ರೋಗಿ- ಅಶಕ್ತರ ಸೇವೆ ಮಾಡುವುದು ವೈದ್ಯರ ಹೊಣೆಗಾರಿಕೆ

ಕ್ರಿಮ್ಸ್‌ ಘಟಿಕೋತ್ಸವದಲ್ಲಿ 143 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Team Udayavani, May 5, 2022, 10:08 AM IST

4

ಕಾರವಾರ: ವೃತ್ತಿ ಜೀವನದಲ್ಲಿ ರೋಗಿಯ, ಅಶಕ್ತರ ಸೇವೆ ಮಾಡುವುದು ನಮ್ಮೆಲ್ಲರ ಹೊಣೆಗಾರಿಕೆ ಎಂದು ಬೆಂಗಳೂರು ಕ್ರಿಮ್ಸ್‌ನ ವಿಶ್ರಾಂತ ನಿದೇಶಕ ಪದ್ಮಶ್ರೀ ಪುರಸ್ಕೃತ ಬಿ.ಎನ್‌. ಗಂಗಾಧರ್‌ ಹೇಳಿದರು.

ನಗರದ ಸರ್ಕಾರಿ ಮೆಡಿಕಲ್‌ ಕಾಲೇಜಿನಲ್ಲಿ ಬುಧವಾರ ನಡೆದ ಅಂತಿಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿಗಳ ಘಟಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

ರೋಗಿಯೇ ವೈದ್ಯ ವೃತ್ತಿಗೆ ಮುಖ್ಯ ಶಿಕ್ಷಕ. ಅವರಿದ್ದಾಗ ಮಾತ್ರ ಉತ್ತಮ ಶಿಕ್ಷಣ ಸಿಗುತ್ತದೆ. ವಿದ್ಯಾರ್ಥಿಗಳು ವೈದ್ಯರಾಗುವುದು ಹೊಸ ಪಟ್ಟ ಎನ್ನುವುದಕ್ಕಿಂತ ಹೊಸ ಜವಾಬ್ದಾರಿ ಎನ್ನುವುದು ಸೂಕ್ತ. ಯಾವ ಸಂಗತಿಗಳು ಗೊತ್ತಿಲ್ಲದ ಹೊಸ ವಿದ್ಯಾರ್ಥಿಗಳಿಗೆ ಶಿಕ್ಷಕರು ಪಠ್ಯ ಮಾತ್ರವಲ್ಲದೆ ನೈಪುಣ್ಯತೆಯನ್ನು ಹೇಳಿಕೊಟ್ಟಿದ್ದಾರೆ. ವಿದ್ಯಾರ್ಥಿಗಳಿಗೆ ಎಮ್‌ಬಿಬಿಎಸ್‌ ನಂತರ ಶೂನ್ಯ ಹಾಗೂ ನಾನು ತಜ್ಞ ಅಲ್ಲ ಎನ್ನುವ ಭಾವನೆ ಬೇಡ. ಎಲ್ಲದರ ಬಗ್ಗೆಯೂ ತಿಳಿಯುವುದೇ ವೈದ್ಯಕೀಯ ವಿಜ್ಞಾನ. ವೈದ್ಯ ಎನ್ನುವುದಕ್ಕಿಂದ ಪ್ರಾಮಾಣಿಕ ಹೃದಯ ಇರುವ ವ್ಯಕ್ತಿ ಎನ್ನುವ ಭಾವನೆಯಿಂದ ಕೆಲಸ ಮಾಡಿ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿಶಾಲ್‌ ರಾಜ್‌ ಮಾತನಾಡಿ, ನಾವು ಮಾಡುವ ಕೆಲಸದಲ್ಲಿ ಶೃದ್ಧೆ ಹಾಗೂ ಶ್ರಮ ಇರಬೇಕು. ಹಾಗಿದ್ದಾಗ ಮಾತ್ರ ವೃತ್ತಿ ಜೀವನದಲ್ಲಿ ಸಾಧನೆ ಮಾಡಲು ಸಾದ್ಯ ಎಂದರು. ಹುಬ್ಬಳ್ಳಿಯ ಕಿಮ್ಸ್‌ ವಿಶ್ರಾಂತ ನಿರ್ದೇಶಕ ವಿ.ಎನ್‌. ಬಿರಾದಾರ್‌ ಮಾತನಾಡಿ, ಇಂದು ವಿದ್ಯಾರ್ಥಿಗಳ ನಿಜವಾದ ಕೆಲಸ ಪ್ರಾರಂಭವಾಗುತ್ತದೆ. ನೀವು ಗಳಿಸುವ ಹಣ ಪರೋಕ್ಷವಾಗಿ ಒಬ್ಬ ಬಡವ ಕೊಟ್ಟಿರುತ್ತಾನೆ. ಹೀಗಾಗಿ ದಿನಕ್ಕೆ ಒಂದು ತಾಸು ಬಡ ರೋಗಿಗಳ ಸೇವೆಗೆ ಮೀಸಲಿಡಿ ಎಂದರು.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಮಾತನಾಡಿ, ಪದವಿ ಪಡೆದ ನಂತರ ಹೇಗೆ ನಿಮ್ಮ ಕರ್ತವ್ಯ ನಿರ್ವಹಿಸುತ್ತೀರಿ ಎನ್ನುವುದು ಮುಖ್ಯ. ನೀವು ಮಾಡುವ ಕೆಲಸಗಳು ನಿಮ್ಮ ವ್ಯಕ್ತಿತ್ವ ಮಾತ್ರವಲ್ಲದೇ ನಿಮ್ಮ ಶಿಕ್ಷಕರು ಹಾಗೂ ಕಾಲೇಜುನ್ನು ಪ್ರತಿನಿಧಿಸುತ್ತದೆ. ಈ ನಿಟ್ಟಿನಲ್ಲಿ ನೀವು ಕಲಿತ ಸಂಸ್ಥೆಯ ಗೌರವ ಹೆಚ್ಚಿಸಿ ಎಂದರು.

