ಬಸ್‌ನಿಲ್ದಾಣವೀಗ ಮೊಬೈಲ್‌ ಕಳ್ಳರ ಹಾಟ್‌ಸ್ಪಾಟ್‌!

ಪ್ರತಿನಿತ್ಯ 2 ರಿಂದ 3 ಪ್ರಯಾಣಿಕರ ಮೊಬೈಲ್‌ ಕಳ್ಳತನ

Team Udayavani, Apr 25, 2022, 3:28 PM IST

bus

ಸಿರುಗುಪ್ಪ: ನಗರದಲ್ಲಿರುವ ಸರ್ಕಾರಿ ಬಸ್‌ನಿಲ್ದಾಣ ಮೊಬೈಲ್‌ ಕಳ್ಳರ ಸ್ವರ್ಗವಾಗಿದ್ದು ಪ್ರತಿನಿತ್ಯವೂ ಬಸ್‌ ಹತ್ತುವ ಸಮಯದಲ್ಲಿ 2-3 ಪ್ರಯಾಣಿಕರ ಮೊಬೈಲ್‌ ಕಳ್ಳತನವಾಗುವುದು ಸಾಮಾನ್ಯವಾಗಿರುತ್ತದೆ.

ನಗರದ ಬಸ್‌ನಿಲ್ದಾಣದಿಂದ ಬೀದರ್‌ನಿಂದ ಚಾಮರಾಜ ನಗರದವರೆಗೆ ಮೈಸೂರ್‌ನಿಂದ ವಿಜಯಪುರದವರೆಗೆ ಹೈದ್ರಾಬಾದ್‌ನಿಂದ ಬೆಂಗಳೂರುವರೆಗೆ ಪ್ರತಿನಿತ್ಯವೂ ಈ ಬಸ್‌ ನಿಲ್ದಾಣದಿಂದ ಸುಮಾರು 4 ಸಾವಿರ ಪ್ರಯಾಣಿಕರು, 5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಂಚರಿಸುತ್ತಾರೆ.

ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಪ್ರಯಾಣಿಕರು ಸೀಟಿಗಾಗಿ ಅವಸರವಾಗಿ ಬಸ್‌ ಹತ್ತುವ ಸಮಯದಲ್ಲಿಯೇ ಬೆಲೆ ಬಾಳುವ ಮೊಬೈಲ್‌ ಗಳು ಕಳ್ಳತನವಾಗುವುದು ಇಲ್ಲಿ ಕಳೆದ ಒಂದು ವರ್ಷದಿಂದ ಹೆಚ್ಚಾಗಿದೆ. ಕಳೆದ ಒಂದು ವರ್ಷದಿಂದ ಬಸ್‌ ಹತ್ತುವ ಪ್ರಯಾಣಿಕರ ಸಾವಿರಾರು ಮೊಬೈಲ್‌ ಗಳು ಕಳ್ಳತನವಾಗುತ್ತಿದ್ದರೂ ಬಸ್‌ ನಿಲ್ದಾಣದ ಅಧಿಕಾರಿಗಳು ಮಾತ್ರ ಇಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ಇಲ್ಲಿಯವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಇದರಿಂದಾಗಿ ಮೊಬೈಲ್‌ ಕಳ್ಳರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಮೊಬೈಲ್‌ ಕಳೆದುಕೊಂಡ ಪ್ರಯಾಣಿಕರು ಕಳ್ಳರಿಗೆ ಹಿಡಿ ಶಾಪ ಹಾಕುತ್ತಾರೆಯೇ ಹೊರತು ಪೊಲೀಸ್‌ ಠಾಣೆಗೆ ದೂರು ನೀಡಿದರೆ ಕಳೆದು ಹೋದ ಮೊಬೈಲ್‌ನ್ನು ಹುಡುಕಿಕೊಡುವುದು ಅಷ್ಟರಲ್ಲಿಯೇ ಇದೆ ಎನ್ನುವ ಅಸಡ್ಡೆಯಿಂದ ಮೊಬೈಲ್‌ ಕಳೆದುಕೊಂಡ ಬಹುತೇಕರು ಪೊಲೀಸ್‌ ಠಾಣೆಗೆ ಹೋಗಿ ದೂರನ್ನೇ ನೀಡುತ್ತಿಲ್ಲ. ಇದರಿಂದಾಗಿಯೂ ಮೊಬೈಲ್‌ ಕಳ್ಳರ ಹಾವಳಿ ಹೆಚ್ಚಾಗಿರುತ್ತದೆ.

ಬಸ್‌ನಿಲ್ದಾಣದಲ್ಲಿ ಪ್ರಯಾಣಿಕರು ಬಸ್‌ ಹತ್ತುವ ಸ್ಥಳದಲ್ಲಿ ಸಿ.ಸಿ. ಕ್ಯಾಮೆರಾಗಳನ್ನು ಅಳವಡಿಸಿದರೆ ಮೊಬೈಲ್‌ ಕಳ್ಳರನ್ನು ಗುರುತಿಸಬಹುದು. ಆದರೆ ಸಾರಿಗೆ ಇಲಾಖೆ ಅಧಿಕಾರಿಗಳು ಸಿ.ಸಿ. ಕ್ಯಾಮೆರಾ ಅಳವಡಿಸಲು ಮುಂದಾಗದಿರುವುದು ಹಲವು ರೀತಿಯ ಅನುಮಾನಗಳಿಗೆ ಕಾರಣವಾಗಿದೆ ಎಂದು ಪ್ರಯಾಣಿಕರಾದ ಎಚ್.ಎಸ್. ಶೇಕಣ್ಣ, ಸಿದ್ದಲಿಂಗ ಬೇಸರ ವ್ಯಕ್ತಪಡಿಸಿದ್ದಾರೆ.

ಪ್ರಯಾಣಿಕರ ಮೊಬೈಲ್‌ ಕಳ್ಳತನ ತಡೆಗಟ್ಟಲು ಪೊಲೀಸ್‌ ಪಹರೆಯೊಂದಿಗೆ, ಸಿ.ಸಿ.ಕ್ಯಾಮೆರಾವನ್ನು ಅಳವಡಿಸಿದರೆ ಮೊಬೈಲ್‌ ಕಳ್ಳತನ ಮಾಡುವವರ ಹಾವಳಿಯನ್ನು ನಿಯಂತ್ರಿಸಬಹುದೆಂದು ದಿನನಿತ್ಯವೂ ಈ ಬಸ್‌ನಿಲ್ದಾಣದಿಂದ ಪ್ರಯಾಣಿಸುವ ಪ್ರಯಾಣಿಕರು ಆಗ್ರಹಿಸಿದ್ದಾರೆ.

– ಆರ್‌. ಬಸವರೆಡ್ಡಿ ಕರೂರು

ಟಾಪ್ ನ್ಯೂಸ್

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.