ನಿಯಮ ಬಾಹಿರ ರಸ್ತೆ ನಿರ್ಮಾಣಕ್ಕೆ ಸಾರ್ವಜನಿಕರ ವಿರೋಧ

ವಾಣಿಜ್ಯ ಬಂದರು ವಿರೋಧಿ ಹೋರಾಟಗಾರರ ಮೇಲೆ ಹಲ್ಲೆಗೆ ಯತ್ನಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯ

Team Udayavani, May 22, 2022, 2:17 PM IST

7

ಕಾರವಾರ: ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ, ಕಡಲಾಮೆಗಳು ಮೊಟ್ಟೆ ಇಡುವ ತಾಣಗಳಲ್ಲಿ ಒಂದಾದ ಕಾಸರಕೋಡ ಟೊಂಕದ ಕಡಲತೀರದಲ್ಲಿ ನಿಯಮ ಬಾಹಿರವಾಗಿ ಬಲವಂತದಿಂದ ರಸ್ತೆ ಕಾಮಗಾರಿ ನಡೆಸಲಾಗುತ್ತಿದೆ ಎಂದು ರಾಷ್ಟ್ರೀಯ ಮೀನುಗಾರರ ಸಂಘಟನೆ ರಾಜ್ಯ ಕಾರ್ಯದರ್ಶಿ ಚಂದ್ರಕಾಂತ ಕೊಚರೇಕರ ಆರೋಪಿಸಿದರು.

ಇಲ್ಲಿನ ಜಿಲ್ಲಾ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ರಸ್ತೆ ಕೆಲಸ ನಡೆಸುತ್ತಿರುವುದನ್ನು ಪ್ರಶ್ನಿಸಿದ ಕಾಸರಕೋಡ ವಾಣಿಜ್ಯ ಬಂದರು ವಿರೋಧಿ ಹೋರಾಟಗಾರರ ಮೇಲೆ ಮತ್ತು ಸ್ಥಳೀಯರ ಮೇಲೆ ಹಲ್ಲೆಗೆ ಯತ್ನಿಸಿ ದಬ್ಟಾಳಿಕೆ ನಡೆಸುತ್ತಿರುವವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು. ನಿಯಮಬಾಹಿರ ಕಾಮಗಾರಿ ನಡೆಸುವುದನ್ನು ತಡೆಹಿಡಿಯಬೇಕು. ಇಂತಹ ನಿಯಮ ಬಾಹಿರ ಕಾಮಗಾರಿಗೆ ಉತ್ತೇಜನ ನೀಡುವುದನ್ನು ಜಿಲ್ಲಾಡಳಿತ ಮತ್ತು ಸ್ಥಳೀಯ ಆಡಳಿತ ಕೈಬಿಡಬಿಡದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸರ್ಕಾರ ಮತ್ತು ಜನಪ್ರತಿನಿಧಿಗಳು ನಮ್ಮ ಬೇಡಿಕೆಯನ್ನು ಈಡೇರಿಸಲಿಲ್ಲ ಎಂದು ವಿಷಾದಿಸಿದರು. ಸ್ಥಳೀಯರ ತೀವ್ರ ವಿರೋಧದ ನಡುವೆಯೂ, ಉಚ್ಚ ನ್ಯಾಯಾಲಯದ ನಿರ್ದೇಶನಕ್ಕೆ ವಿರುದ್ಧವಾಗಿ ಸಿಆರ್‌ಝೆಡ್‌ ಮತ್ತು ಪರಿಸರ ಇಲಾಖೆಯ ಪರವಾನಗಿ ಪಡೆಯದೇ ಇಲ್ಲಿನ ಕಡಲತೀರದಲ್ಲಿ ಭಾರಿ ಪ್ರಮಾಣದಲ್ಲಿ ಮಣ್ಣು, ಕೆಂಪು ಕಲ್ಲು, ಜಲ್ಲಿಕಲ್ಲನ್ನು, ಧೂಳು ಮಿಶ್ರಿತ ಜಲ್ಲಿ ಪುಡಿ ಸುರಿದು ಕಚ್ಚಾ ರಸ್ತೆ ದುರಸ್ತಿ ನೆಪದಲ್ಲಿ ಸುಮಾರು 4 ಕಿ.ಮೀ. ಉದ್ದದ ಪಕ್ಕಾರಸ್ತೆ ನಿರ್ಮಿಸಲು ಪ್ರಯತ್ನಿಸುತ್ತಿದ್ದಾರೆ. ಇಲ್ಲಿ ರಸ್ತೆ ಮತ್ತು ರೈಲು ಮಾರ್ಗ ನಿರ್ಮಾಣಕ್ಕೆ ಸಿಆರ್‌ಝೆಡ್‌ ಪರಿಸರ ಮತ್ತು ವಾಯು ಮಾಲಿನ್ಯ ನಿಯಂತ್ರಣ ಮಂಡಳಿ ಪರವಾನಿಗೆ ದಿ ಹೊನ್ನಾವರ ಪೋರ್ಟ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿಯವರು ಅರ್ಜಿ ಸಲ್ಲಿಸಿದ್ದಾರೆ.

