ಹಣಕ್ಕಾಗಿ ಅಂಗಡಿ ಮಾಲೀಕನ ಕೊಂದ ನೌಕರ

ಚಿಕ್ಕಪೇಟೆಯ ಎಲೆಕ್ಟ್ರಿಕಲ್‌ ಶಾಪ್‌ನಲ್ಲಿ ಕೆಲಸಕ್ಕಿದ್ದ ಆರೋಪಿ

Team Udayavani, May 26, 2022, 3:09 PM IST

14murder

ಬೆಂಗಳೂರು: ಕೆಲಸ ಮಾಡುತ್ತಿದ್ದ ಎಲೆಕ್ಟ್ರಿಕಲ್‌ ಮಳಿಗೆಯ ಮಾಲೀಕರನ್ನು ನೌಕರನೇ ಬರ್ಬರವಾಗಿ ಕೊಂದು ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಚಾಮರಾಜಪೇಟೆ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.

ಚಾಮರಾಜಪೇಟೆ ನಿವಾಸಿ ಜುಗ್‌ರಾಜ್‌ ಜೈನ್‌ (74) ಕೊಲೆಯಾದ ಮಾಲೀಕ. ಕೃತ್ಯ ಎಸಗಿದ ಬಿಜಾರಾಮ್‌ ಎಂಬಾತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಕೃತ್ಯ ಸಂಬಂಧ ಜುಗ್‌ರಾಜ್‌ ಜೈನ್‌ ಪುತ್ರ ಪ್ರಕಾಶ್‌ ಚಂದ್‌ ಕೊಲೆ ಪ್ರಕರಣ ದಾಖಲಿಸಿದ್ದಾರೆ.

ಜುಗ್‌ರಾಜ್‌ ಜೈನ್‌ ಚಿಕ್ಕ ಪೇಟೆಯ ಎಸ್‌ವಿಲೇನ್‌ಲ್ಲಿ ದೀಪಂ ಎಲೆಕ್ಟ್ರಿಕಲ್ಸ್‌ ಅಂಗಡಿ ಇಟ್ಟುಕೊಂಡಿದ್ದಾರೆ. 2ನೇ ಪುತ್ರ ಆನಂದ್‌ ಕುಮಾರ್‌, ಸೊಸೆ ಉಷಾರಾಣಿ, ಮೊಮ್ಮಕ್ಕಳ ಜತೆ ಚಾಮರಾಜಪೇಟೆಯಲ್ಲಿರುವ ಕಿಂಗ್ಸ್‌ ಎನ್‌ಕ್ಲೇವ್‌ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದರು. ಜುಗ್‌ರಾಜ್‌ ಅಂಗಡಿ ಮತ್ತು ಮನೆ ಕೆಲಸಕ್ಕೆಂದು ಆರು ತಿಂಗಳ ಹಿಂದೆ ರಾಜಸ್ಥಾನದಿಂದ ಬಿಜರಾಮ್‌ನನ್ನು ಕರೆತಂದಿದ್ದರು. ಹೀಗಾಗಿ ಜುಗ್‌ರಾಜ್‌ ಮನೆಯಲ್ಲಿ ಆರೋಪಿ ವಾಸವಾಗಿದ್ದ.

ಸೋಮವಾರ ಆನಂದ್‌ಕುಮಾರ್‌ ವ್ಯವಹಾರ ಸಂಬಂಧ ಗೋವಾಕ್ಕೆ ತೆರಳಿದ್ದು, ಸೊಸೆ ಶಿಕಾರಿಪುರದಲ್ಲಿರುವ ತಂದೆಯ ಮನೆಗೆ ಮಕ್ಕಳ ಜತೆ ಹೋಗಿದ್ದರು. ಇದೇ ಅವಕಾಶಕ್ಕಾಗಿ ಕಾಯುತ್ತಿದ್ದ ಆರೋಪಿ ಮಂಗಳವಾರ ರಾತ್ರಿ ಅಂಗಡಿಯ ವ್ಯಾಪಾರ ಮುಗಿಸಿ, ಜುಗ್‌ ರಾಜ್‌ರನ್ನು ಮನೆಗೆ ಕರೆತಂದಿದ್ದಾನೆ. ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಇರುವ ಬಗ್ಗೆ ತಿಳಿದುಕೊಂಡಿದ್ದ ಆತ, ತಡರಾತ್ರಿ ಜುಗ್‌ ರಾಜ್‌ ಶೌಚಾಲಯಕ್ಕೆ ಹೋದಾಗ ಅವರ ಬಾಯಿಗೆ ಬಟ್ಟೆ ತುರಕಿ, ಕೈ-ಕಾಲು ಕಟ್ಟಿ ಕುತ್ತಿಗೆಗೆ ಪ್ಲಾಸ್ಟಿಕ್‌ ದಾರದಿಂದ ಬಿಗಿದು ಕೊಲೆಗೈದಿದ್ದಾನೆ. ಬಳಿಕ ಬೆಡ್‌ರೂಮ್‌ ನ ಲಾಕರ್‌ನಲ್ಲಿದ್ದ ಚಿನ್ನಾಭರಣ, ಬೆಳ್ಳಿ ವಸ್ತುಗಳು, ನಗದು ದೋಚಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದರು.‌

ಇದನ್ನೂ ಓದಿ:ಕೆರೆಗಳಲ್ಲಿ ಸಿಸಿ ಕ್ಯಾಮೆರಾ ಕಣ್ಗಾವಲು: ಕೆರೆ ಪರಿಸರ ಸಂರಕ್ಷಣೆಗೆ 5 ಕೋಟಿ ರೂ ವೆಚ್ಚದ ಯೋಜನೆ

ಮೊಮ್ಮಗ ಮನೆಗೆ ಬಂದಾಗ ಕೃತ್ಯ ಬಯಲು

ಬುಧವಾರ ಬೆಳಗ್ಗೆ ಮೊದಲ ಪುತ್ರ ಆನಂದ್‌ಕುಮಾರ್‌ ತಂದೆಗೆ ಕರೆ ಮಾಡಿದಾಗ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ನಂತರ ಅಕ್ಕನ ಮಗ ಪ್ರತೀಕ್‌ಗೆ ಫೋನ್‌ ಮಾಡಿ ಮನೆ ಬಳಿ ಹೋಗುವಂತೆ ಸೂಚಿಸಿದ್ದಾರೆ. ಆತ ಮನೆಗೆ ಬಂದು ಬಾಗಿಲು ಬಡಿದರೂ ಪ್ರತಿಕ್ರಿಯೆ ಬಂದಿಲ್ಲ. ನಂತರ ಸ್ಥಳಕ್ಕೆ ಬಂದ ಆನಂದ್‌ಕುಮಾರ್‌ ಹಾಗೂ ಇತರರು ನಕಲಿ ಕೀ ತಯಾರಕನನ್ನು ಕರೆತಂದು ಬಾಗಿಲು ತೆರೆದು ಎಲ್ಲೆಡೆ ಹುಡುಕಾಡಿ, ಬೆಡ್‌ರೂಮ್‌ನ ಶೌಚಾಲಯದಲ್ಲಿ ನೋಡಿದಾಗ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಬಳಿಕ ಆರೋಪಿ ಬಿಜಾರಾಮ್‌ಗೆ ಕರೆ ಮಾಡಿದಾಗ ಫೋನ್‌ ಸ್ವಿಚ್ಚ್ ಆಫ್ ಆಗಿತ್ತು. ಹೀಗಾಗಿ ಆರೋಪಿಯ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು. ಚಾಮರಾಜಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.