ಇಂದಿನಿಂದ ಲಾರ್ಡ್ಸ್‌ ಟೆಸ್ಟ್‌: ತಂಡಕ್ಕೆ ಮರಳಿದ ಬ್ರಾಡ್‌, ಆ್ಯಂಡರ್ಸನ್‌


Team Udayavani, Jun 2, 2022, 6:25 AM IST

ಇಂದಿನಿಂದ ಲಾರ್ಡ್ಸ್‌ ಟೆಸ್ಟ್‌: ತಂಡಕ್ಕೆ ಮರಳಿದ ಬ್ರಾಡ್‌, ಆ್ಯಂಡರ್ಸನ್‌

ಲಂಡನ್‌: ನೂತನ ನಾಯಕ ಬೆನ್‌ ಸ್ಟೋಕ್ಸ್‌ ಮತ್ತು ನೂತನ ಕೋಚ್‌ ಬ್ರೆಂಡನ್‌ ಮೆಕಲಮ್‌ ಮಾರ್ಗದರ್ಶನದಲ್ಲಿ ಕಣಕ್ಕಿಳಿಯಲಿರುವ ಆತಿಥೇಯ ಇಂಗ್ಲೆಂಡ್‌ ತಂಡ ಲಾರ್ಡ್ಸ್‌ ಟೆಸ್ಟ್‌ ಪಂದ್ಯಕ್ಕೆ ಅಣಿಯಾಗಿದೆ.

ಪ್ರವಾಸಿ ನ್ಯೂಜಿಲ್ಯಾಂಡ್‌ ಎದುರಿನ ಪ್ರಥಮ ಟೆಸ್ಟ್‌ ಪಂದ್ಯ ಗುರುವಾರ ಇಲ್ಲಿ ಆರಂಭವಾಗಲಿದೆ.

ಅನುಭವಿ ವೇಗಿಗಳಾದ ಸ್ಟುವರ್ಟ್‌ ಬ್ರಾಡ್‌ ಮತ್ತು ಜೇಮ್ಸ್‌ ಆ್ಯಂಡರ್ಸನ್‌ ಅವರನ್ನು ಇಂಗ್ಲೆಂಡಿನ ಆಡುವ ಬಳಗಕ್ಕೆ ಸೇರಿಸಿಕೊಳ್ಳಲಾಗಿದೆ. ಇವರೊಂದಿಗೆ ಸೀಮ್‌ ಬೌಲರ್‌ ಮ್ಯಾಥ್ಯೂ ಪಾಟ್ಸ್‌ ಅವರಿಗೆ ಅವಕಾಶ ಸಿಕ್ಕಿದೆ. ಪಾಟ್ಸ್‌ ಆಡುತ್ತಿರುವ ಮೊದಲ ಟೆಸ್ಟ್‌ ಇದಾಗಿದೆ. ಇವರು ಇಂಗ್ಲೆಂಡಿನ 704ನೇ ಟೆಸ್ಟ್‌ ಆಟಗಾರನಾಗಲಿದ್ದಾರೆ.

ಜೂ. 2-27ರ ಅವಧಿಯಲ್ಲಿ ಇಂಗ್ಲೆಂಡ್‌-ನ್ಯೂಜಿಲ್ಯಾಂಡ್‌ ನಡುವೆ 3 ಪಂದ್ಯಗಳ ಟೆಸ್ಟ್‌ ಸರಣಿ ನಡೆಯಲಿದೆ. ಉಳಿದೆರಡು ಪಂದ್ಯಗಳ ತಾಣ ಟ್ರೆಂಟ್‌ಬ್ರಿಜ್‌ ಮತ್ತು ಹೇಡಿಂಗ್ಲೆ.

ಈ ವರ್ಷದ ಆರಂಭದಲ್ಲಿ ಇಂಗ್ಲೆಂಡ್‌ ತಂಡ ವೆಸ್ಟ್‌ ಇಂಡೀಸ್‌ಗೆ ಪ್ರವಾಸಗೈದಾಗ ಆ್ಯಂಡರ್ಸನ್‌ ಮತ್ತು ಬ್ರಾಡ್‌ ಅವರನ್ನು ಕೈಬಿಡಲಾಗಿತ್ತು. ಇದಕ್ಕೂ ಮುನ್ನ ಆಸ್ಟ್ರೇಲಿಯದಲ್ಲಿ ಆಡಲಾದ ಆ್ಯಶಸ್‌ ಸರಣಿಯಲ್ಲಿ ಇಂಗ್ಲೆಂಡ್‌ 0-4 ಆಘಾತಕ್ಕೊಳಗಾಗಿತ್ತು.

ಇಂಗ್ಲೆಂಡ್‌ ಆಡುವ ಬಳಗ: ಜಾಕ್‌ ಕ್ರಾಲಿ, ಅಲೆಕ್ಸ್‌ ಲೀಸ್‌, ಓಲೀ ಪೋಪ್‌, ಜೋ ರೂಟ್‌, ಜಾನಿ ಬೇರ್‌ಸ್ಟೊ, ಬೆನ್‌ ಸ್ಟೋಕ್ಸ್‌ (ನಾಯಕ), ಬೆನ್‌ ಫೋಕ್ಸ್‌ (ವಿ.ಕೀ.), ಮ್ಯಾಥ್ಯೂ ಪಾಟ್ಸ್‌, ಜಾಕ್‌ ಲೀಚ್‌, ಸ್ಟುವರ್ಟ್‌ ಬ್ರಾಡ್‌, ಜೇಮ್ಸ್‌ ಆ್ಯಂಡರ್ಸನ್‌.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

Sandeep Lamichhane: ಅತ್ಯಾಚಾರ ಆರೋಪ; ಲಮಿಚಾನೆ ಮುಕ್ತ

Sandeep Lamichhane: ಅತ್ಯಾಚಾರ ಆರೋಪ; ಲಮಿಚಾನೆ ಮುಕ್ತ

31

Italian Open 2024: ಬೋಪಣ್ಣ ಜೋಡಿಗೆ ಸೋಲು

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.