ಆದರೆ ಬಂದರು ನಿರ್ಮಾಣ ಕಂಪನಿಯ ಕೋರಿಕೆಗೆ ಸ್ಥಳೀಯರು ಲಿಖೀತ ಆಕ್ಷೇಪಣೆ ಸಲ್ಲಿಸಿದ್ದು ಸಿಆರ್‌ಝೆಡ್‌ ವ್ಯಾಪ್ತಿಯ ಕಡಲ ತೀರದಲ್ಲಿ ರಸ್ತೆ ನಿರ್ಮಿಸಲು ಬಂದರು ನಿರ್ಮಾಣ ಕಂಪನಿಗೆ ಈವರೆಗೆ ಯಾವುದೇ ಪರವಾನಗಿ ಸಿಕ್ಕಿರುವುದಿಲ್ಲ. ವಿವಾದಿತ ವಾಣಿಜ್ಯ ಬಂದರು ವಿಚಾರದಲ್ಲಿ ಉಚ್ಚ ನ್ಯಾಯಾಲಯ ನೀಡಿರುವ ನಿರ್ದೇಶನದಂತೆ ಸ್ಥಳೀಯರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅಹವಾಲು ಸರ್ಕಾರದ ಮುಂದೆ ವಿಚಾರಣೆಗೆ ಬಾಕಿ ಇದೆ. ಹೀಗಿರುವಾಗ ವಾಣಿಜ್ಯ ಬಂದರು ನಿರ್ಮಾಣ ಕಂಪನಿಯವರ ಪ್ರಭಾವ ಮತ್ತು ಪ್ರಲೋಭನೆಗೆ ಒಳಗಾಗಿ ಗುತ್ತಿಗೆದಾರರು ಮತ್ತು ಕೆಲವು ಅಧಿಕಾರಿಗಳು ಸೇರಿ ಇಲ್ಲಿನ ಕಡಲತೀರದಲ್ಲಿ ಕಚ್ಚಾ ರಸ್ತೆ ಸುಧಾರಣೆ ಹೆಸರಿನಲ್ಲಿ ಉದ್ದೇಶಿತ ವಾಣಿಜ್ಯ ಬಂದರು ಯೋಜನಾ ಪ್ರದೇಶದವರೆಗೆ ಪಕ್ಕಾ ರಸ್ತೆ ನಿರ್ಮಿಸಲು ಹೊರಟಿರುವ ಕ್ರಮಕ್ಕೆ ಸ್ಥಳೀಯರ ತೀವ್ರ ವಿರೋಧವಿದ್ದು ಪ್ರತಿಭಟನೆ ನಡೆಸಲು ಸ್ಥಳೀಯ ಹೋರಾಟ ಸಮಿತಿ ಸನ್ನದ್ಧವಾಗಿದೆ ಎಂದರು.

ವಾಣಿಜ್ಯ ಬಂದರು ವಿರೋಧ ಹೋರಾಟ ಸಮಿತಿ ಅಧ್ಯಕ್ಷ ಆರ್‌.ಜಿ. ತಾಂಡೇಲ, ರಾಷ್ಟ್ರೀಯ ಮೀನುಗಾರರ ಸಂಘಟನೆ ರಾಜ್ಯ ಕಾರ್ಯದರ್ಶಿ ಚಂದ್ರಕಾಂತ ಕೊಚರೇಕರ, ಹಸಿಮೀನು ವ್ಯಾಪರಸ್ಥರ ಸಂಘದ ಅಧ್ಯಕ್ಷ ಗಣಪತಿ ಈಶ್ವರ ತಾಂಡೇಲ್‌, ಕಡಲ ವಿಜ್ಞಾನಿ ಡಾ| ಪ್ರಕಾಶ ಮೇಸ್ತ, ಮೀನುಗಾರರ ಕಾರ್ಮಿಕರ ಸಂಘದ ಕಾರ್ಯದರ್ಶಿ ಆರ್‌. ತಾಂಡೇಲ ಇದ್ದರು.

ಟಾಪ್ ನ್ಯೂಸ್

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.