ಒಎಲ್‌ಎಕ್ಸ್‌ ನಲ್ಲಿ ಹಾಕಿದ ವಾಹನ ಕದಿಯುತ್ತಿದ್ದ ಭೂಪ

ಮಾಲೀಕರನ್ನು ಯಾಮಾರಿಸಿ ವಾಹನ ಸಮೇತ ಪರಾರಿ

Team Udayavani, Jun 17, 2022, 9:53 AM IST

1arrest

ಬೆಂಗಳೂರು: ಒಎಲ್‌ಎಕ್ಸ್‌ ಆ್ಯಪ್‌ನಲ್ಲಿ ಜಾಹೀರಾತು ನೀಡುವ ವಾಹನ ಮಾಲೀಕರನ್ನು ವಂಚಿಸಿ ವಾಹನ ಸಮೇತ ಪರಾರಿಯಾಗುತ್ತಿದ್ದ ಆರೋಪಿಯೊಬ್ಬ ವಿದ್ಯಾರಣ್ಯ ಪುರ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಕನಕಪುರ ತಾಲೂಕಿನ ಮಂಜುನಾಥ್‌ ಅಲಿಯಾಸ್‌ ಒಎಲ್‌ಎಕ್ಸ್‌ ಮಂಜ (30) ಬಂಧಿತ. ಆರೋಪಿಯಿಂದ 3 ಕಾರುಗಳು, 1 ಬೈಕ್‌, 5 ಮೊಬೈಲ್‌ಗಳು, ನಕಲಿ ನಂಬರ್‌ ಪ್ಲೇಟ್‌ಗಳನ್ನು ಜಪ್ತಿ ಮಾಡಲಾಗಿದೆ.

ಇತ್ತೀಚೆಗೆ ವಿದ್ಯಾರಣ್ಯಪುರ ನಿವಾಸಿ ಆದರ್ಶ್‌ ಎಂಬವರು ಒಎಲ್‌ಎಕ್ಸ್‌ನಲ್ಲಿ ಬೈಕ್‌ ಮಾರಾಟದ ಬಗ್ಗೆ ಜಾಹೀರಾತು ನೀಡಿದ್ದರು. ಅದನ್ನು ಗಮನಿಸಿದ ಆರೋಪಿ, ಮಾಲೀಕರನ್ನು ಸಂಪರ್ಕಿಸಿ ಟೆಸ್ಟ್‌ ಡ್ರೈವ್‌ಗೆಂದು ಕೊಂಡೊಯ್ದು ಪರಾರಿಯಾಗಿದ್ದಾನೆ. ಈ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ವಂಚನೆ ಹೇಗೆ?: ಅಪಾರ್ಟ್‌ಮೆಂಟ್‌ಗಳ ಹಾಗೂ ಇತರೆಡೆ ಭದ್ರತಾ ಸಿಬ್ಬಂದಿ, ನಿರುದ್ಯೋಗಿಗಳನ್ನು ಸಂಪರ್ಕಿಸಿ ಕೆಲಸ ಕೊಡಿಸುತ್ತೇನೆ ಎಂದು ನಂಬಿಸಿ, ಅವರ ಆಧಾರ್‌ ಕಾರ್ಡ್‌ ಪಡೆದುಕೊಳ್ಳುತ್ತಿದ್ದು, ಅವರ ಹೆಸರಿನಲ್ಲಿ ಸಿಮ್‌ ಕಾರ್ಡ್‌ಗಳನ್ನು ಖರೀದಿಸುತ್ತಿದ್ದ. ಬಳಿಕ ಸೆಕೆಂಡ್‌ ಹ್ಯಾಂಡ್‌ ಮೊಬೈಲ್‌ಗಳನ್ನು ಖರೀದಿಸಿ ವಂಚನೆ ಎಸಗುತ್ತಿದ್ದ ಎಂಬುದು ಗೊತ್ತಾಗಿದೆ. ಇನ್ನು ಒಎಲ್‌ಎಕ್ಸ್‌ ಆ್ಯಪ್‌ನಲ್ಲಿ ಕಾರು, ಬೈಕ್‌ಗಳ ಮಾರುವ ಜಾಹಿರಾತು ಹಾಕುವವರನ್ನು ಸಂಪರ್ಕಿಸಿ, ತಾನೂ ವಾಹನ ಮಾರಾಟ ಡೀಲರ್‌ ಆಗಿದ್ದು, ಉತ್ತಮ ಬೆಲೆಗೆ ಮಾರಾಟ ಮಾಡಿಸುತ್ತೇನೆ ಎಂದು ನಂಬಿಸಿ, ವಾಹನ ದಾಖಲೆಗಳನ್ನು ಪಡೆದುಕೊಂಡು ಮುಂಗಡ ಹಣ ಕೊಡುತ್ತಿದ್ದ. ಅಲ್ಲದೆ, ಆ್ಯಪ್‌ನಲ್ಲಿ ಹಾಕಿರುವ ಜಾಹೀರಾತು ಡೀಲಿಟ್‌ ಮಾಡಿಸುತ್ತಿದ್ದ. ಅನಂತರ ಅದೇ ಮಾಲೀಕರ ಹೆಸರಿನಲ್ಲಿ ಒಎಲ್‌ಎಕ್ಸ್‌ನಲ್ಲಿ ನಕಲಿ ಖಾತೆ ತೆರೆಯುತ್ತಿದ್ದ. ಅದನ್ನು ಕಂಡ ಗ್ರಾಹಕರು ಆರೋಪಿಯನ್ನು ಸಂಪರ್ಕಿಸಿದಾಗ ತುರ್ತು ಕಾರಣಕ್ಕೆ ಕಡಿಮೆ ಮೊತ್ತಕ್ಕೆ ಮಾರಾಟ ಮಾಡುತ್ತಿದ್ದೇನೆ ಎಂದು ಹಣ ಪಡೆದು, ಫಾರಂ ನಂ 29,30 ತರುವುದಾಗಿ ಹೇಳಿ ಗಮನ ಬೇರೆಡೆ ಹಣದ ಸಮೇತ ಪರಾರಿಯಾಗುತ್ತಿದ್ದ.

