ರಾಜ್ಯದ ನರ್ಸಿಂಗ್ ಕಾಲೇಜುಗಳ ಗುಣಮಟ್ಟ ಸುಧಾರಣೆಗೆ ಆದ್ಯತೆ :  ಬೊಮ್ಮಾಯಿ

Team Udayavani, May 12, 2022, 8:50 PM IST

ರಾಜ್ಯದ ನರ್ಸಿಂಗ್ ಕಾಲೇಜುಗಳ ಗುಣಮಟ್ಟ ಸುಧಾರಣೆಗೆ ಆದ್ಯತೆ :  ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿರುವ ನರ್ಸಿಂಗ್ ಕಾಲೇಜುಗಳ ಗುಣಮಟ್ಟ ಸುಧಾರಣೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಂಗ್ಲೋ ಇಂಡಿಯನ್ ಯುನಿಟಿ ಸೆಂಟರ್ ಇವರ ಸಹಭಾಗಿತ್ವದಲ್ಲಿ ಅಂತರರಾಷ್ಟ್ರೀಯ ಶುಶ್ರೂಷಕರ ದಿನಾಚರಣೆ ಮತ್ತು 20ನೇ ಕರ್ನಾಟಕ ರಾಜ್ಯ ಮಟ್ಟದ ಫಾರೆನ್ಸ ನೈಟಿಂಗೇಲ್ ಶುಶ್ರೂಷ ಅಧಿಕಾರಿಗಳ ಪ್ರಶಸ್ತಿ 2020-2021 ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಆರೋಗ್ಯ ಕ್ಷೇತ್ರದಲ್ಲಿ ನರ್ಸಿಂಗ್ ವೃತ್ತಿಗೆ ಬಹಳ ಮಹತ್ವವಿದೆ. ಆಧುನಿಕ ವೈದ್ಯಕೀಯ ಉಪಕರಣಗಳ ಬಳಕೆ ಸೇರಿದಂತೆ ವೈದ್ಯಕೀಯ ಕ್ಷೇತ್ರದ ಎಲ್ಲ ಅರಿವು ಶುಶ್ರೂಷಕರಿಗೆ ಅವಶ್ಯಕವಿದೆ. ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸಬೇಕು. ಉತ್ತಮ ಸೇವೆ ಸಲ್ಲಿಸಿದ ಶುಶ್ರೂಷಕರನ್ನು ಗುರುತಿಸಿ ಗೌರವಿಸುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ತಿಳಿಸಿದರು.

ಆರೋಗ್ಯ ಕ್ಷೇತ್ರದ ಅಭಿವೃದ್ಧಿ :
ಸರ್ಕಾರ ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡಿದೆ. ಆರೋಗ್ಯ ಕ್ಷೇತ್ರದ ವಲಯವಾರು ಅಭಿವೃದ್ಧಿಗೆ 108 ತಾಲ್ಲೂಕುಗಳನ್ನು ಗುರುತಿಸಲಾಗಿದೆ. ಅವುಗಳಿಗೆ ಮೂಲಸೌಕರ್ಯ, ಸ್ಟಾಫ್ ನರ್ಸುಗಳು, ಲ್ಯಾಬ್ ಪರಿಣಿತರು, ವೈದರನ್ನು ಒದಗಿಸುವ ಮಹತ್ವದ ಕಾರ್ಯವನ್ನು ಮಾಡಲಾಗುತ್ತಿದೆ. ರಾಜ್ಯದ ಅಭಿವೃದ್ದಿಯಲ್ಲಿ ಆರೋಗ್ಯ ಮತ್ತು ಶಿಕ್ಷಣ ಪ್ರಮುಖವಾದ ಕ್ಷೇತ್ರಗಳು. ಎಲ್ಲ ನಗರಗಳಲ್ಲಿ ‘ನಮ್ಮ ಕ್ಲೀನಿಕ್’ ಸ್ಥಾಪನೆ, 100 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೇಲ್ದರ್ಜೆ, 4 ಜಿಲ್ಲೆಗಳಲ್ಲಿ ಸಂಚಾರಿ ಆಸ್ಪತ್ರೆಗಳನ್ನು ನಿರ್ಮಿಸಲಾಗುತ್ತಿದೆ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳು, 4000 ವೈದ್ಯರು ಹಾಗೂ ನರ್ಸುಗಳ ನೇಮಕಾತಿ ಮಾಡಲಾಗಿದೆ. ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಷನ್ ಅಡಿ ಕೆಲಸ ಮಾಡುತ್ತಿರುವ ನರ್ಸುಗಳ ವೇತನದ ಪಾವತಿಯಲ್ಲಿನ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದರು.

