ಮೇ. 14ಕ್ಕೆ ಉಡುಪಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ
Team Udayavani, May 13, 2022, 1:04 PM IST
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಉಡುಪಿ ಶ್ರೀ ಕೃಷ್ಣ ಮಠ, ಕೊಲ್ಲೂರು ಮೂಕಾಂಬಿಕ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.
ಶುಕ್ರವಾರ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿರುವ ಸಚಿವೆ, ಶನಿವಾರ ಮುಂಜಾನೆ ಉಡುಪಿ ಶ್ರೀ ಕೃಷ್ಣ ಮಠ, ಕೊಲ್ಲೂರು ಮೂಕಾಂಭಿಕೆ ದೇವಿಯ ದರ್ಶನ ಪಡೆಯಲಿದ್ದಾರೆ.
ಇದನ್ನೂ ಓದಿ:ಕಾಪು ಕರಾವಳಿಯಲ್ಲಿ ಭೂತಾಯಿ ಮೀನಿನ ಸುಗ್ಗಿ: ಸುಮಾರು 30 ಟನ್ ಗೂ ಅಧಿಕ ಮೀನು ಬಲೆಗೆ
ಶನಿವಾರ ದೇಗುಲ ಭೇಟಿಯ ಬಳಿಕ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅದೇ ದಿನ ರಾತ್ರಿ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.