ಬಡ ಕುಟುಂಬಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ


Team Udayavani, May 22, 2022, 3:49 PM IST

12poor

ಕುರುಗೋಡು: ಇಂದಿರಾ ನಗರದ ಮೂಲಕ ಹಾದು ಹೋಗಿರುವ ಹೆಚ್‌ಎಲ್‌ಸಿ ಉಪ-ಕಾಲುವೆ ಪಕ್ಕದ ಖಾಲಿ ಜಾಗದಲ್ಲಿ ವಾಸವಾಗಿರುವ ಬಡ ಕುಟುಂಬಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ, ನಂತರ ಜಾಗ ತೆರವುಗೊಳಿಸಲು ಅಧಿಕಾರಿಗಳು ಮುಂದಾಗಲಿ ಎಂದು ಮಾಜಿ ಶಾಸಕ ನಾರಾ ಸೂರ್ಯನಾರಾಯಣರೆಡ್ಡಿ ಆಗ್ರಹಿಸಿದರು.

ಇಂದಿರಾ ನಗರಕ್ಕೆ ಶನಿವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದರು. ಸರ್ವೇ ನಂ. 347 ಎ/2 ಸೇರಿದ ಹೆಚ್‌ಎಲ್‌ಸಿ ಉಪ-ಕಾಲುವೆ ಪಕ್ಕದ ಖಾಲಿ ಜಾಗದಲ್ಲಿ ವಾಸವಾಗಿರುವ 96 ಬಡಕುಟುಂಬಗಳು ಸುಮಾರು 30-40 ವರ್ಷಗಳಿಂದ ವಾಸವಾಗಿದ್ದಾರೆ. ಅವರಿಗೆ ಏಕಾಏಕಿ ನೀರಾವರಿ ಇಲಾಖೆ ಅಧಿ ಕಾರಿಗಳು ನ್ಯಾಯಾಲಯದ ನೋಟಿಸ್‌ ನೀಡಿ ಸ್ಥಳವನ್ನು ಖಾಲಿ ಮಾಡಿರಿ ಎಂದರೆ ಅವರ ಗತಿ ಏನು ಎಂದು ಪ್ರಶ್ನಿಸಿದರು.

ಒಂದು ವೇಳೆ ಬಡಕುಟುಂಬಗಳನ್ನು ತೆರವುಗೊಳಿಸುವುದಾದರೆ ಸರ್ಕಾರ ಅವರಿಗೆ ಸೂಕ್ತ ಪರ್ಯಾಯ ಸ್ಥಳ ನಿಗದಿಮಾಡಿ ತೆರವುಗೊಳಿಸಬೇಕೆಂದು ಹೇಳಿದರು.

ಸ್ಥಳ ತೆರವುಗೊಳಿಸಲು ನ್ಯಾಯಾಲಯ ನೀಡಿರುವ ನೋಟಿಸ್‌ಗೆ ವಿರುದ್ಧವಾಗಿ ಬಡ ಕುಟುಂಬಸ್ಥರ ಜತೆಗೂಡಿ ನ್ಯಾಯಾಲಯದ ಮೂಲಕ ನ್ಯಾಯಯುತವಾಗಿ ಹೋರಾಟ ನಡೆಸಿ, ಇಲ್ಲಿ ವಾಸಮಾಡುವ ನೂರಾರು ಮಂದಿ ಬಡಕುಟುಂಬಗಳಿಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.

ಬಡ ಕುಟುಂಬಗಳ ರಕ್ಷಣೆಯೇ ನನ್ನ ಗುರಿಯೇ ಹೊರತು ಬಡವರ ವಿಚಾರದಲ್ಲಿ ರಾಜಕೀಯ ಮಾಡಲ್ಲ. ಇಷ್ಟು ದೊಡ್ಡ ಸಮಸ್ಯೆ ಇದ್ದರು ಜನರಿಂದ ಓಟು ಹಾಕಿಸಿಕೊಂಡು ಅಧಿಕಾರ ನಡೆಸಿದ ಹಾಲಿ ಹಾಗೂ ಮಾಜಿ ಜನಪ್ರತಿನಿಧಿಗಳು ಏನು ಮಾಡುತ್ತಿದ್ದಾರೆ. ಬಡವರ ಓಟು ಮಾತ್ರ ಬೇಕು ಅವರ ಕಷ್ಟಗಳಿಗೆ ಸ್ಪಂದಿಸುವುದಿಲ್ಲ ಎಂಬುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಎಎಸ್‌ಡಿಎಂಸಿ ಅಧ್ಯಕ್ಷ ತಳವಾರು ನಾಗರಾಜ, ಎ.ಮಲ್ಲಿಕಾರ್ಜುನ, ಸೋಡ ಬಸಪ್ಪ, ಕೆ.ಮಲ್ಲಿಕಾರ್ಜುನ ಮಾತನಾಡಿ, ಹೆಚ್‌ಎಲ್‌ಸಿ ಉಪಕಾಲುವೆಗೆ ನೀರೇ ಬರುತ್ತಿಲ್ಲ. ಕಾಲುವೆ ಮೇಲ್ಭಾಗದಲ್ಲಿ ಅಧಿಕಾರಿಗಳೇ ಬಂದ್‌ ಮಾಡಿದ್ದಾರೆ ಎಂದು ಹೇಳಿದರು.

ವಾಸವಾಗಿರುವ ಒಟ್ಟು 96 ಬಡಕುಟುಂಬಗಳ ಪೈಕಿ 86 ಬಟಕುಟುಂಬಗಳಿಗೆ ಅಧಿಕಾರಿಗಳು ತೆರವುಗೊಳಿಸಲು ನೋಟಿಸ್‌ ನೀಡಿದ್ದಾರೆ. ಮಾತ್ರವಲ್ಲದೆ ಕ್ಷೇತ್ರದ ಜನಪ್ರತಿನಿಧಿಗಳು, ವಾರ್ಡ್‌ ಸದಸ್ಯರು ಯಾರು ಬಡಕುಟುಂಬಗಳ ಕಷ್ಟಕಾಲಕ್ಕೆ ಸಹಾಯಮಾಡಲು ಬಂದಿಲ್ಲ ಎಂದು ಆರೋಪಿಸಿದರು. ಪ್ರಮುಖರಾದ ಡಿ. ನಾಗೇಶ್ವರರಾವ್‌, ಮುಷ್ಟಗಟ್ಟೆ ಹನುಮಂತಪ್ಪ, ಕೊಟ್ಟಾಲ್‌ ರಾಘವೇಂದ್ರ, ಕ್ಯಾದಿಗೆಹಾಳು ಶೇಖರ್‌ ಇತರರಿದ್ದರು.

ಟಾಪ್ ನ್ಯೂಸ್

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1——dsadsa

Madikeri; ಮೊಬೈಲ್ ನಿಂದ ಬಡಿದು ಅತ್ತೆ ಹತ್ಯೆಗೈದು ಕಥೆ ಕಟ್ಟಿದ ಸೊಸೆ!

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.