‘ಹಿಂದಿ ರಾಷ್ಟ್ರ ಭಾಷೆ ವಿವಾದ’; ಕಿಚ್ಚ ಸುದೀಪ್ ಗೆ ಕುಮಾರಸ್ವಾಮಿ ಬೆಂಬಲ

Team Udayavani, Apr 28, 2022, 9:12 AM IST

h d kumaraswamy supports Kiccha sudeep in hindi controversy

ಬೆಂಗಳೂರು: ಹಿಂದಿ ರಾಷ್ಟ್ರ ಭಾಷೆಯಲ್ಲ ಎಂದು ಕಿಚ್ಚ ಸುದೀಪ್ ಮಾಡಿರುವ ಟ್ವೀಟ್ ಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಧ್ವನಿ ಸೇರಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಚಿತ್ರನಟ ಕಿಚ್ಚ ಸುದೀಪ ಅವರು, ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಹೇಳಿರುವುದು ಸರಿ ಇದೆ. ಅವರ ಮಾತಿನಲ್ಲಿ ತಪ್ಪು ಹುಡುಕುವಂಥದ್ದು ಏನೂ ಇಲ್ಲ. ನಟ ಅಜಯ್ ದೇವಗನ್ ಅತಿರೇಖದಿಂದ ಪ್ರತಿಕ್ರಿಯಿಸಿ ಅಧಿಕ ಪ್ರಸಂಗತನ ಮೆರೆದಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ದೇಶ ಭಾಷೆಗಳಲ್ಲಿ ಹಿಂದಿಯೂ ಒಂದಷ್ಟೇ. ಕನ್ನಡ, ತೆಲುಗು, ತಮಿಳು, ಮಲೆಯಾಳಂ, ಮರಾಠಿಯಂತೆ ಅದೂ ಒಂದು ಭಾಷೆ ಮಾತ್ರ. ಭಾರತ ಬಹು ಭಾಷೆಗಳ ತೋಟ. ಬಹು ಧರ್ಮ, ಬಹು ಭಾಷೆ, ಬಹು ಸಂಸ್ಕೃತಿಗಳ ಬೀಡು. ಇದನ್ನು ಕದಡುವ ಪ್ರಯತ್ನ ಬೇಡ. ಹೆಚ್ಚು ಜನ ಮಾತನಾಡುತ್ತಾರೆ ಎಂದ ಮಾತ್ರಕ್ಕೆ ಹಿಂದಿ ಎಲ್ಲರ ಭಾಷೆಯಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಕೇವಲ 9ಕ್ಕಿಂತ ಕಡಿಮೆ ರಾಜ್ಯಗಳಲ್ಲಿ ಹಿಂದಿ 2ನೇ ಭಾಷೆ, ಇಲ್ಲವೇ 3ನೇ ಭಾಷೆ ಅಥವಾ ಅದೂ ಆಗಿಲ್ಲ. ಹೀಗಿದ್ದ ಮೇಲೆ ಅಜಯ್ ದೇವಗನ್ ಮಾತುಗಳು ಎಷ್ಟು ಸರಿ. ಡಬ್ ಮಾಡಬೇಡಿ ಎಂದರೆ ಏನರ್ಥ ಎಂದು ಪ್ರಶ್ನಿಸಿದ್ದಾರೆ.

ಮೊದಲಿನಿಂದಲೂ ಕೇಂದ್ರದಲ್ಲಿ ಆಡಳಿತ ನಡೆಸಿದ ‘ಹಿಂದಿ ರಾಜಕೀಯ ಪಕ್ಷಗಳು ‘ ಪ್ರಾದೇಶಿಕ ಭಾಷೆಗಳನ್ನು ಹೊಸಕಿ ಹಾಕುವ ದುಷ್ಟ ಪ್ರಯತ್ನ ಮಾಡುತ್ತಿವೆ. ಕಾಂಗ್ರೆಸ್ ಆರಂಭ ಮಾಡಿದ ಅನ್ಯಭಾಷೆಗಳ ಹತ್ತಿಕ್ಕುವ ಕೃತ್ಯಗಳನ್ನು ಈಗ ಬಿಜೆಪಿ ಅತಿಯಾಗಿ ಮುಂದುವರಿಸುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಇದನ್ನೂ ಓದಿ:ಮಾತೃಭಾಷೆಯಲ್ಲಿ ಅಡಗಿದೆ ಶಿಕ್ಷಣದ ಆತ್ಮ

ಒಂದೇ ಪಕ್ಷ, ಒಂದೇ ತೆರಿಗೆ, ಒಂದೇ ಭಾಷೆ, ಒಂದೇ ಸರಕಾರ ಎನ್ನುವ ಸರ್ವಾಧಿಕಾರಿ ಮನಃಸ್ಥಿತಿಯ ಬಿಜೆಪಿ ಮತ್ತು ಅದರ ಹಿಂದಿ ರಾಷ್ಟ್ರೀಯವಾದದ ಮುಖವಾಣಿ ರೀತಿಯಲ್ಲಿ ದೇವಗನ್ ಬಡಬಡಿಸಿದ್ದಾರೆ. ದೇವಗನ್ ಅರ್ಥ ಮಾಡಿಕೊಳ್ಳಬೇಕು. ಕನ್ನಡ ಚಿತ್ರರಂಗ ಇವತ್ತು ಹಿಂದಿ ಚಿತ್ರರಂಗವನ್ನು ಮೀರಿ ಬೆಳೆಯುತ್ತಿದೆ. ಕನ್ನಡಿಗರು ಕೂಡ ಪ್ರೋತ್ಸಾಹಿಸಿದ ಪರಿಣಾಮ ಹಿಂದಿ ಚಿತ್ರರಂಗ ಬೆಳೆದಿದೆ. ಅವರ ‘ಫೂಲ್ ಔರ್ ಕಾಂಟೆ’ ಸಿನಿಮಾ ಬೆಂಗಳೂರಿನಲ್ಲಿ ಒಂದು ವರ್ಷ ಪ್ರದರ್ಶನ ಆಗಿದ್ದನ್ನು ದೇವಗನ್ ಮರೆಯಬಾರದು ಎಂದಿದ್ದಾರೆ.

ಶ್ರೇಷ್ಠತೆಯ ವ್ಯಸನ ಭಾರತವನ್ನು ಒಡೆಯುತ್ತಿದೆ. ಬಿಜೆಪಿ ಭಿತ್ತಿದ ಈ ರೋಗ, ಅಂಟು ಜಾಡ್ಯದಂತೆ ಹರಡುತ್ತಾ ದೇಶವನ್ನು ಛಿದ್ರಗೊಳಿಸುವಂತಿದೆ. ಭಾರತದ ಏಕತೆಗೆ ಇದು ಅಪಾಯಕಾರಿ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.