ಅಂದು ಬಿಸಿಲಾಯಿತು ಇಂದು ಮಳೆಗೆ ಒದ್ದೆಯಾಗಿ ಪಾಠ ಕೇಳುವ ಸ್ಥಿತಿ

ಮಣಿಕ್ಕರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳ ಗೋಳು

Team Udayavani, May 20, 2022, 9:41 AM IST

manikkara

ಸವಣೂರು: ಮಣಿಕ್ಕರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಉರಿಬಿಸಿಲಿನಲ್ಲಿ ಒಣಗಿಕೊಂಡು ಪಾಠ ಕೇಳಬೇಕಾದ ದಯನೀಯ ಸ್ಥಿತಿಯ ಬಗ್ಗೆ ಉದಯವಾಣಿ ವರದಿ ಪ್ರಕಟಿಸಿತ್ತು. ವರದಿಯ ಫ‌ಲಶ್ರುತಿಯಾಗಿ ಕೋಡಿಂಬಾಡಿ ಅಶೋಕ್‌ ರೈ ಅವರು ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಅವರ ಜತೆ ಮಾತನಾಡಿ ಡಿವಿಎಸ್‌ ಅವರ ಸದಾಸ್ಮಿತ ಫೌಂಡೇಶನ್‌ ಮೂಲಕ ಒಂದು ಕೊಠಡಿ ನಿರ್ಮಾಣದ ಭರವಸೆ ನೀಡಿದ್ದರು. ಬಳಿಕ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್‌ ಕುಮಾರ್‌ ರೈ ಅವರು ಇನ್ನೊಂದು ಕೊಠಡಿ ನಿರ್ಮಾಣ ಮಾಡಿಕೊಡುವುದಾಗಿ ತಿಳಿಸಿದ್ದರು. ಇದೀಗ ಅದರ ಕಾಮಗಾರಿ ನಿರ್ಮಾಣ ಹಂತದಲ್ಲಿದೆ. ಆದರೂ ಇಲ್ಲಿನ ಬೇಡಿಕೆ ಪೂರೈಸಲು ಸಾಲುತ್ತಿಲ್ಲ.

ಇದೀಗ ಶಾಲೆ ಪುನರಾರಂಭಗೊಂಡಿದೆ. ಮಳೆರಾಯನ ಅಬ್ಬರವೂ ಜೋರಾಗಿದೆ. ಇದರಿಂದ ಮತ್ತೆ ಮಕ್ಕಳಿಗೆ ಪಾಠ ಕೇಳಲು ಸಮಸ್ಯೆಯಾಗಿದೆ.

ಮಣಿಕ್ಕರ ಈ ಶಾಲೆಯಲ್ಲಿ 88ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಶಾಲೆಯಲ್ಲಿ ಸದ್ಯಕ್ಕೆ ಶಿಕ್ಷಕರ ಕೊರತೆಯಿಲ್ಲ. ಮಕ್ಕಳು ಪಾಠ ಕೇಳಲು ಕುಳಿತುಕೊಳ್ಳುವ ತರಗತಿ ಕೋಣೆಗಳು ಬಿರುಕು ಬಿಟ್ಟಿದೆ. ಸ್ವಲ್ಪ ಹೆಚ್ಚು ಕಮ್ಮಿಯಾದರೂ ಛಾವಣಿ, ಗೋಡೆ ಬಿದ್ದರೂ ಅಚ್ಚರಿಯಿಲ್ಲ. ಶಾಲೆಯಲ್ಲಿರುವ ನಲಿ-ಕಲಿ ಕೊಠಡಿ ಹೊರತುಪಡಿಸಿ ಉಳಿದ ಎಲ್ಲ ತರಗತಿಗಳದ್ದು ಇದೇ ಅವಸ್ಥೆ.

ತರಗತಿ ಕೋಣೆಯ ಗೋಡೆ ಬೀಳುವ ಸ್ಥಿತಿಯಲ್ಲಿರುವುದರಿಂದ 1ರಿಂದ 7 ನೇ ತರಗತಿಯ ಮಕ್ಕಳು ಈಗ ಶಾಲಾ ರಂಗ ಮಂಟಪದಲ್ಲಿ ಪಾಠ ಕೇಳುವ ಸ್ಥಿತಿಯಲ್ಲಿದ್ದಾರೆ.