ಇದನ್ನೂ ಓದಿ:ಬಸ್‌ ಗಳನ್ನು ಸುಡುವ ಜನರು ಸಶಸ್ತ್ರ ಪಡೆಗಳಿಗೆ ಯೋಗ್ಯರಲ್ಲ: ಮಾಜಿ ಸೇನಾ ಮುಖ್ಯಸ್ಥ

ಈತನ ವಿಚಾರಣೆಯಲ್ಲಿ ಇದೇ ರೀತಿ ಒಎಲ್‌ಎಕ್ಸ್‌ ಗ್ರಾಹಕರನ್ನು ಈ ಹಿಂದೆಯೂ ಹತ್ತಾರು ಬಾರಿ ವಂಚಿಸಿದ್ದಾನೆ ಎಂಬುದು ಗೊತ್ತಾಗಿದೆ. ಆರೋಪಿಯ ಬಂಧನದಿಂದ ವಿದ್ಯಾರಣ್ಯಪುರ, ಜಯನಗರ, ಮಹದೇಶ್ವರ, ಕೋಣನಕುಂಟೆ, ಬೇಗೂರು, ರಾಜರಾಜೇಶ್ವರಿನಗರ, ಹೆಬ್ಬಗೋಡಿ ಮೈಸೂರಿನ ಲಕ್ಷ್ಮೀಪುರ, ಚನ್ನರಾಯ ಪಟ್ಟಣ ಠಾಣೆಯಲ್ಲಿ ದಾಖಲಾಗಿದ್ದ 9 ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು.

ಈ ಮಧ್ಯೆ ಆರೋಪಿ ಈ ರೀತಿಯ ವಂಚಿಸಿದ ವಾಹನಗಳಲ್ಲಿ ಕಳ್ಳತನ, ದರೋಡೆ ಕೂಡ ಮಾಡಿದ್ದಾನೆ. ವಂಚಿಸಿದ ಹಣದಲ್ಲಿ ಕಾರುಗಳು ಹಾಗೂ ಲಕ್ಷಾಂತರ ರೂ. ಮೌಲ್ಯದ ಬೈಕ್‌ಗಳನ್ನು ಖರೀದಿಸಿದ್ದಾನೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.