ಟೊಮೆಟೊ ಫ್ಲೂ ತಡೆಗಟ್ಟಲು ಕೇರಳ ಗಡಿಭಾಗದಲ್ಲಿ ಕಟ್ಟೆಚ್ಚರ:ಸಚಿವ ಡಾ.ಕೆ.ಸುಧಾಕರ್
ಕೊರೊನಾಗೂ ಟೊಮೆಟೊ ಫ್ಲೂಗೂ ಸಂಬಂಧವಿಲ್ಲ
Team Udayavani, May 11, 2022, 8:13 PM IST
ಬೆಂಗಳೂರು: ಮಕ್ಕಳಲ್ಲಿ ಕಂಡುಬರುವ ಟೊಮೆಟೊ ಫ್ಲೂ ರೋಗದ ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ಕೇರಳ ಗಡಿಭಾಗದ ಜಿಲ್ಲೆಗಳಲ್ಲಿ ಕಟ್ಟೆಚ್ಚರದ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದು ಈಗಾಗಲೇ ಇರುವ ಎಂಡೆಮಿಕ್ ಕಾಯಿಲೆಯಾಗಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಅಪರೂಪದ ವೈರಸ್ ರೋಗವಾಗಿರುವ ಟೊಮೆಟೊ ಜ್ವರದ ಪ್ರಕರಣಗಳು ಕೇರಳ ರಾಜ್ಯದ ಅರ್ಯಂಕಾರು, ಅಂಚಲ್ ಹಾಗೂ ನೆಡುವತೂರ್ ನಲ್ಲಿ ಕಂಡುಬಂದಿದೆ. ಸಾಮಾನ್ಯವಾಗಿ 5 ವರ್ಷ ವಯಸ್ಸಿನೊಳಗಿನ ಮಕ್ಕಳಲ್ಲಿ ಕಂಡುಬರುವ ಈ ರೋಗ, ಚರ್ಮದ ತುರಿಕೆ, ಕೆಂಪಾಗುವುದು, ನೀರಡಿಕೆ ಮೊದಲಾದ ಲಕ್ಷಣಗಳನ್ನು ಹೊಂದಿದೆ. ತೀವ್ರ ಜ್ವರ, ಮೈ ಕೈ ನೋವು, ಕೀಲು ನೋವು, ಆಯಾಸ ಮೊದಲಾದ ಲಕ್ಷಣಗಳೂ ಕಂಡುಬರುತ್ತವೆ. ಟೊಮೆಟೊ ಜ್ವರಕ್ಕೂ ಕೊರೊನಾಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.
ಕೇರಳದಲ್ಲಿ ಈ ರೋಗದ ಪ್ರಕರಣಗಳು ಪತ್ತೆಯಾಗಿರುವುದರಿಂದ ಮಂಗಳೂರು, ಉಡುಪಿ, ಕೊಡಗು, ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳಿಗೆ ಕೇರಳದಿಂದ ಆಗಮಿಸುವ ಪ್ರಯಾಣಿಕರ ಮೇಲೆ ಹೆಚ್ಚು ನಿಗಾ ಇರಿಸಲು ಸೂಚನೆ ನೀಡಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ರಾಜ್ಯದ ಯಾವುದೇ ಆಸ್ಪತ್ರೆಗಳ ಹೊರರೋಗಿ ವಿಭಾಗಗಳಲ್ಲಿ ಈ ರೋಗ ಲಕ್ಷಣ ಕಂಡುಬರುವ ಮಕ್ಕಳ ಬಗ್ಗೆ ಕೂಡಲೇ ಮಾಹಿತಿ ನೀಡಬೇಕು ಎಂದು ಸೂಚಿಸಲಾಗಿದೆ. ಈ ಬಗ್ಗೆ ಹೆಚ್ಚಿನ ನಿಗಾ ಇರಿಸಲು ಈ ಜಿಲ್ಲೆಗಳೂ ಸೇರಿದಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರ ಕಚೇರಿಯಿಂದ ಲಿಖಿತ ನಿರ್ದೇಶನ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು