ಸುಳ್ಯ : ಮದುವೆಯಾದ ಒಂದೇ ವರ್ಷಕ್ಕೆ ಆತ್ಮಹತ್ಯೆಗೆ ಶರಣಾದ ಮಹಿಳೆ
Team Udayavani, May 7, 2022, 8:27 PM IST
ಸುಳ್ಯ : ವಿವಾಹಿತ ಮಹಿಳೆಯೋರ್ವರು ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಗಾಂಧೀನಗರದ ಬಾಡಿಗೆ ಮನೆಯಲ್ಲಿ ಮೇ 6ರ ಸಂಜೆ ಬೆಳಕಿಗೆ ಬಂದಿದೆ.
ಸುಳ್ಯ ಗಾಂಧಿನಗರ ಕೆರೆಮೂಲೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅಮೀನ ಅವರ ಪುತ್ರಿ ಆಯೀಶಾ (20) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಕಳೆದ ವರ್ಷ ಕಾಸರಗೋಡಿನ ಯುವಕನೊಂದಿಗೆ ಈಕೆಯ ವಿವಾಹವಾಗಿದ್ದು, ಪತಿ ವಿದೇಶದಲ್ಲಿದ್ದಾರೆ ಎಂದು ತಿಳಿದುಬಂದಿದೆ. ವಿವಿಧ ಕಡೆಗಳಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಇವರು ಇತ್ತೀಚೆಗೆ ಗಾಂಧೀನಗರಕ್ಕೆ ಬಾಡಿಗೆ ಮನೆಗೆ ಬಂದಿದ್ದರು ಎನ್ನಲಾಗಿದೆ. ಜೀವನದಲ್ಲಿ ಮನನೊಂದು ಕೃತ್ಯ ಎಸಗಿರಬಹುದೆಂದು ತಾಯಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಬಳ್ಳಾರಿ : ಕಾಲೇಜು ಹಾಸ್ಟೆಲ್ ನಲ್ಲೇ ನೇಣು ಬಿಗಿದುಕೊಂಡು ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