ಪಿಲಾರು: ಅರಣ್ಯ ಇಲಾಖೆಯಿಂದ ಬೀಜದುಂಡೆ ಬಿತ್ತನೆ ಅಭಿಯಾನ

Team Udayavani, Jun 11, 2022, 11:27 AM IST

6forest

ಶಿರ್ವ: ಕರ್ನಾಟಕ ಅರಣ್ಯ ಇಲಾಖೆ, ಕುಂದಾಪುರ ವಿಭಾಗ, ಉಡುಪಿ ವಲಯದ ಹಸಿರು ಕರ್ನಾಟಕ ಅಭಿಯಾನದಡಿ ನೀರಿಗಾಗಿ ಅರಣ್ಯ ಯೋಜನೆ ಕಾರ್ಯಕ್ರಮದನ್ವಯ, ಗ್ರಾಮ ಅರಣ್ಯ ಸಮಿತಿ ಪಿಲಾರು-ಶಿರ್ವ ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಪಿಲಾರು ಕಾನ ಶ್ರೀ ಮಹಾಲಿಂಗೇಶ್ವರ ದೇವರ ಸುರಕ್ಷಿತ ಅರಣ್ಯದಲ್ಲಿ ವನಮಹೋತ್ಸವ ಮತ್ತು ಬೀಜದುಂಡೆ ಬಿತ್ತನೆ ಅಭಿಯಾನ ಕಾರ್ಯಕ್ರಮಕ್ಕೆ ಜೂ. 10 ರಂದು ಚಾಲನೆ ನೀಡಲಾಯಿತು.

ಶಿರ್ವ ಹಿಂದೂ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕವೃಂದ ಭಾಗವಹಿಸಿ ಕಾಡಿನಲ್ಲಿ ವನಮಹೋತ್ಸವ ಮತ್ತು ಬೀಜಡುಂಡೆ ಬಿತ್ತನೆ ಕಾರ್ಯ ನೆರವೇರಿಸಿದರು.

ಅರಣ್ಯ ಇಲಾಖೆಯ ಉಡುಪಿ ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ಆಚಾರ್ಯ ವಿದ್ಯಾಥಿಗಳಿಗೆ ಪರಿಸರ ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಿ ಸುಮಾರು 350 ಎಕ್ರೆ ವಿಸ್ತೀರ್ಣವಿರುವ ದೇವರ ಕಾಡು ಎಂದು ಪ್ರಸಿದ್ಧಿ ಪಡೆದ ಪಿಲಾರುಕಾನ ಅರಣ್ಯ ಪ್ರದೇಶದ‌ ನಡುವೆ ಹಣ್ಣಿನ ಮರಗಿಡಗಳನ್ನು ಬೆಳೆಸುವುದರಿಂದ ಪ್ರಾಣಿ ಪಕ್ಷಿಗಳಿಗೆ ಆಹಾರಕ್ಕಾಗಿ ಉಪಯೋಗವಾಗುವುದಲ್ಲದೆ, ಕಾಡು ಪ್ರಾಣಿಗಳಿಂದ ಗ್ರಾಮಸ್ಥರಿಗೆ ಆಗುವ ಉಪಟಳಕ್ಕೆ ಕಡಿವಾಣ ಹಾಕಿದಂತಾಗುತ್ತದೆ . ಸಾರ್ವಜನಿಕರು ಪರಿಸರವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಹೇಳಿದರು.

ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ವಿ.ಆಶಿಷ್‌ ರೆಡ್ಡಿ, ಉಡುಪಿ ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ಆಚಾರ್ಯ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕ್ಲಿಫರ್ಡ್‌ ಲೋಬೋ ಅವರ ಮಾರ್ಗದರ್ಶನದಲ್ಲಿ ಜೀವನ್‌ದಾಸ್‌ ಶೆಟ್ಟಿ ನೇತೃತ್ವದಲ್ಲಿ ಅರಣ್ಯ ಇಲಾಖೆ ಬೀಜದುಂಡೆ ಬಿತ್ತನೆ ಅಭಿಯಾನ ಹಮ್ಮಿಕೊಂಡಿತ್ತು.

ಕಾರ್ಯಕ್ರಮದಲ್ಲಿ ಪಿಲಾರುಕಾನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ಶ್ರೀನಿವಾಸ ಭಟ್‌, ಶಿರ್ವದ ಉದ್ಯಮಿಗಳಾದ ರತನ್‌ ಶೆಟ್ಟಿ, ಉಸ್ಮಾನ್‌ ಇಬ್ಯಾಹಿಂ, ಗ್ರಾಮ ಅರಣ್ಯ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು, ಅರಣ್ಯ ರಕ್ಷಕರಾದ ಚರಣ್‌ ಜೋಗಿ ಅಭಿಲಾಷ್‌, ಮಂಜುನಾಥ, ಗ್ರಾಮಸ್ಥರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳ ಸಹಕಾರದೊಂದಿಗೆ ಪಿಲಾರು ಮಹಾಲಿಂಗೇಶ್ವರ ದೇವರ ಕಾಡಿನಲ್ಲಿ ಮುರಿಯ, ಹಲಸು, ಬನ್ನೇರಳೆ, ಮಾವಿನ ಗಿಡಗಳನ್ನು ನೆಡಲಾಯಿತು. ಹಲಸು ಮತ್ತು ಮಾವಿನ ಸುಮಾರು 500 ಬೀಜದುಂಡೆಗಳನ್ನು ಕಾಡಿನಲ್ಲಿ ಬಿತ್ತನೆ ಮಾಡಲಾಯಿತು. ಪಡುಬಿದ್ರಿ ಉಪವಲಯ ಅರಣ್ಯಾಧಿಕಾರಿ ಜೀವನ್‌ದಾಸ್‌ ಶೆಟ್ಟಿ ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

1-wwwewqwq

Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.