ಜ್ಞಾನವಾಪಿ ಶಿವಲಿಂಗದ ಕುರಿತು ಫೇಸ್ಬುಕ್ ಪೋಸ್ಟ್ ಮಾಡಿದ ದೆಹಲಿ ಪ್ರಾಧ್ಯಾಪಕರ ಬಂಧನ
Team Udayavani, May 21, 2022, 9:12 AM IST
ಹೊಸದಿಲ್ಲಿ: ವಾರಾಣಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಪತ್ತೆಯಾದ ‘ಶಿವಲಿಂಗ’ದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಕ್ಕಾಗಿ ದೆಹಲಿ ವಿಶ್ವವಿದ್ಯಾಲಯದ ಹಿಂದೂ ಕಾಲೇಜಿನ ಸಹ ಪ್ರಾಧ್ಯಾಪಕ ರತನ್ ಲಾಲ್ ಅವರನ್ನು ಶುಕ್ರವಾರ ರಾತ್ರಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತೀಯ ದಂಡ ಸಂಹಿತೆ 153ಎ (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸೌಹಾರ್ದತೆ ಕಾಪಾಡಲು ದುಷ್ಪರಿಣಾಮ ಬೀರುವ ಕೃತ್ಯಗಳು) ಮತ್ತು 295ಎ (ಉದ್ದೇಶಪೂರ್ವಕ ಕೃತ್ಯ) ಅಡಿಯಲ್ಲಿ ರತನ್ ಲಾಲ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೆಹಲಿ ಮೂಲದ ವಕೀಲರೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಮಂಗಳವಾರ ರಾತ್ರಿ ರತನ್ ಲಾಲ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ವಕೀಲ ವಿನೀತ್ ಜಿಂದಾಲ್ ಅವರು ತಮ್ಮ ದೂರಿನಲ್ಲಿ, ಲಾಲ್ ಇತ್ತೀಚೆಗೆ “ಶಿವಲಿಂಗದ ವಿರುದ್ಧ ಅವಹೇಳನಕಾರಿ, ಪ್ರಚೋದನಕಾರಿ ಟ್ವೀಟ್ ಅನ್ನು ಹಂಚಿಕೊಂಡಿದ್ದಾರೆ” ಎಂದು ಹೇಳಿದರು.
ಇದನ್ನೂ ಓದಿ:ಧಾರವಾಡದಲ್ಲಿ ಭೀಕರ ಅಪಘಾತ: ಮರಕ್ಕೆ ಕ್ರೂಸರ್ ಢಿಕ್ಕಿ; ಮಕ್ಕಳು ಸೇರಿ ಸ್ಥಳದಲ್ಲೇ 7 ಜನ ಸಾವು
ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಸಿಕ್ಕಿರುವ ‘ಶಿವಲಿಂಗ’ದ ವಿಚಾರವಾಗಿ ಈ ಹೇಳಿಕೆಯನ್ನು ಪೋಸ್ಟ್ ಮಾಡಲಾಗಿದ್ದು, ಇದು ಅತ್ಯಂತ ಸೂಕ್ಷ್ಮ ಸ್ವರೂಪದ್ದಾಗಿದ್ದು, ಈ ವಿಷಯ ನ್ಯಾಯಾಲಯದ ಮುಂದೆ ಬಾಕಿ ಇದೆ ಎಂದು ವಕೀಲರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್ ಇದ್ದಂತೆ…
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