ಜಿ.ಪಂ. ತಾ.ಪಂ ಚುನಾವಣೆ: ಮೇ 17ಕ್ಕೆ ಅರ್ಜಿ ವಿಚಾರಣೆ
Team Udayavani, May 12, 2022, 9:00 PM IST
ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯದ ಜಿ.ಪಂ ಹಾಗೂ ತಾ.ಪಂ. ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದ ಅರ್ಜಿಯನ್ನು ಮೇ 17ರಂದು ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ಹೇಳಿದೆ.
ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ ಮೆಮೋ ಪರಿಗಣಿಸಿದ ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ಪ್ರಸಾದ್ ಹಾಗೂ ನ್ಯಾ. ಎಂ.ಜಿ.ಎಸ್ ಕಮಾಲ್ ಅವರಿದ್ದ ರಜಾಕಾಲದ ವಿಭಾಗೀಯ ನ್ಯಾಯಪೀಠ ಗುರುವಾರ ಈ ರೀತಿ ಹೇಳಿತು.
ಕಲಾಪ ಆರಂಭವಾಗುತ್ತಿದ್ದಂತೆ ರಾಜ್ಯ ಚುನಾವಣಾ ಆಯೋಗದ ಪರ ಹಾಜರಾದ ಹಿರಿಯ ನ್ಯಾಯವಾದಿ ಕೆ.ಎನ್. ಫಣೀಂದ್ರ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಅದರಂತೆ, ರಾಜ್ಯದಲ್ಲೂ ಜಿ.ಪಂ. ತಾ.ಪಂ ಚುನಾವಣೆ ನಡೆಸಬೇಕಾಗಿದೆ. ಈಗಾಗಲೇ ಚುನಾವಣೆ ಸಾಕಷ್ಟು ವಿಳಂಬವಾಗಿದೆ. ಈ ಕುರಿತ ಚುನಾವಣಾ ಆಯೋಗದ ಅರ್ಜಿ ವಿಚಾರಣಾ ಹಂತದಲ್ಲಿದೆ. ಸುಪ್ರೀಂಕೋರ್ಟ್ ತೀರ್ಪಿನಿಂದ ತುರ್ತು ಸ್ಥಿತಿ ಎದುರಾಗಿದ್ದು, ಅದಕ್ಕಾಗಿ ಮೆಮೋ ಸಲ್ಲಿಸಲಾಗಿದೆ. ಮೇ 17ರಂದು ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿಬೇಕು ಎಂದು ಮನವಿ ಮಾಡಿದರು.
ಇದನ್ನು ಪರಿಗಣಿಸಿದ ನ್ಯಾಯಪೀಠ, ಅರ್ಜಿಯನ್ನು ಮೇ 17ರಂದು ವಿಚಾರಣೆ ನಡೆಸುವುದಾಗಿ ಹೇಳಿ, ವಿಚಾರಣೆಯನ್ನು ಮುಂದೂಡಿತು.
ಕಳೆದ ವರ್ಷ ಏಪ್ರಿಲ್, ಮೇ ಮತ್ತು ಜೂನ್ ತಿಂಗಳಲ್ಲಿ ಅವಧಿ ಪೂರ್ಣಗೊಂಡ ರಾಜ್ಯದ ಜಿ.ಪಂ ಹಾಗೂ ತಾ.ಪಂಗಳಿಗೆ ಚುನಾವಣೆ ನಡೆಸಲು ಸಿದ್ದತೆ ಆರಂಭಿಸಿದ್ದ ಚುನಾವಣಾ ಆಯೋಗ ಕ್ಷೇತ್ರ ಪುನರ್ವಿಂಗಡಣೆ ಮಾಡಿ ಮತದಾರರ ಅಂತಿಮ ಪಟ್ಟಿ ಸಹ ಪ್ರಕಟಿಸಿತ್ತು. ಮೀಸಲಾತಿ ಕರಡು ಸಹ ಪ್ರಕಟಿಸಲಾಗಿತ್ತು. ಇನ್ನೇನು ದಿನಾಂಕ ಘೋಷಣೆ ಮಾಡಬೇಕೆನ್ನುವಷ್ಟರಲ್ಲಿ ಕ್ಷೇತ್ರ ಪುರನ್ವಿಂಗಡಣೆ ಮತ್ತು ಮೀಸಲಾತಿ ಅಧಿಕಾರವನ್ನು ಚುನಾವಣಾ ಆಯೋಗದಿಂದ ಹಿಂಪಡೆದು ಸರ್ಕಾರ ಪ್ರತ್ಯೇಕವಾಗಿ ಸೀಮಾ ನಿರ್ಣಯ ಆಯೋಗ ರಚಿಸಿತ್ತು. ಅದನ್ನು ಪ್ರಶ್ನಿಸಿ ಚುನಾವಣಾ ಆಯೋಗ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದೆ. ಆ ಅರ್ಜಿ ವಿಚಾರಣಾ ಹಂತದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