ಹುಬ್ಬಳ್ಳಿಯ ಕಿಮ್ಸ್‌ ನಿರ್ದೇಶಕ ರಾಮಲಿಂಗಪ್ಪ ಸಿ, ಐ.ಎನ್‌.ಎಚ್‌.ಎಸ್‌ ಪತಂಜಲಿ ಕಮಾಂಡಿಂಗ್‌ ಆಫಿಸರ್‌ ಕ್ಯಾಪ್ಟನ್‌ ಜಸ್ಕಿರಣ್‌ ಸಿಂಗ್‌ ರಾಂಧವ ಮಾತನಾಡಿದರು. ಸಭಾ ಕಾರ್ಯಕ್ರಮಕ್ಕೂ ಮುನ್ನ ಡೊಳ್ಳು, ವಾದ್ಯ ಮೇಳಗಳೊಂದಿಗೆ ಗಣ್ಯರನ್ನು ಸ್ವಾಗತಿಸಲಾಯಿತು.

ಘಟಿಕೋತ್ಸವದಲ್ಲಿ 143 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಎಂಬಿಬಿಎಸ್‌ನಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪದಕ ವಿತರಣೆ ಮಾಡಿ ಗೌರವಿಸಲಾಯಿತು. ವೈದ್ಯ ಪದವಿ ಪಡೆದ ವಿದ್ಯಾರ್ಥಿಗಳು ಸಂಭ್ರಮ ಆಚರಿಸಿದರು. ಕಾರ್ಯಕ್ರಮದಲ್ಲಿ ಮೆಡಿಕಲ್‌ ಕಾಲೇಜಿನ ಉಪನ್ಯಾಸಕ ಹಾಗೂ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಹಾಗೂ ಪಾಲಕರು ಹಾಜರಿದ್ದರು.

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.