ಮೈಸೂರಿನಲ್ಲಿ ಯೋಗ ದಿನಾಚರಣೆ : ಪ್ರಧಾನಿಯೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಸಿಎಂ ಭಾಗಿ
Team Udayavani, May 30, 2022, 1:04 PM IST
ಬೆಂಗಳೂರು : ಈ ಬಾರಿ ಮೈಸೂರಿನಲ್ಲಿ ನಡೆಯುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿರುವ ಹಿನ್ನೆಲೆಯಲ್ಲಿ, ಕಾರ್ಯಕ್ರಮದ ಪೂರ್ವ ಸಿದ್ಧತೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಸೋಮವಾರ ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿಯಾದರು.
ಜೂನ್ 21 ರಂದು ಮೈಸೂರಿನ ಅರಮನೆ ಮೈದಾನದಲ್ಲಿ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದೆ.
ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಿಂದ ಸಿಎಂ ಬಸವರಾಜ ಬೊಮ್ಮಾಯಿ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗಿಯಾಗಿ, ಮೈಸೂರಿನಲ್ಲಿ ಯೋಗ ದಿನಾಚರಣೆ ಗೆ ಮಾಡಲಾಗಿರುವ ವ್ಯವಸ್ಥೆಯನ್ನು ಪ್ರಧಾನಿಗಳಿಗೆ ವಿವರಿಸಿದರು.