ಮಂಗಳೂರು: ಯುವತಿಗೆ ಮಾದಕ ವಸ್ತು ನೀಡಿ ಅತ್ಯಾಚಾರ; ಆರೋಪಿ ಸೆರೆ
ವಿವಿಧ ಕಡೆ ಲಾಡ್ಜ್ ಗಳಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿ ಚಿತ್ರೀಕರಿಸಿದ್ದ
Team Udayavani, May 13, 2022, 7:50 PM IST
ಮಂಗಳೂರು: ಮೂಡಬಿದಿರೆ ನಿವಾಸಿ ಯುವತಿಯೊಬ್ಬಳನ್ನು ಮದುವೆಯಾಗುವ ಅಮಿಷವೊಡ್ಡಿ ಅತ್ಯಾಚಾರ ನಡೆಸಿ ಆಕೆಯಿಂದ ಹಣವನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮೂಡಬಿದಿರೆ ನಿವಾಸಿ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ಹಣವನ್ನು ಸುಲಿಗೆ ಮಾಡಿದ್ದು, ಅಲ್ಲದೇ ಆಕೆಗೆ ಮಾದಕ ವಸ್ತುಗಳನ್ನು ಬಲವಂತವಾಗಿ ಸೇವನೆ ಮಾಡಿಸಿ ಆಕೆಯ ನಗ್ನ ಚಿತ್ರಗಳನ್ನು ಮೊಬೈಲ್ ನಲ್ಲಿ ಚಿತ್ರಿಕರಣ ಮಾಡಿ ನಂತರ ಹಣವನ್ನು ನೀಡಬೇಕೆಂದು ಬೆದರಿಕೆ ಹಾಕಿ 1 ಲಕ್ಷದ 50 ಸಾವಿರ ರೂ. ಸುಲಿಗೆ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ವಿವಿಧ ಕಡೆಗಳಲ್ಲಿನ ಲಾಡ್ಜ್ ಗಳಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದ. ಈ ಬಗ್ಗೆ ನೊಂದ ಯುವತಿಯು ನೀಡಿದ ದೂರಿನಂತೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಬಳಿಕ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಲಾಗಿತ್ತು.
ಇದನ್ನೂ ಓದಿ : ಆ್ಯಸಿಡ್ ದಾಳಿಕೋರ ನಾಗೇಶ್ ಕೊನೆಗೂ ಅರೆಸ್ಟ್: ಸ್ವಾಮೀಜಿಯಂತೆ ವೇಷ ಧರಿಸಿದ್ದ!
ಬಂಧಿತ ಆರೋಪಿ ಉಳ್ಳಾಲದ ಪೆರ್ಮನ್ನೂರು ಗ್ರಾಮದ ಶಾನ್ ನವಾಸ್ (36) ಎನ್ನುವವನಾಗಿದ್ದಾನೆ.ಬಂಧಿತನನ್ನ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ.
ಆರೋಪಿಯು ಈ ಹಿಂದೆ 2019 ಹಾಗೂ 2020 ರಲ್ಲಿ ಮಂಗಳೂರು ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಮಾದಕ ವಸ್ತು ಮಾರಾಟದ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ.
ನೊಂದ ಯುವತಿಯನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ದಾಖಲಿಸಲಾಗಿದ್ದು, ಆಕೆಗೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