ಚಾರಣದಿಂದ ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ವೃದ್ಧಿ: ರೇಣು

ಆರೋಗ್ಯ ರಕ್ಷಣೆಗೂ ಕಾಲ್ನಡಿಗೆ ಅನುಕೂಲ ಎಂಬುದನ್ನು ಪ್ರತಿಯೊಬ್ಬರೂ ಅರಿಯಿರಿ

Team Udayavani, Apr 25, 2022, 5:07 PM IST

trekking

ಹೊನ್ನಾಳಿ: ಚಾರಣ ಮಾಡುವುದರಿಂದ ಮಕ್ಕಳಲ್ಲಿ ಪರಿಸರಾಸಕ್ತಿ ಮೂಡುವುದರ ಜೊತೆಗೆ ಆರೋಗ್ಯವೂ ವೃದ್ಧಿಯಾಗಲಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ನ್ಯಾಮತಿ ತಾಲೂಕಿನ ಕೊಡತಾಳು ಗುಡ್ಡದಲ್ಲಿ ಯೂತ್‌ ಹಾಸ್ಟಲ್‌ ಶಿವಮೊಗ್ಗ ಘಟಕ, ಕರ್ನಾಟಕ ಪತ್ರಕರ್ತರ ಸಂಘ ಹೊನ್ನಾಳಿ-ನ್ಯಾಮತಿ ತಾಲೂಕು ಘಟಕ ಹಾಗೂ ಕನ್ನಡ ಸಾಹಿತ್ಯ ಪರಿಷತ್‌ ನ್ಯಾಮತಿ ತಾಲೂಕು ಘಟಕ ಸಂಯುಕ್ತಾಶ್ರಯದಲ್ಲಿ ಭಾನುವಾರ ಬೆಳಿಗ್ಗೆ ಹಮ್ಮಿಕೊಂಡಿದ್ದ ಚಾರಣಕ್ಕೆ ಹಸಿರು ನಿಶಾನೆ ತೋರಿಸಿ ಅವರು ಮಾತನಾಡಿದರು. ಒಂದು ಕಾಲದಲ್ಲಿ ನಮ್ಮ ಪೂರ್ವಜರು ಮತ್ತು ನಾವು ಹೆಚ್ಚು ನಡೆಯುತ್ತಿದ್ದೆವು. ಈಗ ನಡೆದಾಡುವ ಗುಣ ಅನೇಕರಲ್ಲಿ ಮಾಯವಾಗಿದೆ. ನಡೆಯುವುದರಿಂದ ಮೊಣಕಾಲು, ಪಾದದ ಆರೋಗ್ಯ ವೃದ್ಧಿಯಾಗಿ ಮುಪ್ಪಿನಲ್ಲಿ ಹೆಚ್ಚು ಸಮಸ್ಯೆ ಬರುವುದಿಲ್ಲ ಎಂದರು.

ಚಾರಣ ಎನ್ನುವ ಹವ್ಯಾಸ ದೇಹಕ್ಕೆ, ಮನಸ್ಸಿಗೆ ಆರೋಗ್ಯ ಕೊಡುವುದಲ್ಲದೆ ಮನೋಲ್ಲಾಸ ನೀಡುತ್ತದೆ. ಚಾರಣ ಪ್ರಿಯರು ಪ್ರಕೃತಿ ಸೌಂದರ್ಯವನ್ನು ಆನಂದಿಸುವುದರ ಜೊತೆಗೆ ಸುರಕ್ಷಿತವಾಗಿರಬೇಕು. ಚಾರಣ ಪ್ರಿಯರು ಪ್ರಕೃತಿ ಸೌಂದರ್ಯ ಸವಿಯಲೆಂದು ಕಾಡು ಮೇಡು ಸುತ್ತಾಡುವುದರಿಂದ ಅವರಲ್ಲಿ ಧೈರ್ಯ, ಸಾಹಸ, ಆತ್ಮವಿಶ್ವಾಸ, ನಾಯಕತ್ವ ಬೆಳೆಸುವಲ್ಲಿ ಚಾರಣ ಅನುಕೂಲವಾಗಲಿದೆ. ಆಧುನಿಕತೆ ಬೆಳೆದಂತೆ ಮಕ್ಕಳಲ್ಲಿ ಪರಿಸರಾಸಕ್ತಿ ಕಡಿಮೆಯಾಗುತ್ತಿದೆ. ಮಕ್ಕಳಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸಲು ಚಾರಣ ಅನುಕೂಲವಾಗಲಿದೆ. ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಯೂತ್‌ ಹಾಸ್ಟಲ್‌ ವತಿಯಿಂದ 10ರಿಂದ 15 ವರ್ಷದ ಒಳಗಿನ ಮಕ್ಕಳಿಗೆ ಚಾರಣ ಹಮ್ಮಿಕೊಂಡಿದ್ದು, ಸುಮಾರು ಏಳು ಕಿಲೋಮೀಟರ್‌ ಕೊಡತಾಳ್‌ ಗುಡ್ಡವನ್ನು ಮಕ್ಕಳು ಏರಲಿದ್ದಾರೆ. ಜಾಗ್ರತೆಯಿಂದ ಚಾರಣ ಮಾಡಬೇಕು. ಯೂತ್‌ ಹಾಸ್ಟೆಲ್‌ ವತಿಯಿಂದ ಈಗಾಗಲೇ 70ಕ್ಕೂ ಹೆಚ್ಚು ಕಡೆ ಚಾರಣ ಮಾಡಲಾಗಿದೆ. ಈಗ ಕೊಡತಾಳು ಗುಡ್ಡದಲ್ಲಿ ಚಾರಣ ಹಮ್ಮಿಕೊಂಡಿದ್ದು ಯಶಸ್ವಿಯಾಗಲಿ. ಯುವಕರು ಮುಂದಿನ ದಿನಗಳಲ್ಲಿ ಹಿಮಾಲಯ ಪರ್ವತ ಏರಲು ಮುಂದಾಗಿದ್ದಾರೆ. ಇದರಲ್ಲಿ ಯಶಸ್ವಿಯಾಗಿ ಶಿವಮೊಗ್ಗ ಜಿಲ್ಲೆಗೆ ಮಾತ್ರವಲ್ಲದೆ ಇಡೀ ರಾಜ್ಯಕ್ಕೆ ಕೀರ್ತಿ ತರಲಿ ಎಂದು ಹಾರೈಸಿದರು.

ಸರ್ಕಲ್‌ ಇನ್ಸ್‌ಪೆಕ್ಟರ್‌ ಟಿ.ವಿ. ದೇವರಾಜ್‌, ಯೂತ್‌ ಹಾಸ್ಟೆಲ್‌ ಚೇರ್ಮನ್‌ ವಾಗೀಶ್‌, ಹರೀಶ್‌ ಪಂಡಿತ್‌, ಸುರೇಶ್‌, ಪ್ರಶಾಂತ್‌, ದೊರಯ್ಯ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.