ಮನವಿ ನೀಡಿದರೂ ಸ್ಪಂದನೆಯೇ ಇಲ್ಲ

ಈ ಶಾಲೆಯ ಅವಸ್ಥೆಯ ಬಗ್ಗೆ ಶಿಕ್ಷಣ ಇಲಾಖೆಗೂ, ಜನಪ್ರತಿನಿಧಿಗಳ ಗಮನಕ್ಕೆ ಕಳೆದ ಶೈಕ್ಷಣಿಕ ವರ್ಷದಲ್ಲೇ ತರಲಾಗಿದೆ. ಕಳೆದ ಐದು ವರ್ಷಗಳಿಂದ ಈ ಶಾಲೆ ಅಪಾಯದ ಎಚ್ಚರಿಕೆ ಕೊಡುತ್ತಲೇ ಇದೆ. ಪೋಷಕರು ನಿತ್ಯವೂ ಆತಂಕ, ದುಗುಡ, ದುಮ್ಮಾನಗಳ ನಡುವೆಯೇ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿದ್ದಾರೆ. ನಮ್ಮ ಮಕ್ಕಳ ಜೀವಕ್ಕೆ ಬೆಲೆಯಿಲ್ಲವೇ ಎಂದು ಪೋಷಕರು ಪ್ರಶ್ನಿಸಿ ಕೂಡಲೇ ಪರ್ಯಾಯ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿದ್ದಾರೆ. ತರಗತಿ ಕೋಣೆ ಬಂದ್‌ ಅಪಾಯದ ಮುನ್ಸೂಚನೆಯ ಕಾರಣಕ್ಕೆ ಶಾಲೆಯ ಎಲ್ಲ ತರಗತಿ ಕೋಣೆಯನ್ನು ಬಂದ್‌ ಮಾಡಲಾಗಿದೆ. ನಲಿಕಲಿ ಕೊಠಡಿ ಹಾಗೂ ರಂಗ ಮಂದಿರದಲ್ಲಿ ಮಕ್ಕಳು ಪಾಠ ಕೇಳುತ್ತಿದ್ದಾರೆ.

ಭಕ್ತಕೋಡಿ ಶಾಲೆಯಲ್ಲೂ ಸಮಸ್ಯೆ

ಸರ್ವೆ ಗ್ರಾಮದ ಭಕ್ತಕೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಈ ಬಾರಿ 15 ಮಕ್ಕಳು ಒಂದನೇ ತರಗತಿ ದಾಖಲಾಗಿದ್ದಾರೆ. ಕೊಠಡಿ ಸಮಸ್ಯೆಗಳಿಂದ 1,2,3 ನೇ ತರಗತಿಗಳು ಒಂದು ಕೊಠಡಿಯಲ್ಲಿ, 3,4,5ನೇ ತರಗತಿಗಳು ಒಂದೇ ಕೊಠಡಿ ಯಲ್ಲಿ ಹಾಗೂ 6,7ನೇ ತರಗತಿಗಳು ಬೇರೆ ಬೇರೆ ಕೊಠಡಿಗಳಲ್ಲಿ ನಡೆಯಲಿದೆ.ಕಳೆದ ವರ್ಷವೇ ಶಾಲೆಗೆ ಅಗತ್ಯವಿರುವ ಕೊಠಡಿಗಳನ್ನು ಒದಗಿಸುವಂತೆ ಮನವಿ ಮಾಡಿದ್ದೆವು. ಈ ಬಾರಿ ಮಳೆಯ ನಡುವೆ ಶೈಕ್ಷಣಿಕ ವರ್ಷ ಆರಂಭವಾಗಿದೆ. ಸಮಸ್ಯೆ ಹಾಗೆಯೇ ಇದೆ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಸಂತ ಕೈಪಂಗಳ ಹೇಳಿದ್ದಾರೆ.

ಅಪಾಯ ಕಟ್ಟಿಟ್ಟ ಬುತ್ತಿ

ಮಣಿಕ್ಕರ ಶಾಲೆಯ ಪೋಷಕರ ಅಳಲನ್ನು ಜನಪ್ರತಿನಿಧಿಗಳು, ಅಧಿಕಾರಿಗಳು ಪುರಸ್ಕರಿಸದೇ ಇದ್ದಲ್ಲಿ ಶಾಲೆಯಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ. ರಹಿಮಾನ್‌, ಅಧ್ಯಕ್ಷರು, ಶಾಲಾಭಿವೃದ್ಧಿ ಸಮಿತಿ

ಟಾಪ್ ನ್ಯೂಸ್

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.