ಇದನ್ನೂ ಓದಿ : ಮಕ್ಕಳ ಕೈಗೆ ದ್ವಿಚಕ್ರ ವಾಹನ ನೀಡದಿರಿ : ಇನ್ಸ್ ಪೆಕ್ಟರ್ ಚಿಕ್ಕಸ್ವಾಮಿ ಮನವಿ

ಶುಶ್ರೂಷಕರ ಮಾನವೀಯ ಸೇವೆ ಬೆಲೆ ಕಟ್ಟಲಾಗದ್ದು :
ಉದಾತ್ತವಾದ ವೃತ್ತಿಯಲ್ಲಿರುವ ಶುಶ್ರೂಷಕರು ದೇವಧೂತರಂತೆ ಕಾರ್ಯನಿರ್ವಹಿಸುತ್ತಾರೆ. ಶುಶ್ರೂಷಕರ ಮಾನವೀಯ ಸೇವೆ ಬೆಲೆ ಕಟ್ಟಲಾಗದ್ದು. ವೃತ್ತಿಪರ ಶುಶ್ರೂಷಕರಿಂದ ರೋಗಿಗಳ ಮಾನಸಿಕ ಸ್ಥೈರ್ಯ ಹೆಚ್ಚುತ್ತದೆ. ಯುದ್ಧಸಂದರ್ಭದಲ್ಲಿ ಫ್ಲಾರೆನ್ಸ್ ನೈಟಿಂಗೇಲ್ ಅವರು ಮಾಡಿದ ಸೇವೆ ವಿಶ್ವಕ್ಕೆ ಮಾದರಿಯಾಗಿದೆ. ಅವರ ಜಯಂತಿಯಂದು ಶುಶ್ರೂಷ ಅಧಿಕಾರಿಗಳಿಗೆ ಪ್ರಶಸ್ತಿ ನೀಡುತ್ತಿರುವುದು ಅತ್ಯಂತ ಸಮಂಜಸವಾಗಿದೆ. ಆಂಗ್ಲೋ ಇಂಡಿಯನ್ ಯೂನಿಟಿ ಸೆಂಟರ್ನ ಶ್ರೀ ಐವಾನ್ ನಿಗ್ಲಿಯವರು ಈ ಪ್ರಶಸ್ತಿಯನ್ನು ನೀಡುತ್ತಾ ಬಂದಿರುವುದಕ್ಕೆ ಅಭಿನಂದನೆಗಳು. ರಾಜ್ಯದ ಶುಶ್ರೂಷಕರು ವಿಶ್ವದಾದ್ಯಂತ ಉತ್ತಮ ಸೇವೆಯನ್ನು ಸಲ್ಲಿಸುತ್ತಿದ್ದಾರೆ ಎಂದರು.

ಇದನ್ನೂ ಓದಿ : ಗುಂಡ್ಲುಪೇಟೆ : ಲಂಚಕ್ಕೆ ಬೇಡಿಕೆ, ಎಸಿಬಿ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಉತ್ತರ ಕರ್ನಾಟಕ ಭಾಗದ ನರ್ಸುಗಳನ್ನು ಪ್ರಶಸ್ತಿಗೆ ಪರಿಗಣಿಸಲು ಸಲಹೆ :
ಉತ್ತರ ಕರ್ನಾಟಕ ಭಾಗದಲ್ಲಿ ಉತ್ತಮವಾದ ನರ್ಸಿಂಗ್ ಕಾಲೇಜುಗಳು ಹಾಗೂ ಶುಶ್ರೂಷಕರಿದ್ದಾರೆ. ದೂರದ ಊರುಗಳಲ್ಲಿರುವ ನರ್ಸುಗಳ ಸೇವೆಯನ್ನು ಗುರುತಿಸಿದರೆ , ಆ ಪ್ರದೇಶದಲ್ಲಿರುವ ನರ್ಸುಗಳಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ. ಆ ಭಾಗದ ನರ್ಸುಗಳನ್ನೂ ಪ್ರಶಸ್ತಿಗೆ ಪರಿಗಣಿಸಬೇಕೆಂದು ಶ್ರೀ ಐವಾನ್ ನಿಗ್ಲಿಯವರಿಗೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಶಿವಮೊಗ್ಗದ ಜಾಹ್ನವಿ ಗೌಡ ಎಂಬ 24 ವರ್ಷದ ಶುಶ್ರೂಷಕಿ ಮೃತಪಟ್ಟಾಗ ತಮ್ಮ ಅಂಗಾಂಗಳನ್ನು ದಾನ ಮಾಡುವ ಮೂಲಕ 6 ಜನರಿಗೆ ಜೀವದಾನ ಮಾಡಿದ್ದಾರೆ. ತಮ್ಮ ಮರಣದ ನಂತರವೂ ತನ್ನ ಅಂಗಾಂಗಗಳು ಇತರರಿಗೆ ಉಪಯೋಗವಾಗಲಿ ಎಂಬ ಉದಾತ್ತ ಭಾವ ನಿಜಕ್ಕೂ ಶ್ಲಾಘನೀಯ ಎಂದು ತಿಳಿಸಿದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.