ಮೊಳಕಾಲ್ಮೂರು ಕ್ಷೇತ್ರದಿಂದಲೇ ಸ್ಪರ್ಧೆ

ಕ್ಷೇತ್ರ ಬಿಟ್ಟು ಹೋಗುವ ಮಾತೇ ಇಲ್ಲ

Team Udayavani, May 1, 2022, 2:59 PM IST

ramulu

ನಾಯಕನಹಟ್ಟಿ: ಅಭಿವೃದ್ಧಿ ಆಧಾರದ ಮೇಲೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಮೊಳಕಾಲ್ಮೂರು ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದರು.

ಪಟ್ಟಣದಲ್ಲಿ ಶನಿವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಕ್ಷೇತ್ರ ಅಭಿವೃದ್ಧಿಯಾಗಿಲ್ಲ, ಶ್ರೀರಾಮುಲು ಕ್ಷೇತ್ರ ಬಿಟ್ಟು ಪಲಾಯನ ಮಾಡುತ್ತಾರೆ ಎಂದು ಕ್ಷೇತ್ರದಲ್ಲಿನ ಕೆಲವರು ಟೀಕಿಸುತ್ತಿದ್ದಾರೆ. ಆದರೆ ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಪರ ಕಾರ್ಯಗಳನ್ನು ಜನರ ಮುಂದಿಡುತ್ತೇನೆ. ಇದರ ಆಧಾರದ ಮೇಲೆ ಮುಂದಿನ ಚುನಾವಣೆಯಲ್ಲಿ ಇದೇ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ತಾಕತ್ತು, ಗಂಡಸ್ತನ ಮುಂತಾದ ಪದಗಳನ್ನು ಬಳಕೆ ಮಾಡುವ ಕೆಟ್ಟ ಸಂಸ್ಕೃತಿ ನನ್ನದಲ್ಲ ಎಂದರು.

ರಾಜ್ಯ ಕಾಂಗ್ರೆಸ್‌ ಹಾಗೂ ಮೊಳಕಾಲ್ಮೂರು ಕಾಂಗ್ರೆಸ್‌ನಲ್ಲಿ ಎರಡು ಗುಂಪುಗಳಿವೆ. ಕ್ಷೇತ್ರದಲ್ಲಿರುವ ಎರಡು ಗುಂಪುಗಳ ಪರಸ್ಪರ ಸ್ಪರ್ಧೆಯಿಂದಾಗಿ ಬಿಜೆಪಿ ವಿರುದ್ಧ ಆರೋಪ ಮಾಡಲಾಗುತ್ತಿದೆ ಎಂದು ದೂರಿದ ಶ್ರೀರಾಮುಲು, ಮೊಳಕಾಲ್ಮುರು ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಅಂದುಕೊಂಡಿರಲಿಲ್ಲ.ಅನಿರೀಕ್ಷಿತವಾಗಿ ಇಲ್ಲಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದೇನೆ. ಶಾಸಕನಾದಾಗ ಪಕ್ಷಕ್ಕೆ ಬಹುಮತದ ಕೊರತೆಯಿಂದ ಅಧಿಕಾರ ದೊರೆಯಲಿಲ್ಲ. ನಂತರ ಕೆಲವು ಶಾಸಕರು ಪಕ್ಷಕ್ಕೆ ಬಂದಿದ್ದರಿಂದ ಬಿಜೆಪಿ ಸರ್ಕಾರ ರಚನೆಯಾಯಿತು. 50 ವರ್ಷಗಳಿಂದ ಕ್ಷೇತ್ರಕ್ಕೆ ಸಚಿವ ಸ್ಥಾನ ದೊರೆತಿರಲಿಲ್ಲ. ಇದೀಗ ನನಗೆ ಸಚಿವ ಸ್ಥಾನ ದೊರೆತಿದ್ದು, ಇದನ್ನು ಬಳಸಿಕೊಂಡು ಅಭಿವೃದ್ಧಿಗೆ ಶ್ರಮಿಸುತ್ತೇನೆ. ಮುಂದಿನ ಒಂದು ವರ್ಷದಲ್ಲಿ ಇನ್ನಷ್ಟು ಅನುದಾನ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಮೊಳಕಾಲ್ಮೂರು ಕ್ಷೇತ್ರ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ. ಕಾರಣವಿಲ್ಲದೆ ಬೀದಿಬದಿಯಲ್ಲಿ ಮಾತನಾಡುವವರಿಗೆ ಉತ್ತರ ನೀಡುವುದಿಲ್ಲ. ಇದಕ್ಕೆ ಬದಲಾಗಿ ಅಭಿವೃದ್ಧಿ ಮಾಡಿ ತೋರಿಸುತ್ತೇನೆ ಎಂದ ಶ್ರೀರಾಮುಲು, ರಾಜ್ಯದಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಸ್ವಲ್ಪ ಹಿನ್ನಡೆಯಾಗಿದೆ. ಆದರೆ ಕ್ಷೇತ್ರದಲ್ಲಿ ಪ್ರಮುಖವಾದ ಸಮಸ್ಯೆಗಳಿಗೆ ಪರಿಹಾರ ರೂಪಿಸಲಾಗುತ್ತಿದೆ. ಕ್ಷೇತ್ರಕ್ಕೆ ಇಲ್ಲಿಯವರೆಗೂ 2100 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಕ್ಷೇತ್ರ ವ್ಯಾಪ್ತಿಯ 72 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಚಾಲನೆಯಲ್ಲಿದೆ. ಈಗಾಗಲೇ ಪೈಪ್‌ ಅಳವಡಿಸುವ ಕಾಮಗಾರಿ ಪ್ರಗತಿಯಲ್ಲಿದೆ. ನನ್ನ ಅವಧಿಯಲ್ಲಿಯೇ ಕೆರೆಗಳಿಗೆ ನೀರು ಹರಿಸಲಾಗುವುದು ಎಂದರು.

