ಪಠ್ಯದಿಂದ ಭಗತ್‌ ಸಿಂಗ್‌ ಪಾಠ ಕೈಬಿಟ್ಟಿದಕ್ಕೆ ಆಕ್ರೋಶ

ರಾಜ್ಯ ಸರ್ಕಾರ ಪಠ್ಯಪುಸ್ತಕಗಳ ಕೇಸರೀಕರಣಕ್ಕೆ ಮುಂದಾಗಿದ್ದು ಸರಿಯಲ್ಲ: ಅನಂತರಾಜ

Team Udayavani, May 25, 2022, 3:21 PM IST

jagaluru

ಜಗಳೂರು: ಪಠ್ಯಪುಸ್ತಕಗಳಲ್ಲಿ ಭಗತ್‌ ಸಿಂಗ್‌, ನಾರಾಯಣಗುರು, ಪೆರಿಯಾರ್‌ ಹಾಗೂ ಪ್ರಗತಿಪರ ಪಠ್ಯ ಕೈಬಿಟ್ಟು ಆರ್‌ಎಸ್‌ಎಸ್‌ ಸಂಸ್ಥಾಪಕ ಹೆಡಗೇವಾರ್‌ ಭಾಷಣ ಹಾಗೂ ಕೋಮುವಾದಿ ಅಂಶಗಳನ್ನು ಸೇರ್ಪಡೆ ಮಾಡಲಾಗಿದೆ ಎಂದು ಆರೋಪಿಸಿ ಎಸ್‌ಎಫ್‌ಐ ತಾಲೂಕು ಘಟಕದ ವತಿಯಿಂದ ಮಂಗಳವಾರ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.

ಪಟ್ಟಣದ ತಾಲೂಕು ಕಚೇರಿಯಲ್ಲಿ ಮನವಿ ಸಲ್ಲಿಸಿದ ನಂತರ ಮಾತನಾಡಿದ ಎಸ್‌ಎಫ್‌ಐ ಜಿಲ್ಲಾ ಸಂಚಾಲಕ ಹಾಗೂ ರಾಜ್ಯ ಸಮಿತಿ ಸದಸ್ಯ ಅನಂತರಾಜ ಮಾತನಾಡಿ, ರಾಜ್ಯ ಬಿಜೆಪಿ ಸರ್ಕಾರ ನೂತನ ಶಿಕ್ಷಣ ನೀತಿಯ ಜಾರಿಗೆ ಮುಂದಾಗಿದ್ದು ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ರಚಿಸಿದೆ. ಈ ಸಮಿತಿ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ಆರ್‌ಎಸ್‌ಎಸ್‌ ಹಿನ್ನೆಲೆಯುಳ್ಳವರು. ಇದರ ಪರಿಣಾಮವಾಗಿ ಈ ಸಮಿತಿ ಶಿಫಾರಸು ಮಾಡಿರುವ ಪಠ್ಯಕ್ರಮದಲ್ಲಿ ಈ ಮೊದಲಿದ್ದ ಹತ್ತನೇ ತರಗತಿ ಕನ್ನಡ ಪಠ್ಯಪುಸ್ತಕದಲ್ಲಿ ಸ್ವಾತಂತ್ರ್ಯ ಹೋರಾಟಗಾರ, ದೇಶಪ್ರೇಮಿ ಭಗತ್‌ ಸಿಂಗ್‌ ಮತ್ತು ಸಮಾಜ ವಿಜ್ಞಾನದಲ್ಲಿ ಸಾಮಾಜಿಕ ಸುಧಾರಕ ಶ್ರೀ ನಾರಾಯಣಗುರು, ಪೆರಿಯಾರ್‌ ರವರ ಕುರಿತ ಪಾಠ ಹಾಗೂ ವಿದ್ಯಾರ್ಥಿಗಳಲ್ಲಿ ಪ್ರಗತಿಪರ, ವೈಚಾರಿಕತೆ, ಜಾತ್ಯತೀತ ಮೌಲ್ಯಗಳನ್ನು ಬೆಳೆಸಲು ಪೂರಕವಾಗಿದ್ದ ಅನೇಕ ಪಾಠಗಳನ್ನು ಕೈ ಬಿಡಲಾಗಿದೆ. ಬದಲಿಗೆ ಸಂಘ ಪರಿವಾರದ ಸಂಸ್ಥಾಪಕ ಹೆಡಗೇವಾರ್‌ ಭಾಷಣ ಹಾಗೂ ಮತಾಂಧತೆ, ಮೌಡ್ಯ, ಲಿಂಗ ತಾರತಮ್ಯ ಬಿತ್ತುವ ಪಠ್ಯಗಳನ್ನು ಸೇರ್ಪಡೆ ಮಾಡಲಾಗಿದೆ. ನಾಡಿನ ಮಕ್ಕಳು ಓದುವ ಪಠ್ಯಪುಸ್ತಕಗಳ ಕೇಸರೀಕರಣಕ್ಕೆ ಮುಂದಾಗಿರುವುದನ್ನು ಭಾರತ ವಿದ್ಯಾರ್ಥಿ ಫೆಡರೇಷನ್‌ ತಾಲೂಕು ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದರು.

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಆಂಜಿನಪ್ಪ ಸೇರಿದಂತೆ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.