ಮೇ 5 ರಿಂದ 20ರ ವರೆಗೆ ಟ್ರಾನ್ಸ್ ಫಾರ್ಮರ್ ನಿರ್ವಹಣಾ ಅಭಿಯಾನ


Team Udayavani, May 4, 2022, 5:28 PM IST

1-dasdsa

ಬೆಂಗಳೂರು :ಮಳೆಗಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಟ್ರಾನ್ಸ್ ಫಾರ್ಮರ್ ಸಂಬಂಧಿತ ಅವಘಡ ತಪ್ಪಿಸುವುದಕ್ಕಾಗಿ ರಾಜ್ಯಾದ್ಯಂತ ಮೇ 5 ರಿಂದ 20 ರ ವರೆಗೆ ಟ್ರಾನ್ಸಫಾರ್ಮರ್ ನಿರ್ವಹಣಾ ಅಭಿಯಾನ ನಡೆಸಲು ಇಂಧನ ಇಲಾಖೆ ನಿರ್ಧರಿಸಿದೆ.

ಕಳೆದ ಒಂದು ತಿಂಗಳಲ್ಲಿ ನಡೆದ ಟ್ರಾನ್ಸ್ ಫಾರ್ಮರ್ ದುರಂತಗಳ ಹಿನ್ನೆಲೆಯಲ್ಲಿ ಈ ಅಭಿಯಾನ ನಡೆಸಲು ತೀರ್ಮಾನಿಸಲಾಗಿದ್ದು, ಎಲ್ಲ ಹಂತದ ಅಧಿಕಾರಿಗಳಿಗೂ ಈ ಅಭಿಯಾನದಲ್ಲಿ ಭಾಗವಹಿಸುವಂತೆ ಇಂಧನ ಸಚಿವ ವಿ.ಸುನಿಲ್ ಕುಮಾರ್ ನಿರ್ದೇಶನ ನೀಡಿದ್ದಾರೆ.

ರಾಜ್ಯದಲ್ಲಿ ಹದಿನೈದು ವರ್ಷಕ್ಕಿಂತ ಹಳೆಯ ಪರಿವರ್ತಕಗಳು ಸಾಕಷ್ಟು ಪ್ರಮಾಣದಲ್ಲಿ ಇವೆ. ಮಳೆಗಾಲದಲ್ಲಿ ಅವುಗಳು ನಿರ್ವಹಣಾ ಸಮಸ್ಯೆ ಉಂಟಾಗುತ್ತಿವೆ. ಮಳೆಗಾಲದಲ್ಲಿ ಸಿಡಿಲು ಇತ್ಯಾದಿ ಕಾರಣಗಳಿಂದ ಪರಿವರ್ತಕಗಳ ಹಾನಿ ಸಾಧ್ಯತೆ ಇದೆ. ಜತೆಗೆ ಅಧಿಕ ಲೋಡ್ ನಿಂದ ಟ್ರಾನ್ಸ್ ಫಾರ್ಮರ್ ಹಾನಿಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲು ಅಭಿಯಾನ ನಡೆಸಲಾಗುತ್ತಿದೆ.

ಅಭಿಯಾನದಲ್ಲಿ ಎಲ್ಲ ಹಂತದ ಅಧಿಕಾರಿಗಳೂ ಭಾಗಿಯಾಗಬೇಕು. ಪ್ರತಿ ದಿನ ಪರಿಶೀಲನೆ ನಡೆಸಿದ ಟ್ರಾನ್ಸ್ ಫಾರ್ಮರ್ ಗಳ ವಿವರ, ಅವುಗಳಲ್ಲಿ ಕಂಡು ಬಂದ ನ್ಯೂನ್ಯತೆ, ಯಾವ ಕಾರಣಕ್ಕಾಗಿ ತೊಂದರೆ ಕಾಣಿಸಿಕೊಂಡಿದೆ ಎಂಬ ವಿವರವನ್ನು ಕೇಂದ್ರ ಕಚೇರಿಗೆ ಪ್ರತಿ ದಿನ ಕಳುಹಿಸಿಕೊಡುವಂತೆ ಸೂಚನೆ ನೀಡಲಾಗಿದೆ. ಪ್ರತಿ ವರ್ಷವೂ ಈ ರೀತಿ ಅಭಿಯಾನ ನಡೆಸುವುದರಿಂದ ಟ್ರಾನ್ಸ್ ಫಾರ್ಮರ್ ಗಳ ಕ್ಷಮತೆ ಹೆಚ್ಚಲಿದೆ.

ಟ್ರಾನ್ಸ್ ಫಾರ್ಮರ್ ಗಳ ರಿಪೇರಿಗೆ ಇಂಧನ ಇಲಾಖೆ ಪ್ರತಿವರ್ಷ 150 ಕೋಟಿ ರೂ. ವೆಚ್ಚ ಮಾಡುತ್ತದೆ. ನಿರ್ವಹಣಾ ಕೆಲಸವನ್ನು ಕಾಲ ಕಾಲಕ್ಕೆ ನಡೆಸಿದರೆ ರಿಪೇರಿ ವೆಚ್ಚ ತಗ್ಗಿಸುವುದಕ್ಕೆ ಸಾಧ್ಯವಿದೆ. ಜತೆಗೆ ಎಲ್ಲಿ ಹೊಸ ಟ್ರಾನ್ಸ್ ಫಾರ್ಮರ್ ಗಳ ತುರ್ತು ಅಗತ್ಯವಿದೆ ಎಂಬುದನ್ನೂ ಈ ಅಭಿಯಾನದ ಮೂಲಕ ತಿಳಿದುಕೊಳ್ಳುವುದಕ್ಜೆ ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹದಿನೈದು ದಿನಗಳ‌ ಕಾಲ ಅಭಿಯಾನ ನಡೆಸಲು ಸೂಚನೆ ನೀಡಲಾಗಿದೆ.

ನಮ್ಮ ಇಲಾಖೆಯ ಸ್ವತ್ತಿನ ಬಗ್ಗೆ ನಾವೇ ಜವಾಬ್ದಾರಿ ಹಾಗೂ ಬದ್ಧತೆ ಹೊಂದಿರಬೇಕು. ಈ ಹಿನ್ನೆಲೆಯಲ್ಲಿ ಅಭಿಯಾನ ಆಯೋಜಿಸಲಾಗಿದೆ. ಇದು 24  ಗಂಟೆಯಲ್ಲಿ ಟ್ರಾನ್ಸ್ ಫಾರ್ಮರ್ ಬದಲಾವಣೆ ಯೋಜನೆಯ ಮುಂದುವರಿದ ಭಾಗ. ಈ ದಿಶೆಯಲ್ಲಿ ನಾವು ಶೇ.80 ರಷ್ಟು ಯಶಸ್ಸು ಸಾಧಿಸಿದ್ದೇವೆ. ನಿರ್ವಹಣಾ ಸಮಸ್ಯೆ ಏಕೆ ಉದ್ಭವವಾಗುತ್ತಿದೆ ಎಂಬುದನ್ನು ಅರ್ಥೈಸಿಕೊಂಡರೆ ಪರಿಹಾರ ಕಲ್ಪಿಸುವುದು ಸುಲಭವಾಗುತ್ತದೆ.

ಟಾಪ್ ನ್ಯೂಸ್

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.