ಬೆಲವಂತರದಲ್ಲಿ ಬೀಜದುಂಡೆ ತಯಾರಿಕೆ

ಪ್ರಸ್ತುತ ವರ್ಷದಲ್ಲಿ ಇಲಾಖೆಯು ಬೀಜ ಬಿತ್ತೋಣ ಪರಿಸರ ಬೆಳೆಸೋಣ

Team Udayavani, Jun 8, 2022, 6:05 PM IST

ಬೆಲವಂತರದಲ್ಲಿ ಬೀಜದುಂಡೆ ತಯಾರಿಕೆ

ಕಲಘಟಗಿ: ಪರಿಸರದ ಸಮತೋಲನ ಕಾಪಾಡುವಲ್ಲಿ ಅರಣ್ಯಗಳ ಪಾತ್ರ ಅನನ್ಯವಾಗಿದೆ. ಸಮೃದ್ಧ ಅರಣ್ಯಗಳನ್ನು ಬೆಳೆಸಿ ಸಂರಕ್ಷಿಸುವುದು ವಿದ್ಯಾರ್ಥಿಗಳು ಹಾಗೂ ಇಂದಿನ ಪೀಳಿಗೆಯ ಆದ್ಯ ಕರ್ತವ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಬಸಾಪುರ ಹೇಳಿದರು.

ಬೆಲವಂತರದ ಸರಕಾರಿ ಪ್ರೌಢಶಾಲೆ, ಅರಣ್ಯ ಇಲಾಖೆ ಹಾಗೂ ಸಹ್ಯಾದ್ರಿ ಇಕೋ ಕ್ಲಬ್‌ ಸಹಯೋಗದೊಂದಿಗೆ ಶಾಲಾವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಆಯೋಜಿಸಲಾಗಿದ್ದ ಬೀಜದುಂಡೆ ತಯಾರಿಕಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅರಣ್ಯಗಳು ಮಾನವನ ಎಲ್ಲ ಅಗತ್ಯತೆಗಳನ್ನು ಪೂರೈಸುತ್ತ ವಾತಾವರಣದ ಸಮತೋಲನ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಮಾನವನ ದುರುದ್ದೇಶ, ಹಸ್ತಕ್ಷೇಪದಿಂದ ಅರಣ್ಯ ನಾಶವಾಗುತ್ತಿದ್ದು, ಭವಿಷ್ಯದಲ್ಲಿ ಇದರ ಪರಿಣಾಮ ಅಪಾಯಕಾರಿಯಾಗಲಿದೆ. ವಿದ್ಯಾರ್ಥಿಗಳೆಲ್ಲರೂ ಸ್ವಯಂ ಪ್ರೇರಣೆಯಿಂದ ವರ್ಷಕ್ಕೊಂದರಂತೆ ಸಸಿಯನ್ನು ನೆಟ್ಟು ಬೆಳೆಸಿ ಪರಿಸರವನ್ನು ಉಳಿಸಬೇಕೆಂದರು.

ಉಪವಲಯಾರಣ್ಯಾಧಿಕಾರಿ ಎಂ.ವೈ. ಚಲವಾದಿ ಮಾತನಾಡಿ, ಪ್ರಸ್ತುತ ವರ್ಷದಲ್ಲಿ ಇಲಾಖೆಯು ಬೀಜ ಬಿತ್ತೋಣ ಪರಿಸರ ಬೆಳೆಸೋಣ ಎಂಬ ಶೀರ್ಷಿಕೆಯಡಿ ಬಿತ್ತೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದೆ. ಬೀಜದುಂಡೆಗಳನ್ನು ನಿರ್ಮಿಸುವಾಗ ಬೀಜಗಳ ಬೆಳವಣಿಗೆಗೆ ಅವಶ್ಯಕ ಪೋಷಕಾಂಶಗಳನ್ನು ಮಣ್ಣಿನಲ್ಲಿ ಬೆರೆಸಿರುವುದರಿಂದ ಸಸಿಗಳು ಹೆಚ್ಚು ಪರಿಣಾಮಕಾರಿಯಾಗಿ ಬೆಳೆದು ಬರಲಿವೆ. ಬೆಲವಂತರ ಪ್ರೌಢಶಾಲಾ ಮಕ್ಕಳು ಸಹ್ಯಾದ್ರಿ ಇಕೋ ಕ್ಲಬ್‌ ಸಹಕಾರದಿಂದ ಇಲಾಖೆಯೊಂದಿಗೆ ಬೀಜದುಂಡೆ ತಯಾರಿಸಲು ಆಸಕ್ತಿ ವಹಿಸಿ ಕೈಜೋಡಿಸಿರುವುದು ಶ್ಲಾಘನೀಯ ಎಂದು ಹೇಳಿದರು.

ಹಲಸು, ಹೊಂಗೆ, ನೇರಳೆ, ಮತ್ತಿ ಸೇರಿದಂತೆ ಮುಂತಾದ ಬೀಜಗಳನ್ನು ಬಳಸಿ ಸುಮಾರು 2 ಸಾವಿರ ಬೀಜದುಂಡೆಗಳನ್ನು ವಿದ್ಯಾರ್ಥಿಗಳು ತಯಾರಿಸಿದರು. ತಾಲೂಕು ಶಿಕ್ಷಣ ಸಂಯೋಜಕ ಪುಟ್ಟಪ್ಪ ಭಜಂತ್ರಿ, ವೈ.ಜಿ. ಭಗವತಿ, ಅರಣ್ಯ ರಕ್ಷಕ ಉಮೇಶ ಕಡಿ, ಬಿಆರ್‌ಪಿಗಳಾದ ಸುಜಾತಾ ಚವ್ಹಾಣ, ಎನ್‌.ಎ. ದೇವಿಹೊಸೂರ, ಎಸ್‌ ವಿವೈಎಂನ ಕಾರ್ಯಕ್ರಮ ವ್ಯವಸ್ಥಾಪಕ ಸಂತೋಷ ಶಿಶುವಿನಹಾಳ, ಎಸ್‌ ಡಿಎಂಸಿ ಉಪಾಧ್ಯಕ್ಷ ಶಂಕ್ರಪ್ಪ ಕರ್ಲಟ್ಟಿ, ಸದಸ್ಯರಾದ ಶಿವಪುತ್ರಪ್ಪ ಅಸುಂಡಿ, ಸಂಗಪ್ಪ ಸುರಶೆಟ್ಟಿ ಸೇರಿದಂತೆ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.