ತುಂಗಭದ್ರಾ ಹಿನ್ನೀರಿನಿಂದ ಕುಡಿಯುವ ನೀರು ಪೂರೈಕೆ ಕಾಮಗಾರಿ ಅಂತಿಮ ಹಂತದಲ್ಲಿದೆ. ಈ ಎರಡು ಪ್ರಮುಖ ಕಾಮಗಾರಿಗಳನ್ನು ವೇಗವಾಗಿ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ಮಾಡಲಾಗಿದೆ. ಬಿಜೆಪಿಯ ಇಚ್ಛಾಶಕ್ತಿಯಿಂದ ವಿವಿ ಸಾಗರಕ್ಕೆ ನೀರು ಹರಿಸಲಾಗಿದೆ. ಇದರಿಂದ ಹಿರಿಯೂರು, ಚಳ್ಳಕೆರೆ ತಾಲೂಕುಗಳ ಕೃಷಿ ಕ್ಷೇತ್ರಕ್ಕೆ ಹೊಸ ಜೀವ ಬಂದಿದೆ. ಚಳ್ಳಕೆರೆ ತಾಲೂಕಿನ 2 ಲಕ್ಷ ಕೊಳವೆಬಾವಿಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಿದೆ ಎಂದರು.

ತಹಶೀಲ್ದಾರ್‌ ಎನ್‌. ರಘುಮೂರ್ತಿ, ಬಿಜೆಪಿ ಜಿಲ್ಲಾಧ್ಯಕ್ಷ ಎ. ಮುರಳಿ, ಮಂಡಲ ಅಧ್ಯಕ್ಷರಾದ ಇ. ರಾಮ ರೆಡ್ಡಿ, ಡಾ| ಪಿ.ಎಂ. ಮಂಜುನಾಥ್‌, ಜಿಪಂ ಸದಸ್ಯ ಒ. ಮಂಜುನಾಥ್‌, ಸಿ.ಬಿ. ಮೋಹನ್‌, ತಿಪ್ಪೇಸ್ವಾಮಿ, ಜಯಪಾಲಯ್ಯ, ಪಿ. ಶಿವಣ್ಣ, ಎನ್‌. ಮಹಾಂತಣ್ಣ ಮೊದಲಾದವರು ಭಾಗವಹಿಸಿದ್ದರು.

