನು ಹಿಂದೆ
ಹೈಕೋರ್ಟ್‌ ರದ್ದುಪಡಿಸಿತ್ತು. ಇದನ್ನು ಸುಪ್ರೀಂ ಕೋರ್ಟ್‌ ಸಹ ಎತ್ತಿ ಹಿಡಿದಿದೆ.

ಆ ಬಳಿಕ 362 ಅಭ್ಯರ್ಥಿಗಳ ಆಯ್ಕೆ ಸಿಂಧುಗೊಳಿಸಿ ನೇಮಕಾತಿ ಆದೇಶ ನೀಡುವ ಸಂಬಂಧ ರಾಜ್ಯ ಸರ್ಕಾರವು ಕರ್ನಾಟಕ ನಾಗರಿಕ ಸೇವೆಗಳ (2011ನೇ ಸಾಲಿನ ಗೆಜೆಟೆಡ್‌ ಪೊ›ಬೇಷನರ್‌ಗಳ ಆಯ್ಕೆ ಮತ್ತು ನೇಮಕಾತಿ ಸಿಂಧುಗೊಳಿಸುವಿಕೆ) ಕಾಯ್ದೆ-2022 ಜಾರಿಗೆ ತಂದಿದೆ. ಹಿಂದಿನ ಆಯ್ಕೆಪಟ್ಟಿಯನ್ನು ಹೈಕೋರ್ಟ್‌ ರದ್ದುಪಡಿಸಿತ್ತು ತದ ನಂತರ ಕಾಯ್ದೆಯನ್ನು ಜಾರಿಗೆ ಬಂದಿದೆ ಎಂಬ ಕಾರಣಕ್ಕೆ ಇಡೀ ಕಾಯ್ದೆ ಕಾನೂನು ಬಾಹಿರವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿತು.

ಅಲ್ಲದೆ, ಕಾಯ್ದೆಯ ನಿಯಮಗಳು ಅಸಾಂವಿಧಾನಿಕ ಮತ್ತು ಅಕ್ರಮವಾಗಿದೆ ಎಂಬುದನ್ನು ಮನವರಿಕೆ ಮಾಡಿಕೊಡುವಲ್ಲಿ ಅರ್ಜಿದಾರರ ಪರ ವಕೀಲರು ಸೋತಿದ್ದಾರೆ. ಇನ್ನು ಕಾಯ್ದೆಯಿಂದ ಬಾಧಿತರಾದ ಅಭ್ಯರ್ಥಿಗಳು ಈಗಾಗಲೇ ಕರ್ನಾಟಕ ಆಡಳಿತ ನ್ಯಾಯಮಂಡಳಿ ಮೆಟ್ಟಿಲೇರಿದ್ದಾರೆ. ಈ ಹಂತದಲ್ಲಿ ಅರ್ಜಿಯನ್ನು ಪುರಸ್ಕರಿಸಲು ಸಾಧ್ಯವಿಲ್ಲ.ಅಷ್ಟಕ್ಕೂ ಕಾಯ್ದೆಯ ಯಾವ ಅಂಶ ಕಾನೂನು ಬಾಹಿರ ಎಂದು ಅರ್ಜಿದಾರರು ಹೇಳಿಲ್ಲ. ಇಡೀ ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿದ್ದಾರೆ. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ ನ್ಯಾಯಪೀಠ, ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.

ನೇಮಕಾತಿ ಆದೇಶ ನೀಡಲು ಕೆಎಟಿ ಸೂಚನೆ
ಬೆಂಗಳೂರು: ಕರ್ನಾಟಕ ನಾಗರಿಕ ಸೇವೆಗಳ (2011ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರ್‌ಗಳ ಆಯ್ಕೆ ಮತ್ತು ನೇಮಕಾತಿ ಸಿಂಧುಗೊಳಿಸುವಿಕೆ) ಕಾಯ್ದೆ-2022 ಅನುಸಾರ 2011ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಯ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಬಹುದು. ಆದರೆ, ಅದು ನ್ಯಾಯಮಂಡಳಿಯ ಅಂತಿಮ ನಿರ್ಧಾರಕ್ಕೆ ಒಳಪಡಲಿದೆ ಎಂದು ಕರ್ನಾಟಕ ಆಡಳಿತ ನ್ಯಾಯಮಂಡಳಿ ಹೇಳಿದೆ. ಕಾಯ್ದೆಗೆ ತಡೆ ನೀಡಬೇಕು ಮತ್ತು ನೇಮಕಾತಿ ಆದೇಶ ನೀಡದಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಂಗ ಸದಸ್ಯ ನಾರಾಯಣ ಹಾಗೂ ಆಡಳಿತಾತ್ಮಕ ಸದಸ್ಯ ಎನ್‌. ಶಿವಶೈಲಂ ಅವರಿದ್ದ ಪೀಠ ಗುರುವಾರ ಈ ಆದೇಶ ನೀಡಿತು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.