ಪ್ರತಿಭಟನೆಗೆ ಸಜ್ಜಾಗಿದ್ದ ಮಹಿಳೆಯರು ಪೊಲೀಸ್‌ ವಶಕ್ಕೆ

ಸಚಿವ ಬಿ. ಶ್ರೀರಾಮುಲು ಅವರ ಬಹಿರಂಗ ಸಭೆಗೂ ಮುನ್ನ ಪೊಲೀಸರು 60ಕ್ಕೂ ಹೆಚ್ಚು ಮಹಿಳೆಯರನ್ನು ವಶಕ್ಕೆ ತೆಗೆದುಕೊಂಡರು. ತ್ರಿವೇಣಿ ಭೂಷಣ್‌ ಸೇರಿದಂತೆ 60ಕ್ಕೂ ಹೆಚ್ಚು ಮಹಿಳೆಯರು ಶ್ರೀರಾಮುಲು ವಿರುದ್ಧ ಪ್ರತಿಭಟನೆಗೆ ಸಜ್ಜಾಗಿದ್ದರು. ಇದನ್ನು ಅರಿತ ಪೊಲೀಸರು ಪ್ರಮುಖ ರಸ್ತೆಯಲ್ಲಿ ಓಡಾಡುತ್ತಿದ್ದ ಮಹಿಳೆಯರನ್ನು ವಶಕ್ಕೆ ಪಡೆದು ಅವರನ್ನು ಅವರ ಗ್ರಾಮಗಳಿಗೆ ವಾಪಾಸ್‌ ಕಳುಹಿಸಿಕೊಟ್ಟರು. ಇದಕ್ಕೆ ಪ್ರತಿಕ್ರಿಯಿಸಿದ ತ್ರಿವೇಣಿ, ಸಚಿವ ಬಿ. ಶ್ರೀರಾಮುಲು ನಮ್ಮ ವಾಕ್‌ ಸ್ವಾತಂತ್ರ್ಯವನ್ನು ಕಿತ್ತುಕೊಂಡಿದ್ದಾರೆ. ನೇರವಾಗಿ ಎದುರಿಸಲಾರದೆ ಪೊಲೀಸರನ್ನು ಬಳಸಿದ್ದಾರೆ. ಕ್ಷೇತ್ರದಲ್ಲಿ ಮಹಿಳಾ ಸಂಘಗಳಗೆ ಅನ್ಯಾಯವಾಗಿದೆ. ಸಮರ್ಪಕವಾಗಿ ಅನುದಾನ ದೊರೆತಿಲ್ಲ ಎಂದು ಆರೋಪಿಸಿದರು.

ಭ್ರಷ್ಟಾಚಾರ ಸಹಿಸಲಾಗದು

ಮೊಳಕಾಲ್ಮೂರು ಕ್ಷೇತ್ರದಲ್ಲಿ ಎಸ್‌ಟಿ ನಿಗಮದಿಂದ ನೇರ ಸಾಲ ನೀಡಿಕೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ದೂರಲಾಗಿದೆ. ನಮ್ಮ ಸರ್ಕಾರ ಭ್ರಷ್ಟಾಚಾರವನ್ನು ಎಂದಿಗೂ ಸಹಿಸುವುದಿಲ್ಲ. ಕ್ಷೇತ್ರದಲ್ಲಿ ಉಂಟಾದ ಸಮಸ್ಯೆಗೆ ಸಂಬಂಧಿಸಿದಂತೆ ಅಧಿಕಾರಿಗಳನ್ನು ವರ್ಗಾವಣೆ ಹಾಗೂ ಅಮಾನತು ಮಾಡಲಾಗಿದೆ. ಮಹಿಳೆಯೊಬ್ಬರು ಸಂಘ- ಸಂಸ್ಥೆಗಳಿಗೆ ವೈಯಕ್ತಿಕ ಸಾಲ ನೀಡುವಂತೆ ಒತ್ತಾಯಿಸಿದ್ದರು. ಆದರೆ ಇದು ಸಾಧ್ಯವಿಲ್ಲ. ಇಂಥವರು ಕ್ಷೇತ್ರದಲ್ಲಿ ಅನಾವಶ್ಯಕ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆ ಎಂದು ಸಚಿವ ಬಿ. ಶ್ರೀರಾಮುಲು ಆರೋಪಿಸಿದರು.

ಟಾಪ್ ನ್ಯೂಸ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.